ಈ ವೇಳೆ ಗೃಹ ಸಚಿವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗೆ ಅವಕಾಶ ನೀಡಿದರೆ ಅದರ ಬಗ್ಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿ ನಾನು ಎಲ್ಲಾ ಸಿದ್ಧತೆ ನಡೆಸಿಯೇ ತೆರಳುತ್ತೇನೆ ಎಂದು ಹೇಳಿದರು.
ಮೈಸೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರ ಎದುರು ನಮ್ಮ ನಿಲುವನ್ನ ಪ್ರಕಟಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳ ಭೇಟಿಗೆ ಕೇಂದ್ರ ಗೃಹ ಸಚಿವರು ಆಹ್ವಾನ ನೀಡಿದ್ದಾರೆ. ಈ ವೇಳೆ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಅಲ್ಲದೇ ಪ್ರಕರಣ ಕುರಿತ ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನ ಗೃಹ ಸಚಿವರ ಮುಂದಿಡುತ್ತೇನೆ ಎಂದರು.

ಈ ವೇಳೆ ಗೃಹ ಸಚಿವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗೆ ಅವಕಾಶ ನೀಡಿದರೆ ಅದರ ಬಗ್ಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿ ನಾನು ಎಲ್ಲಾ ಸಿದ್ಧತೆ ನಡೆಸಿಯೇ ತೆರಳುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿದ ಅವರು, ಚಾಮರಾಜನಗರ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ, ಸಿಎಂ ಆದ ಬಳಿಕ ಮೂರು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದೇನೆ. ರಾಜ್ಯದ 31ಜಿಲ್ಲೆಗಳ ಪೈಕಿ ಚಾಮರಾಜನಗರ ಸಹ ಒಂದು ವಿಶೇಷ ಐತಿಹಾಸಿಕ ಜಿಲ್ಲೆಯಾಗಿದ್ದು, ಈ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಅಲ್ಲದೇ ನನ್ನ ತಲೆಯಲ್ಲಿ ಯಾವ ಮೂಢನಂಬಿಕೆ ಇಲ್ಲ. ಜಿಲ್ಲೆಯ ಅಭಿವೃದ್ಧಿ ಪಡಿಸಬೇಕು ಎಂಬುದಷ್ಟೇ ನನ್ನ ಉದ್ದೇಶ ಎಂದು ತಿಳಿಸಿದರು.