ರಕ್ಷಣಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ಿ-ತೋಯ್ಬಾ(LET) ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿರುವ ಘಟನೆ ಜಮ್ಮು-ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಝೈನ್‌ಪೋರಾದ ಮುಂಜ್ ಮಾರ್ಗ್‌ನಲ್ಲಿ ನಡೆದಿದೆ.
ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ ವೇಳೆ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಜಮ್ಮು-ಕಾಶ್ಮೀರ ಪೊಲೀಸರು ಮೂವರು ಉಗ್ರರನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದೆ.









