ಇತ್ತೀಚಿನ ದಿನಗಳಲ್ಲಿ ತಮ್ಮ ನಟನೆಯ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ನಟ ಅಡಿವಿ ಶೇಷ್ ನಟನೆಯ ಗೂಢಾಚಾರಿ-2 ಚಿತ್ರದ ಫರ್ಸ್ಟ್ ಲುಕ್ ಸಿನಿರಸಿಕರ ಕ್ರೇಜ್ ಮತ್ತಷ್ಟು ಹೆಚ್ಚಿಸಿದೆ.
ಗೂಢಾಚಾರಿ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆಯನ್ನ ಬರೆದಿದ್ದ ಈ ಚಿತ್ರದ ಸೀಕ್ವೆಲ್ ಆಗಿರುವ ಗೂಢಾಚಾರಿ-2 ಚಿತ್ರದ ಪ್ರೀ ವಿಷನ್ ವಿಡಿಯೋ ಜನವರಿ 9ರಂದು ಬಿಡುಗಡೆಯಾಗಲಿದೆ.

ವಿನಯ್ ಕುಮಾರ್ ಸಿರಿಗಿನೀದಿಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.
ಫಸ್ಟ್ ಲುಕ್ ಬಿಡುಗಡೆ ಮಾಡಿರುವ ಚಿತ್ರತಂಡ ಜನವರಿ 9ರಂದು ಡೆಲ್ಲಿ ಹಾಗೂ ಮುಂಬೈನಲ್ಲಿ ಚಿತ್ರದ ಪ್ರಿ ವಿಷನ್ ವೀಡಿಯೋ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದೆ. ಮೊದಲ ಸೀಕ್ವೆಲ್ ನಲ್ಲಿದ್ದ ಕಲಾವಿದರ ಜೊತೆಗೆ ಒಂದಿಷ್ಟು ಹೊಸ ಪಾತ್ರವರ್ಗ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಕಥೆಗೆ ತಕ್ಕಂತೆ ಸಿನಿಮಾ ಮೇಕಿಂಗ್, ತಾಂತ್ರಿಕ ವರ್ಗ, ಆಕ್ಷನ್ ಸೀನ್ ಗಳು ದೊಡ್ಡ ಮಟ್ಟದಲ್ಲಿ ಮೂಡಿ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.