ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 9ರಂದು ಕೋಲಾರಕ್ಕೆ ಆಗಮಿಸುತ್ತಿದ್ದು, ಈ ವೇಳೆ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ತೀರ್ಮಾನ ಹೇಳುತ್ತಾರೆ ಎಂದು ಎಂಎಲ್ಸಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಮಾಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವಿರೋಧಿಗಳು ಅವರ ವಿರುದ್ಧ ಬೇಕಂತಲೇ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಜ.9ರಂದು ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬರುತ್ತಿದ್ದು, ಈ ಸಂದರ್ಭದಲ್ಲಿ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ತೀರ್ಮಾನ ಹೇಳುತ್ತಾರೆ. ಆ ಮೂಲಕ ತಮ್ಮ ಸ್ಪರ್ಧೆ ಬಗ್ಗೆ ಎದುರಾಗಿರುವ ಎಲ್ಲಾ ಗೊಂದಲಗಳಿಗೆ ತಿಲಾಂಜಲಿ ಇಡುತ್ತಾರೆ ಎಂದರು.
ಜನವರಿ 9ರಂದು ಕೋಲಾರದ ಜೂನಿಯರ್ ಕಾಲೇಜಿನ ಮಿನಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಅಂದು ಅಂದಾಜು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದು, ಕೋಲಾರ ಕ್ಷೇತ್ರದವರು ಬಿಟ್ಟು ಹೊರಗಡೆಯಿಂದ ಯಾರು ಭಾಗವಹಿಸುವುದಿಲ್ಲ. ಕಳೆದ ಬಾರಿ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದಾಗಲೂ ಹೊರಗಿನಿಂದ ಯಾರು ಬಂದಿರಲಿಲ್ಲ. ಆದರೆ ವಿರೋಧಿಗಳು ಬೇಕಂತಲೇ ಅಪಪ್ರಚಾರ ಮಾಡಿದರು ಎಂದು ಅನಿಲ್ ಕುಮಾರ್ ಕಿಡಿಕಾರಿದರು