ತಮಿಳುನಾಡು-ಆಂಧ್ರಪ್ರದೇಶದ ಕಡಲ ತೀರದಲ್ಲಿ ಚಂಡಮಾರುತ ಎದ್ದಿರುವ ಕಾರಣ ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ(BayOFBengal) ಮಾಂಡೌಸ್ ಚೆಂಡಮಾರುತವು ಉತ್ತರ ತಮಿಳುನಾಡು, ಪಾಂಡಿಚೆರಿ, ಆಂಧ್ರಪ್ರದೇಶದ ಶ್ರೀಹರಿಕೋಟಾದ ಕಡಲ ತೀರಗಳಲ್ಲಿ ಚೆಂಡಮಾರುತ ಹಾದು ಹೋಗಲಿದೆ ಎಂದು ಹೇಳಲಾಗಿದೆ.

ಚೆಂಡಮಾರುತದ ಪರಿಣಾಮ ಡಿಸೆಂಬರ್ 12ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದ್ದು ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು IMD ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ 11 ಮತ್ತು 12ರಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು ಜಿಲ್ಲೆಗಳಾದ ಚಿಕ್ಕಮಗಳೂರು, ಕೋಲಾರ, ಮೈಸೂರು, ತುಮಕೂರು, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.












