ಬಹುಭಾಷಾ ನಟ ಕಿಶೋರ್ ಕುಮಾರ್ರವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದ್ದು ಈ ಬಗ್ಗೆ ನಟ ತಮ್ಮ ಫೇಸ್ಬುಲ್ನಲ್ಲಿ ಬರೆದುಕೊಳ್ಳುವ ಮೂಲಕ ಆಕ್ರೋಶವನ್ನ ಹೊರಹಾಕಿದ್ದಾರೆ.
ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.
ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.
ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ.
ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ ಅದರ ಹೆಸರಲ್ಲಿ ದ್ವೇಷವೂ ಎಂದು ಬರೆದುಕೊಂಡಿದ್ದಾರೆ.