ಕಳೆದ ವರ್ಷ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಈಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂದೇಶ್ ಬಿಜೆಪಿಯವರು ನನನ್ನು ಪಕ್ಷಕ್ಕೆ ಸೇರಿಸಿಕೊಂಡು ಮೋಸ ಮಾಡಿದ್ದರೂ ಅನ್ಯಾಯ ಮಾಡುವುದರಲ್ಲಿ ಅಕ್ರಮ ಎಸಗುವುದರಲ್ಲಿ ಬಿಜೆಪಿಗರು ನಿಸ್ಸೀಮರು. ನಾನು ಕಳೆದ ಕೆಲವು ದಿನಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ ಎಂದು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ಸೇರುವ ಬಗ್ಗೆ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಚರ್ಚಿಸಿದ್ದೇನೆ ಕಾಂಗ್ರೆಸ್ ಸೇರ್ಪಡೆ ಕುರಿತು ಹೇಳಿದ್ದಾರೆ. ಹೆಚ್.ವಿಶ್ವನಾಥ್‌ಗೂ ಅನ್ಯಾಯ ಮಾಡಿದ್ದರೂ ಪಕ್ಷವನ್ನ ಅಧಿಕಾರಕ್ಕೆ ತಂದ ಯಡಿಯೂರಪ್ಪರನ್ನ ಮೂಲೆಗುಂಪು ಮಾಡಿದ್ದಾರೆ ಈಗ ಅವರ ಪುತ್ರ ವಿಜಯೇಂದ್ರರನ್ನು ವರುಣಾಗೆ ತಂದು ಮುಗಿಸಲು ಹೊರಟ್ಟಿದ್ದಾರೆ ಎಂದು ಹೇಳಿದ್ದಾರೆ.
ವಿಜಯೇಂದ್ರಗೆ ರಾಜಕೀಯದಲ್ಲಿ ಒಳ್ಳೆಯ ಭವಿಷ್ಯವಿದೆ ಅವರು ಶಿಕಾರಿಪುರದಿಂದಲ್ಲೇ ಸ್ಪರ್ದಿಸಿದ್ದರೆ ಒಳ್ಳೆಯದ್ದು ಮುಂದಿನ ದಿನಗಳಲ್ಲಿ ಬಿಜೆಪಿಯ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.






