ಹಾಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಿಂದ ದೂರ ಉಳಿಯುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಈ ಕುರಿತು ಮಾತನಾಡಿದ ಈಶ್ವರಪ್ಪ ಸಚಿವ ಸಂಪುಟಕ್ಕೆ ನನ್ನನು ಸೇರಿಸಿಕೊಳ್ಳದಿರುವುದಕ್ಕೆ ಅಭಿಮಾನಿಗಳು ಹಾಗೂ ನನಗೂ ಬೇಸರವಾಗಿದೆ ಆದ್ದರಿಂದ ಬೆಳಗಾವಿ ವಿಧಾನಮಂಡಲದ ಅಧಿವೇಶನದಿಂದ ದೂರ ಉಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಜನರು ನನಗೆ ಕರೆ ಮಾಡಿ ನಿಮ್ಮನ್ನು ಯಾಕೆ ಸಂಪುಟಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳುತ್ತಿದ್ದಾರೆ ಇದರಿಂದ ನನ್ನಗೆ ತೀವ್ರ ಅಪಮಾನ ಆಗಿದೆ ಈ ವಿಚಾರವನ್ನ ಅರ್ಥ ಮಾಡಿಸಲು ಸೌಜನ್ಯದ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಪರೋಕ್ಷವಾಗಿ ತಮ್ಮ ನಾಯಕರ ವಿರುದ್ದ ಕಿಡಿಕಾರಿದ್ದಾರೆ.
ಬೆಳಗಾವಿ ಈ ವಿಚಾರವಾಗಿ ಸಭಾಧ್ಯಕ್ಷರಿಂದ ಅನುಮತಿ ಪಡೆಯಲು ಹೋಗುತ್ತಿದ್ದೇನೆ ಇವತ್ತಲ್ಲ ನಾಳೆ ನಿಮ್ಮನ್ನ ಸಚಿವರನ್ನಾಗಿ ಮಾಡುತ್ತೇವೆ ಎಂದು ಸಿಎಂ ಹೇಳುತ್ತಿದ್ದಾರೆ ಆದರೆ ಯಾಕೆ ಮಾಡಿಲ್ಲ ಎಂಬುದು ಇನ್ನು ಅರ್ಥವಾಗಿಲ್ಲ ಎಂದು ಕುಟುಕಿದ್ದಾರೆ.