ನವದೆಹಲಿ: ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ನಿಧನ ನಾಡಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ನಡೆದಾಡುವ ದೇವರೆಂದೇ ಪ್ರಸಿದ್ಧಿ ಪಡೆದಿದ್ದ ಸ್ವಾಮೀಜಿಗಳ ಸಾವಿಗೆ ದೇಶದಾದ್ಯಂತ ಪ್ರಮುಖ ಗಣ್ಯರು ಕಂಬನಿ ಮಿಡಿದಿದ್ದಾರೆ.
ಶ್ರೀ ಸಿದ್ಧೇಶ್ವರ ಶ್ರೀಗಳು ಸಮಾಜಕ್ಕೆ ನೀಡಿರುವ ಅಪಾರ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ, ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
‘ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ’ ಎಂದು ತಿಳಿಸಿದ್ದಾರೆ.
ಈ ಟ್ವೀಟ್ನೊಂದಿಗೆ ಸಿದ್ದೇಶ್ವರ ಸ್ವಾಮೀಜಿಗಳೊಂದಿಗೆ ಮೋದಿ ಅವರು ತೆಗೆಸಿಕೊಂಡಿದ್ದ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ.