• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್‌ ನಿರ್ವಹಣೆಯ ಸಿದ್ಧತೆಗಾಗಿ ಮಾಕ್‌ ಡ್ರಿಲ್‌:ಸಚಿವ ಡಾ.ಕೆ.ಸುಧಾಕರ್‌

Any Mind by Any Mind
December 29, 2022
in Top Story, ಕರ್ನಾಟಕ, ರಾಜಕೀಯ
0
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್‌ ನಿರ್ವಹಣೆಯ ಸಿದ್ಧತೆಗಾಗಿ ಮಾಕ್‌ ಡ್ರಿಲ್‌:ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ಎಂಟೂವರೆ ಲಕ್ಷ ಡೋಸ್‌ ಲಸಿಕೆ ಇದೆ, ಮೂರನೇ ಡೋಸ್‌ ಪಡೆಯಿರಿ: ಸಚಿವರಿಂದ ಮನವಿ ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಯಾವುದೇ ಚಿಂತನೆ ಇಲ್ಲ

ADVERTISEMENT

ಕೋವಿಡ್‌ ಹಿನ್ನೆಲೆಯಲ್ಲಿ, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೈಗೊಂಡ ʼಮಾಕ್‌ ಡ್ರಿಲ್‌ʼ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಪರಿಶೀಲನೆ ನಡೆಸಿದರು. ಜನರು ಸರ್ಕಾರದ ಕ್ರಮಗಳೊಂದಿಗೆ ಕೈ ಜೋಡಿಸಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು. ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್‌ ಲಸಿಕೆ ಲಭ್ಯವಿದ್ದು, ಎಲ್ಲರೂ 3 ನೇ ಡೋಸ್‌ ಪಡೆಯಬೇಕು ಎಂದು ಸಚಿವರು ಮನವಿ ಮಾಡಿದರು.

ಹುಬ್ಬಳ್ಳಿ ಮೆಡಿಕಲ್‌ ಕಾಲೇಜಿನಲ್ಲಿ ಮಾತನಾಡಿದ ಸಚಿವರು, ಕೋವಿಡ್‌ನ ಬಿಎಫ್‌ 7 ವೈರಸ್‌ ಕೂಡ ಓಮೈಕ್ರಾನ್‌ನ ಮತ್ತೊಂದು ರೂಪ. ಹೊಸ ವೈರಾಣು ವೇಗವಾಗಿ ಹರಡಿದರೂ ರೋಗ ತೀವ್ರತೆ ಇಲ್ಲ. ವಿವಿಧ ಅನಾರೋಗ್ಯಗಳಿಗೆ ಒಳಗಾದವರಲ್ಲಿ ಮಾತ್ರ ರೋಗದ ತೀವ್ರತೆ ಕಂಡುಬಂದಿದೆ ಎಂದು ಹೊರ ದೇಶಗಳಲ್ಲಿ ವರದಿಯಾಗಿದೆ. ಇದಕ್ಕಾಗಿಯೇ ಮಾರ್ಗಸೂಚಿಯಲ್ಲಿ ಅಂತಹ ಜನವರ್ಗಕ್ಕೆ ಎಚ್ಚರ ನೀಡಲಾಗಿದೆ. ವೃದ್ಧರು ಹಾಗೂ ಇತರೆ ಆರೋಗ್ಯ ಸಮಸ್ಯೆ ಇರುವವರು, ಗರ್ಭಿಣಿಯರು, ಮಕ್ಕಳು ಜನಸಂದಣಿ ಇರುವ ಪ್ರದೇಶಕ್ಕೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ. ಹಾಗೆಯೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಎಚ್ಚರ ವಹಿಸಲಾಗಿದೆ ಎಂದರು.

ಪ್ರತಿ ಆಸ್ಪತ್ರೆಗಳಲ್ಲಿ 50-60 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 200 ವೆಂಟಿಲೇಟರ್‌ಗಳು, ಪರಿಣತ ವೈದ್ಯರ ತಂಡ, ಸಿಬ್ಬಂದಿ ಇದ್ದಾರೆ. ಔಷಧಿಯ ದಾಸ್ತಾನು ಕೂಡ ಇದೆ. 40 ಕೆಎಲ್‌ನ ಎರಡು ಟ್ಯಾಂಕ್‌ಗಳಿವೆ. ಒಂದನೇ ಮತ್ತು ಎರಡನೇ ಕೋವಿಡ್‌ ಅಲೆಯ ವೇಳೆ ಕಿಮ್ಸ್‌ ಆಸ್ಪತ್ರೆ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ. ಇನ್ನು ಮುಂದೆಯೂ ಜನರಿಗೆ ಉತ್ತಮ ಸೇವೆ ನೀಡಲಿದೆ ಎಂದರು.

ಟಫ್‌ ರೂಲ್ಸ್‌ ಅಲ್ಲ, ಟಫ್‌ ಮೈಂಡ್‌ ಬೇಕು

ಸರ್ಕಾರ ಟಫ್‌ ರೂಲ್ಸ್‌ಗಳನ್ನು ಮಾಡುವ ಬದಲು ಜನರು ಟಫ್‌ ಮೈಂಡೆಡ್‌ ಆಗಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಜನರನ್ನು ರಕ್ಷಣೆ ಮಾಡಲು ಈಗಾಗಲೇ ಸರ್ಕಾರ ದೃಢಸಂಕಲ್ಪ ಮಾಡಿದೆ. ಅದೇ ರೀತಿ, ಜನರು ಕೂಡ ರೋಗವನ್ನು ಎದುರಿಸುವ ದೃಢ ಸಂಕಲ್ಪ ಮಾಡಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

ವಿದೇಶದಿಂದ ಬರುವವರನ್ನು ವಿಮಾನ ನಿಲ್ದಾಣದಲ್ಲಿ ರಾಂಡಮ್‌ ಪರೀಕ್ಷೆ ಮಾಡಲಾಗುತ್ತಿದೆ. ಎರಡು-ಮೂರು ದಿನಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದರೆ ನಿರ್ದಿಷ್ಟ ದೇಶಗಳ ಪ್ರಯಾಣಿಕರಿಗೆ ಪರೀಕ್ಷೆ ಮಾಡಲಾಗುವುದು ಎಂದರು.

ಧಾರವಾಡ ಜಿಲ್ಲಾಸ್ಪತ್ರೆಗೆ ಭೇಟಿ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಮಾತನಾಡಿದ ಸಚಿವರು, ಇಲ್ಲಿ ಆರೋಗ್ಯ ಸಿಬ್ಬಂದಿ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಿದರೂ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ನಮ್ಮ ಸಿಬ್ಬಂದಿ ಮಾಡಲಿದ್ದಾರೆ. ಕೋವಿಡ್‌ ಚಿಕಿತ್ಸೆಗೆ ಪೂರಕವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಯಾವೆಲ್ಲ ರೀತಿಯ ಕ್ರಮ ವಹಿಸಬೇಕೆಂದು ಪರಿಶೀಲಿಸಿ ಸೂಚಿಸಲಾಗುವುದು ಎಂದರು.

ಕಳೆದ ಎರಡು ವರ್ಷಗಳಿಗಾಗಿ 10 ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಈಗ ಅಂತಹ ಅಗತ್ಯ ಇಲ್ಲ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾದರೆ ತಾತ್ಕಾಲಿಕವಾಗಿ ಸಿಬ್ಬಂದಿಯನ್ನು ನೇಮಿಸಲಾಗುವುದು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅನೇಕ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದೆ. ಆದರೆ ಅವರನ್ನು ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ. ಆದರೆ ಯಾರನ್ನೂ ಕೆಲಸದಿಂದ ತೆಗೆದುಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಯಾವುದೇ ಚಟುವಟಿಕೆಗೆ ನಿರ್ಬಂಧ ವಿಧಿಸಿಲ್ಲ. ಆದರೆ ಮಾಸ್ಕ್‌ ಧರಿಸುವುದು, ಮೂರನೇ ಡೋಸ್‌ ಪಡೆಯುವುದು, ಒಳಾಂಗಣ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವುದು ಮೊದಲಾದ ಕ್ರಮಗಳಿಗೆ ಸೂಚನೆ ನೀಡಲಾಗಿದೆ. ಈಗ ದೇಶದಲ್ಲಿ ಆರ್ಥಿಕ ಪುನಶ್ಚೇತನ ಆಗುತ್ತಿದೆ. ಆದ್ದರಿಂದ ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಯಾವುದೇ ಚಿಂತನೆ ಇಲ್ಲ. ಜೀವವೂ ಮುಖ್ಯ ಹಾಗೂ ಜೀವನವೂ ಮುಖ್ಯವಾಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದರು.

ಲಸಿಕೆ ಕೊರತೆ ಇಲ್ಲ

ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್‌ ಕೋವಿಡ್‌ ಲಸಿಕೆ ಲಭ್ಯವಿದೆ. ಇನ್ನೂ 20-25 ಲಕ್ಷ ಡೋಸ್‌ ತರಿಸಲಾಗುವುದು. ಕೇಂದ್ರ ಸರ್ಕಾರ ಲಸಿಕೆ ನೀಡಲು ತಯಾರಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಲಸಿಕಾಕರಣದ ಪ್ರಮಾಣ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಮಹಾರಾಷ್ಟ್ರದವರು ನಮ್ಮ ಸೋದರರು

ಮಹಾರಾಷ್ಟ್ರದ ಜನರು ನಮ್ಮ ಸಹೋದರ, ಸಹೋದರಿಯರಾಗಿದ್ದಾರೆ. ಮಹಾಜನ್‌ ವರದಿ ಕೂಡ ಎಲ್ಲವನ್ನೂ ಸ್ಪಷ್ಪಡಿಸಿದೆ. ನಾವೆಲ್ಲರೂ ಮೊದಲು ಭಾರತೀಯರು, ನಂತರ ವಿವಿಧ ರಾಜ್ಯದವರು. ನೆರೆಯ ರಾಜ್ಯಗಳ ಜನರು ಈಗ ಪ್ರೀತಿ, ವಿಶ್ವಾಸದಿಂದ ಇರುವಾಗ ರಾಜಕೀಯ ಹೇಳಿಕೆಯಿಂದ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಮಹಾರಾಷ್ಟ್ರದ ಕೆಲ ರಾಜಕೀಯ ಮುಖಂಡರ ಹೇಳಿಕೆಯಿಂದ ಜನರ ನಡುವೆ ಬಾಂಧವ್ಯ ಹಾಳಾಗುವ ಅಪಾಯವಿದೆ. ಇಂತಹ ಹೇಳಿಕೆಗೆ ಕಾನೂನಿನ ಮಾನ್ಯತೆ ಇಲ್ಲ. ಕರ್ನಾಟಕವು ಯಾವುದೇ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ ಎಂದು ಸಚಿವರು ಹೇಳಿದರು.

ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕಾಂಗ್ರೆಸ್‌ ನಾಯಕರಾದ ಡಿ.ಕೆ.ಶಿವಕುಮಾರ್‌ ಅವರು ಬಹಳ ಜ್ಯೋತಿಷ್ಯ ಶಾಸ್ತ್ರ ಕೇಳುತ್ತಾರೆ. ಆದರೆ ಈಗ ಅವರೇ ಭವಿಷ್ಯ ನುಡಿಯುತ್ತಿದ್ದಾರೆ. ರಾಹುಲ್‌ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ಹಾಗೆಯೇ, ವಿರೋಧ ಪಕ್ಷದ ನಾಯಕರೂ ಪಾದಯಾತ್ರೆ ಮಾಡಲಿ, ನಮಗೇನೂ ಅಭ್ಯಂತರವಿಲ್ಲ. 5 ವರ್ಷ ಆಡಳಿತ ಮಾಡಿದವರು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದವರು ಮಹಾದಾಯಿ ಯೋಜನೆಗಾಗಿ ಏನು ಮಾಡಿದ್ದಾರೆಂದು ಸ್ಪಷ್ಟನೆ ನೀಡಲಿ ಎಂದರು.

Tags: Covid 19ಕೋವಿಡ್-19ಡಾ.ಕೆ.ಸುಧಾಕರ್‌
Previous Post

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಅಭಿಪ್ರಾಯ ಸಂಗ್ರಹ

Next Post

ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಗಿಫ್ಟ್

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಗಿಫ್ಟ್

ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಗಿಫ್ಟ್

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!