• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರದೀಪ್‌ ಆತ್ಮಹತ್ಯೆ; ಶಾಸಕ ಲಿಮಬಾವಳಿ ಬಂಧನಕ್ಕೆ ಎಎಪಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
January 2, 2023
in ಕರ್ನಾಟಕ, ರಾಜಕೀಯ
0
ಪ್ರದೀಪ್‌ ಆತ್ಮಹತ್ಯೆ; ಶಾಸಕ ಲಿಮಬಾವಳಿ ಬಂಧನಕ್ಕೆ ಎಎಪಿ ಆಗ್ರಹ
Share on WhatsAppShare on FacebookShare on Telegram

ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿ ಸಾಮಾಜಿಕ ಜಾಲತಾಣ ಉಸ್ತುವಾರಿ ಪ್ರದೀಪ್‌(47) ಆತ್ಮಹತ್ಯೆ ಬೆನ್ನಲ್ಲೇ ಶಾಸಕರನ್ನು ಬಂಧಿಸುವತೆ ಎಎಪಿ ಒತ್ತಾಯಿಸಿದೆ.

ADVERTISEMENT

ಈ ಕುರಿತು ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಚಿವರಾಗಿದ್ದ ಕೆ.ಎಸ್‌.ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಪೊಲೀಸರು ಅವರಿಗೆ ಕ್ಲೀನ್‌ಚಿಟ್‌ ನೀಡಿದರು. ಈಗ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಪೊಲೀಸರು ಅರವಿಂದ ಲಿಂಬಾವಳಿಯವರನ್ನು ಬಂಧಿಸಿ ವಿಚಾರಣೆ ನಡೆಸದಿದ್ದರೆ ಪ್ರದೀಪ್‌ ಆತ್ಮಹತ್ಯೆ ಪ್ರಕರಣ ಕೂಡ ಅದೇ ರೀತಿ ಮುಚ್ಚಿಹೋಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಒಂದುವೇಳೆ ಯಾವುದಾದರೂ ಡೆತ್‌ನೋಟ್‌ನಲ್ಲಿ ಜನಸಾಮಾನ್ಯರ ಹೆಸರಿದ್ದರೆ, ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸುತ್ತಾರೆ. ಆದರೆ ಬಿಜೆಪಿಯ ಸಚಿವರು ಅಥವಾ ಶಾಸಕರ ಹೆಸರಿದ್ದರೆ ಖುಲಾಸೆ ಮಾಡುತ್ತಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ಒಂದು ಕಾನೂನು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದೆಯೇ? ಅರವಿಂದ ಲಿಂಬಾವಳಿಯವರಿಗೆ ಸಾಕ್ಷಿ ನಾಶಕ್ಕೆ ಅವಕಾಶ ನೀಡದೇ, ಶೀಘ್ರವೇ ಬಂಧಿಸಬೇಕು. ಪ್ರದೀಪ್‌ ಸಾವಿನಲ್ಲಿ ಅರವಿಂದ ಲಿಂಬಾವಳಿ ಪಾತ್ರವೇನೆಂಬುದು ಜನರಿಗೆ ತಿಳಿಯಬೇಕು. ಎಲ್ಲ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಪ್ರದೀಪ್‌ರವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಶೋಕ್‌ ಮೃತ್ಯುಂಜಯ ಮಾತನಾಡಿ ಅಧಿಕಾರದ ಮದದಲ್ಲಿರುವ ಬಿಜೆಪಿ ನಾಯಕರು ನಾನಾ ರೀತಿಯ ಅಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಪ್ರಾಮಾಣಿಕರು ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಕೆಲವು ದಿನಗಳ ಹಿಂದೆ ತುಮಕೂರಿನ ಗುತ್ತಿಗೆದಾರ ಟಿ.ಎನ್‌.ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆ ಕಾರಣವೆಂದು ಹೇಳಲಾಗಿದೆ. ಆದರೆ ಇಂತಹ ಯಾವ ಪ್ರಕರಣದ ತನಿಖೆಯೂ ಸರಿಯಾಗಿ ನಡೆಯುತ್ತಿಲ್ಲ. ಪ್ರಭಾವಿಗಳನ್ನು ರಕ್ಷಿಸುವ ಉದ್ದೇಶದಿಂದ, ಸತ್ಯ ಹೊರಬಾರದಂತೆ ನೋಡಿಕೊಳ್ಳಲು ಬಿಜೆಪಿಯು ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

H. D. Deve Gowda : ದೇವೇಗೌಡರ ಜೊತೆ ವೃಕ್ಷ ಮಾತೆಯ ಭಾವುಕ ನುಡಿ | Pratidhvani

Next Post

ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | Siddheshwar Swamiji | Narendra modi

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | Siddheshwar Swamiji | Narendra modi

ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | Siddheshwar Swamiji | Narendra modi

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!