ಒಂದೊಮ್ಮೆ ಕ್ಷಮೆ ಕೇಳದಿದ್ದರೆ ಸಿ.ಟಿ. ರವಿ ರಾಜ್ಯದ ಯಾವುದೇ ಭಾಗಕ್ಕೆ ಭೇಟಿ ನೀಡಿದರೂ ಸಗಣಿ ಸುರಿಯುವಂತೆ ಕಾಂಗ್ರೆಸ್ ಕಾರ್ಯಕರ್ಯರಿಗೆ ಕರೆ ಕೊಡುತ್ತೇವೆ ಎಂದು ಮಾಜಿ ಶಾಸಕ ಎಂ.ಕೆ. ಸೋಮಶೇಖರ್
ಮೈಸೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.
ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರು, ಶಾಸಕ ಸಿ.ಟಿ. ರವಿ ಅವರ ಫ್ಲೆಕ್ಸ್‌ಗೆ ಮದ್ಯವನ್ನು ಸುರಿಯುವ ಜೊತೆಗೆ, ಸಗಣಿ ನೀರು ಸುರಿಯುತ್ತಾ, ವಿವಿಧ ಘೋಷಣೆಗಳನ್ನ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಸಿ.ಟಿ. ರವಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಒಂದೊಮ್ಮೆ ಕ್ಷಮೆ ಕೇಳದಿದ್ದರೆ ಸಿ.ಟಿ. ರವಿ ರಾಜ್ಯದ ಯಾವುದೇ ಭಾಗಕ್ಕೆ ಭೇಟಿ ನೀಡಿದರೂ ಸಗಣಿ ಸುರಿಯುವಂತೆ ಕಾಂಗ್ರೆಸ್ ಕಾರ್ಯಕರ್ಯರಿಗೆ ಕರೆ ಕೊಡುತ್ತೇವೆ ಎಂದು ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಎಚ್ಚರಿಸಿದರು.