ಇತ್ತೀಚಿಗೆ ರೌಡಿಶೀಟರ್ಗಳ ಪರೇಡ್ ನಡೆಸಿ ರೌಡಿಗಳ ಚಳಿ ಬಿಡಿಸುವ ಮೂಲಕ ಸುದ್ದಿಯಲ್ಲಿದ್ದ ಮೈಸೂರು ಪೊಲೀಸರು ಈಗ ಮತ್ತೆ ಸುದ್ದಿಯಲ್ಲಿದ್ದಾರೆ.
ಕುಖ್ಯಾತ ರೌಡಿಶೀಟರ್ ಮನೋಜ್ ಕುಮಾರ್ ಅಲಿಯಾಸ್ RX ಮನುನನ್ನು ಗಡಿಪಾರು ಮಾಡುವ ಮೂಲಕ ಜಿಲ್ಲೆಯಲ್ಲಿರುವ ರೌಡಿಶೀಟರ್ಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಮತ್ತು ವಿವಿಧ ಠಾಣೆಗಳಲ್ಲಿ ಈತನ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳು ಇರುವ ಕಾರಣ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಪ್ರದೀಪ್ ಗುಂಟಿರವರ ಆದೇಶದ ಮೇರೆಗೆ ನರಸಿಂಹರಾಜ ಠಾಣೆ ಪೊಲೀಸರು ಒಂದು ತಿಂಗಳ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
