ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
63 ವರ್ಷದ ಸೀತಾರಾಮನ್ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ದಿನನಿತ್ಯದ ತಪಾಸಣೆಗಾಗಿ ಸಚಿವರನ್ನು ಮಧ್ಯಾಹ್ನ 12 ಗಂಟೆಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇನ್ನು ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಕೇಂದ್ರ ಬಜೆಟ್ ನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.ಇದರ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.





