• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಮಿತ್ ಶಾ ಜೀ ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ : ಹೆಚ್‌.ಡಿ.ಕೆ

ಪ್ರತಿಧ್ವನಿ by ಪ್ರತಿಧ್ವನಿ
December 31, 2022
in ಕರ್ನಾಟಕ, ರಾಜಕೀಯ
0
ಅಮಿತ್ ಶಾ ಜೀ ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ : ಹೆಚ್‌.ಡಿ.ಕೆ
Share on WhatsAppShare on FacebookShare on Telegram

ಶುಕ್ರವಾರ ಮಂಡ್ಯದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ವಿರುದ್ದ ಮುಗಿಬಿದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್‌ ಮಾಡಿರುವ ಹೆಚ್‌ಡಿಕೆ ಕೇಂದ್ರದ ಗೌರವಾನ್ವಿತ ಗೃಹ ಮಂತ್ರಿ ಅಮಿತ್ ಶಾ ಅವರು ಮಂಡ್ಯ ಜನರಿಗೆ ಮಂಕುಬೂದಿ ಎರಚಲು ವಿಫಲ ಪ್ರಯತ್ನ ನಡೆಸಿದ್ದಾರೆ. ಅವರ ಪಕ್ಷದ ಕೆಲ ನಾಯಕರು ಹೊಡೆಯುತ್ತಿರುವ ಅಪಪ್ರಚಾರದ ಜಾಗಟೆಗೆ ಡ್ರಮ್ಮು ಬಾರಿಸುವ ಕೆಲಸ ಮಾಡಿದ್ದಾರೆ. ಮಂಡ್ಯದವರನ್ನು ಮೋಸ ಮಾಡಲು ಆಗುವುದಿಲ್ಲ ಅಮಿತ್ ಶಾ ಜೀ ಎಂದು ಟಾಂಗ್‌ ಕೊಟ್ಟಿದ್ದಾರೆ.

ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಮಂಡ್ಯದಲ್ಲಿ ಎಟಿಎಂ ಬಗ್ಗೆ ಮಾತನಾಡಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಎಂದರೆ ಹೀಗೆಯೇ. ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ? ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ಭಾರತೀಯ ಜನತಾ ಪಕ್ಷದ ಎಟಿಎಂ ಆಗಿದೆಇದು ಸುಳ್ಳಾ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಮಂಡ್ಯದಲ್ಲಿ ಎಟಿಎಂ ಬಗ್ಗೆ ಮಾತನಾಡಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಎಂದರೆ ಹೀಗೆಯೇ. ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ? ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ಭಾರತೀಯ ಜನತಾ ಪಕ್ಷದ ಎಟಿಎಂ ಆಗಿದೆ. ಇದು ಸುಳ್ಳಾ?
2/7

— Janata Dal Secular (@JanataDal_S) December 30, 2022

ಯಾರಿಗೆ ಯಾವುದು ಎಟಿಎಂ? ಎನ್ನುವುದು ಕರ್ನಾಟಕಕ್ಕೆ ಗೊತ್ತು. 40% ಕಮೀಷನ್ ಯಾರ ಎಟಿಎಂಗೆ ಹೋಯಿತು? ಪಿಎಸ್ ಐ ಹಗರಣ ಯಾರ ಎಟಿಎಂ? ಕೋವಿಡ್ ಸಾವುಗಳ ಮೇಲೆ ದೋಚಿದ ಹಣ ಯಾವ ಹುಂಡಿಗೆ ಹೋಯಿತು? ಅಪರೇಷನ್ ಕಮಲಕ್ಕೆ ಯಾವ ಎಟಿಎಂನಿಂದ ಬಂತು. ಇವತ್ತು ದೇವರಾಯನ ದುರ್ಗದ ಐಬಿಯಲ್ಲಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೂ 40% ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಅಮಿತ್ ಶಾ ಸಾಹೇಬರು ಇದಕ್ಕೆ ಉತ್ತರ ಕೊಡುತ್ತಾರೆಯೇ ಎಂದು ಕಿಡಿಕಾರಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಮಾಡಿದ್ದು ಎಂದರೆ ಕಮೀಷನ್ ವಿಕಾಸ! ಶಾಸಕರ ಖರೀದಿ ವಿಕಾಸ ಬಿಜೆಪಿ ಎಂದರೆ ಎಟಿಎಂಗಳ ನ್ಯಾಷನಲ್ ಟೀಮ್. ಸತ್ಯ ಹೀಗಿದ್ದರೂ ಮಂಡ್ಯದಲ್ಲಿ ಬಂದು ಎಟಿಎಂ ಎಂದು ಟಮ್ ಟಮ್ ಹೊಡೆದರೆ ಯಾರು ನಂಬುತ್ತಾರೆ ಬಿಜೆಪಿ ನಾಯಕರೇ ಎಂದು ಟೀಕಿಸಿದ್ದಾರೆ.

ಇವತ್ತು ದೇವರಾಯನ ದುರ್ಗದ ಐಬಿಯಲ್ಲಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೂ 40% ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಅಮಿತ್ ಶಾ ಸಾಹೇಬರು ಇದಕ್ಕೆ ಉತ್ತರ ಕೊಡುತ್ತಾರೆಯೇ?
4/7

— Janata Dal Secular (@JanataDal_S) December 30, 2022

ರಾಮ ಮಂದಿರ ಕಟ್ಟಿದ್ದಿರಿ ಎನ್ನುತ್ತೀರಿ. ಇದು ಬಿಜೆಪಿಯೊಂದರ ಸಾಧನೆಯೇ? ಇದಕ್ಕೆ ಭಾರತೀಯರೆಲ್ಲರ ಕಾಣಿಕೆ ಇಲ್ಲವೇ? ನೀವೊಬ್ಬರೇ ಕ್ರೆಡಿಟ್ ಹೊಡೆದುಕೊಳ್ಳಬೇಡಿ. ಒಂದೆಡೆ ದೆವಾಲಯಗಳನ್ನು ಉದ್ಧಾರ ಮಾಡುತ್ತೇವೆ ಎನ್ನುತ್ತೀರಿ, ಇನ್ನೊಂದೆಡೆ ಅದೇ ದೇವರನ್ನು ನಾಚಿಕೆ ಇಲ್ಲದೆ ರಾಜಕೀಯಕ್ಕೆ ಬಳಸಿಕೊಳ್ಳುತ್ತೀರಿ ಎಂದು ಚಾಟಿ ಬೀಸಿದ್ದಾರೆ.

ಪಂಚರತ್ನ ರಥಯಾತ್ರೆಯ ಯಶಸ್ಸು ನಿಮ್ಮ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ನಿಮ್ಮ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದೀರಿ. ನೀವು ಮಂಡ್ಯದಲ್ಲಿ ಮುಗ್ಗರಿಸುತ್ತಿರಿ. ಅಮಿತ್ ಶಾ ಅವರೇ ಅತಿಯಾದ ಅಮಿತೋತ್ಸಾಹ ಒಳ್ಳೆಯದಲ್ಲ ಎಂದು ಎಚ್ಚರಿಸಿದ್ದಾರೆ.

ರಾಮ ಮಂದಿರ ಕಟ್ಟಿದ್ದಿರಿ ಎನ್ನುತ್ತೀರಿ. ಇದು ಬಿಜೆಪಿಯೊಂದರ ಸಾಧನೆಯೇ? ಇದಕ್ಕೆ ಭಾರತೀಯರೆಲ್ಲರ ಕಾಣಿಕೆ ಇಲ್ಲವೇ? ನೀವೊಬ್ಬರೇ ಕ್ರೆಡಿಟ್ ಹೊಡೆದುಕೊಳ್ಳಬೇಡಿ. ಒಂದೆಡೆ ದೆವಾಲಯಗಳನ್ನು ಉದ್ಧಾರ ಮಾಡುತ್ತೇವೆ ಎನ್ನುತ್ತೀರಿ, ಇನ್ನೊಂದೆಡೆ ಅದೇ ದೇವರನ್ನು ನಾಚಿಕೆ ಇಲ್ಲದೆ ರಾಜಕೀಯಕ್ಕೆ ಬಳಸಿಕೊಳ್ಳುತ್ತೀರಿ!!
6/7

— Janata Dal Secular (@JanataDal_S) December 30, 2022
Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಿಸ್ಟರ್‌ ಅಮಿತ್‌ ಶಾ ನಿಮ್ಮ ಭಂಡತನಕ್ಕೆ ಶಹಬಾಷ್‌ ಎನ್ನಲೇಬೇಕು : ಸಿದ್ದರಾಮಯ್ಯ

Next Post

ಗುಜರಾತ್‌; ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಗುಜರಾತ್‌; ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು

ಗುಜರಾತ್‌; ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada