ಕಳೆದ ಕೆಲವು ದಿನಗಳಿಂದ ಬಾಲಿವುಡ್ ಚಿತ್ರಗಳಿಗೆ ಬಿಡುಗಡೆಗೂ ಮುನ್ನ ಸಾನಾಜಿಕ ಜಾಲತಾಣಗಳಲ್ಲಿ #Boycott ಟ್ರೆಂಡ್ ಜೋರಾಗಿ ನಡೆಯುತ್ತಿದ್ದು ಇದೀಗ ಈ ಬಿಸಿ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ನಟನೆಯ ಪಠಾಣ್ ಚಿತ್ರಕ್ಕೂ ತಟ್ಟಿದೆ.
ಇತ್ತೀಚಿಗೆ ಬಿಡುಗಡೆಯಾಗಿದ್ದ ಚಿತ್ರದ ಬೇಷರಮ್ ರಂಗ್ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಮೈ ಚಳಿ ಬಿಟ್ಟು ಕುಣಿದಿದ್ದರು ಇದೀಗ ಈ ಹಾಡಿಗೆ ಹಿಂದೂ ಪಟ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದದ್ದು ಚಿತ್ರವನ್ನ Boycott ಮಾಡುವಂತೆ ಕರೆ ನೀಡಿವೆ.
ಹಾಡಿನ ಕೊನೆಯಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿಂದೂ ಸಂಘಟನೆಯ ಸದಸ್ಯರು ಇದು ಹಿಂದೂ ಸಂಸ್ಕೃತಿಗೆ ವಿರುದ್ದವಾದದ್ದು ಎಂದು ಕಿಡಿಕಾರಿದ್ದರು ಮತ್ತು ಚಿತ್ರವನ್ನ ಬಹಿಷ್ಕರಿಸುವಂತೆ ಕರೆ ನೀಡಿದ್ದವು.
ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಬಹು ಭಾಷಾ ನಟ ಪ್ರಕಾಶ್ ರಾಜ್ ಅಂಧಭಕ್ತರನ್ನ ನಾವು ಎಲ್ಲಿಯವರೆಗೆ ಸಹಿಸಿಕೊಳ್ಳಬೇಕು ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಇನ್ನು ಘಗಟನೆ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಇದು ಖಂಡನಾರ್ಹ ಮತ್ತು ಕೆಲವುಯ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದು ಆಗ್ರಹಿಸಿದ್ದರು.






