ಚಿಕ್ಕಮಗಳೂರು;ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ 4 ತಿಂಗಳ ಮಗು ಮೃತಪಟ್ಟ ಆರೋಪ ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಕೇಳಿ ಬಂದಿದೆ.
ಹಾಸನದ ಬೇಲೂರು ಸಮೀಪದ ಸೂರಾಪುರ ಗ್ರಾಮದ ಗೋಪಾಲ್ ಹಾಗೂ ಮೀನಾಕ್ಷಿ ದಂಪತಿಯ 4 ತಿಂಗಳ ಮಗು ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದೆ.
ವೈದ್ಯರು ಮತ್ತು ನರ್ಸ್ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
4 ತಿಂಗಳ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಪೋಷಕರು ಮಗುವನ್ನು ಚಿಕ್ಕಮಗಳೂರು ನಗರದ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆ ಬಳಿಕ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ಸಿಬ್ಬಂದಿಗಳ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ











