ಅವೆಂಜರ್ಸ್ ಖ್ಯಾತಿಯ ಹಾಲಿವುಡ್ ನಟ ಜರ್ಮಿ ರೆನ್ನರ್ಗೆ ರಸ್ತೆ ಅಪಘಾತವಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೊಸ ವರ್ಷಾಚರಣೆ ಪ್ರಯುಕ್ತ ನವೆಡಾಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ಹಿಮಚ್ಛಾದಿತ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಜರ್ಮಿ ರೆನ್ನರ್ನನ್ನು ಏರಲಿಫ್ಟ್ ಮಾಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.







