ಮೈಸೂರು: ಮೈಸೂರಿನಲ್ಲಿ ಸಕ್ರಿಯವಾಗಿರುವ ರೌಡಿಗಳನ್ನು ಗಡಿಪಾರಿ ಮಾಡಲು ಮುಂದಾಗಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಭಾನೋತ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಈಗಾಗಲೇ ಇಬ್ಬರು ರೌಡಿಗಳನ್ನ ಗಡಿಪಾರು ಮಾಡಿದ್ದೇವೆ. ಅಲ್ಲದೇ ಇನ್ನೂ ಐದು ಜನರನ್ನು ಸಹ ಗಡಿಪಾರು ಮಾಡಲು ಪರಿಶೀಲಿಸುತ್ತಿದ್ದೇವೆ ಎಂದರು.
ಇದೇ ವೇಳೆ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ ಹೆಸರು ರೌಡಿಶೀಟರ್ ಎಂಬ ವಿಷಯದ ಕುರಿತು ಸ್ಪಷ್ಟನೆ ನೀಡಿದ ಅವರು, ಕಿರಣ್ ಗೌಡ ಹೆಸರು ರೌಡಿಶೀಟರ್ ಪಟ್ಟಿಯಲ್ಲಿಲ್ಲ. ಆದರೆ ಆತನ ಮೇಲೆ ಬೇರೆ ಒಂದೆರಡು ಕೇಸ್ ಗಳಿವೆ ಅಷ್ಟೇ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಇನ್ನಿತರರು ಕಿರಣ್ ಗೌಡ ರೌಡಿಶೀಟರ್ ಎಂದು ಆರೋಪಿಸಿದ್ದರು.