ಮೈಸೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೊಸ ತಳಿ BF.7 ಸೋಂಕು ಹೆಚ್ಚಳವಾಗಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಇದರಿಂದಾಗಿ ಈಗಾಗಲೇ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾಸ್ಕ್ ಕಡ್ಡಾಯಗೊಳಿಸಿದ್ದಾರೆ.
ಹೀಗಾಗಿ ಹೊಸ ವರ್ಷಕ್ಕೆ ಬ್ರೇಕ್ ಬೀಳುತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೀಗ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ ಎಂದು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ.
ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅನುಚಿತವಾಗಿ ವರ್ತಿಸಬಾರದು. ರಸ್ತೆಯ್ಲಲಿ ಗುಂಪು ಗುಂಪಾಗಿ ಸೇರಿ ಗಲಾಟೆ ಮಾಡಬಾರದು. ಕಾನೂನು ನಿಯಮ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದರು.ಈಗಾಗಲೇ ರಾತ್ರಿ ಒಂದು ಗಂಟೆ ವರೆಗೆ ಪಾರ್ಟಿ ಅವಧಿ ವಿಸ್ತಿಸುವಂತೆ ಮನವಿ ಬಂದಿದೆ. ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮ ಜಾರಿಗೊಳಿಸುತ್ತೇವೆ. ಬಹುತೇಕ ಇನ್ನೇರೆಡು ದಿನಗಳಲ್ಲಿ ಮಾರ್ಗಸೂಚಿ ಬರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.