ಕಳೆದ ಕೆಲವು ದಿನಗಳ ಹಿಂದೆ ರಾಜ್ಯಾದ್ಯಂತ ತೀವ್ರ ಸುದ್ದಿ ಮಾಡಿದ್ದ ಅಕ್ರಮ ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಹಲವರ ವೋಟರ್ ಐಡಿಗಳನ್ನ ಡಿಲೀಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಇದೀಗ ಈ ಆರೋಪದ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದು ಇದರ ನೇತೃತ್ವವನ್ನ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ವಹಿಸಿದ್ದಾರೆ.

ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡುತ್ತಿರುವ ಜಿಲ್ಲಾಧಿಕಾರಿ ಸ್ವತಹ ತಾವೇ ಮುಂದೆ ನಿಂತು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಿದ್ದಾರೆ.
ಈ ವೇಳೆ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮೌಖಿಕವಾಗಿ ದೂರು ನೀಡಿದ್ದಾರೆ ಮತ್ತು ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ರಮೇಶ್ ಭರವಸೆ ನೀಡಿದ್ದಾರೆ.







