ಕಾರ್ ಟೈರ್ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು- ಮಂಗಳೂರು ಹೆದ್ದಾರಿಯ ತಿಟ್ಟನಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಇನ್ನೋವಾ ಕಾರಿನಲ್ಲಿದ್ದ ಹಾಸನ ಮೂಲದ ಶ್ರೀನಿವಾಸಮೂರ್ತಿ(74), ಜಯಂತಿ(60), ಪ್ರಭಾಕರ್ (75) ಹಾಗೂ ತಮಿಳುನಾಡು ಮೂಲದ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಶ್ವೇಶ್ವರ ಭಟ್(50), ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಅಚಲ್, ಗೌತಮ್, ಕೇವಿನ್, ಸರ್ವೇಶ್ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಇನ್ನು ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು, ರಸ್ತೆಯ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಹಾಸನ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.