ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಮೋದಿ (100) ವಿಧಿವಶರಾಗಿದ್ದಾರೆ.
ಬೆಳಗಿನ ಜಾವ 3:00 ಘಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.
ತೀವ್ರ ಅನಾರೋಗ್ಯದ ಹಿನ್ನಲೆ ಅವರನ್ನು ಇತ್ತೀಚಿಗೆ ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದಿನ ಯು.ಎಸ್.ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೀರಾ ಬೆನ್ ಅವರ ನಿಧನಕ್ಕೆ ರಾಜಕೀಯ, ಸಿನಿಮಾ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.








