ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಗಡಿ ವಿವಾದ ಮತ್ತಷ್ಟು ಕಾವು ಪಡೆಯತೊಡಗಿದೆ. ಕರ್ನಾಟಕದ ಗಡಿಯಲ್ಲಿನ 865 ಹಳ್ಳಿಗಳ ಒಂದಿಂಚೂ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸವಾಲು ಹಾಕಿದ್ದಾರೆ.
ಈ ಕುರಿತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, “ಕರ್ನಾಟಕ ನಮಗೆ ಸವಾಲು ಹಾಕಬಾರದು. ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸೇರಿದಂತೆ 865 ಹಳ್ಳಿಗಳ ಒಂದು ಇಂಚು ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿ ನಾವು ಕಾನೂನು ರೀತಿಯಲ್ಲಿ ಏನು ಬೇಕಾದರೂ ಮಾಡಲು ಸಿದ್ಧ. ಗಡಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಒಂದಿಂಚೂ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂದು ಬೆಳಗಾವಿಯಲ್ಲಿ ಹೇಳಿದ ಬಳಿಕ, ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿ ಮಹಾರಾಷ್ಟ್ರದ ಅಧಿವೇಶನದಲ್ಲಿ ಈ ಮಾತು ಹೇಳಿದ್ದಾರೆ.
Shivaraj Kumar: ʼಏಳುಮಲೆʼ ಟೈಟಲ್ ಟೀಸರ್ ರಿಲೀಸ್.. ತರುಣ್ ಸುಧೀರ್ ಸಿನಿಮಾಗೆ ಶಿವಣ್ಣ-ಪ್ರೇಮ್ ಸಾಥ್
ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್ ಸಾಥ್..ʼಏಳುಮಲೆʼ ಟೈಟಲ್ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...
Read moreDetails