ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ನಾರಾಯಣ ಗೌಡ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿ ಅಧಿಕಾರಕ್ಕೆ ಬರಲಿದೆ ಗುಜರಾತ್ನಂತೆ ಕರ್ನಾಟಕದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಹಿಮಾಚಲಪ್ರದೇಶದಲ್ಲಿ ಕೆಲವೊಂದು ಕಾರಣಗಳಿಂದ ಸೋಲಾಗಿದೆ ಸ್ಥಳೀಯ ಕಾರಣಗಳಿಂದ ಅಲ್ಲಿ ಬಿಜೆಪಿಗೆ ಸೋಲಾಗಿದೆ ಮುಂಬರುವ ವಿಧಾಸಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ಜನಸಂಕಲ್ಪ ಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದಾರೆ ಮುಂಬರುವ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಮತ್ತಷ್ಟು ನಾಯಕರು ಬಿಜೆಪಿಗೆ ಸೇರಲಿದ್ದಾರೆ ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಈಗ ಹೇಳುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶಾಸಕರು ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆ ಆಗಲಿದ್ದಾರೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ ನಾವು ಹದಿನೇಳು ಮಂದಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಬಿಜೆಪಿ ಸೇರ್ಪಡೆ ಆದ ಬಳಿಕ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ. ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಬಿಜೆಪಿ ತೊರೆಯುವುದಿಲ್ಲ ಬಿಜೆಪಿಯಲ್ಲೇ ಮುಂದುವರೆಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ರೌಡಿಶೀಟರ್ಗಳು ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿ ಗೂಂಡಾಗಳನ್ನು ಹುಟ್ಟು ಹಾಕಿದ್ದು ಯಾರು ಅವರನ್ನ ಹುಟ್ಟು ಹಾಕಿದ್ದೇ ಕಾಂಗ್ರೆಸ್ ಕಾಂಗ್ರೆಸ್ ನಲ್ಲಿ ಎಷ್ಟು ಜನ ಗೂಂಡಾಗಳಿಲ್ಲ ಹೇಳಿ, ಅವರನ್ನು ಏಕೆ ಓಡಿಸಿಲ್ಲ ಅಲ್ಲಿ ಟ್ರೈನಿಂಗ್ ಕೊಟ್ಟು ಯಾವಾಗಲೂ ಗುಂಡಾಗಳೇ ಆಗಿರ್ತಾರೆ ಎನ್ನೋದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸೇರ್ಪಡೆ ಆಗುವವರನ್ನು ರೌಡಿ ಶೀಟರ್ ಎಂದು ಹೇಳುತ್ತಿದ್ದಾರೆ ಅವರಿಗೆ ಹೊಟ್ಟೆ ಉರಿ, ಅಲ್ಲಿದ್ದವರು ಬಿಜೆಪಿ ಸೇರುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಈ ರೀತಿ ಹೇಳ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಸೇರ್ಪಡೆಗೆ ಮುಂದಾಗಿರುವವರು ಅವರ ಪಕ್ಷದಲ್ಲಿ ಇರುವವರೆಗೂ ರೌಡಿಶೀಟರ್ ಗಳಾಗಿರಲಿಲ್ಲವೇ ರೌಡಿಶೀಟರ್ ಗಳಿಗೆ ಮನಿ ಫಂಡ್ ಮಾಡುತ್ತಿದ್ದವರು ಯಾರು ಬಿಜೆಪಿಯಲ್ಲಿ ಇರುವವರು ಪುಣ್ಯಾತ್ಮರು, ವಿದ್ಯಾವಂತರು, ತ್ಯಾಗಿಗಳು ಆರ್ಎಸ್ಎಸ್ ಹಿನ್ನೆಲೆಯುಳ್ಳವರು. ಕುಡ್ಲು ಮಚ್ಚು ಹಿಡಿದಿರುವವರು ಬಿಜೆಪಿಯಲ್ಲಿಲ್ಲ ಕುಡ್ಲು ಮಚ್ಚು ಹಿಡಿಯುವವರು ಯಾವ ಪಕ್ಷದಲ್ಲಿದ್ದಾರೆಂದು ಎಲ್ಲರಿಗೂ ಗೊತ್ತಿದೆ ಅವರು ಎಲ್ಲಿದ್ದಾರೆಂಬುದು ಎಲ್ಲರಿಗೂ ಗೊತ್ತು ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ.