ಮೈಸೂರು: ರಂಗಾಯಣದಲ್ಲಿ ಇತ್ತೀಚೆಗೆ ನಡೆದ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಅವಹೇಳನ ಮಾಡಿರುವುದರನ್ನ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತಿಳಿಸಿದ್ದಾರೆ.
ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಂಗಾಯಣದ ಮೂಲಕ ಬಿಜೆಪಿ ಸರ್ಕಾರ ಸಮಾಜದಲ್ಲಿ ಶಾಂತಿಕದಡುವ ಕೆಲಸ ಮಾಡುತ್ತಿದೆ. ಅಲ್ಲದೇ ರಂಗಾಯಣಕ್ಕೆ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿಯನ್ನ ನಿರ್ದೇಶಕರಾಗಿ ನೇಮಿಸಿದ್ದಾರೆ. ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ರೌಡಿಯಂತೆ ವರ್ತಿಸುತ್ತಿದ್ದಾರೆ. ಇದು ನಿಜಕ್ಕೂ ಮೈಸೂರಿಗರ ದುರಂತ ಎಂದು ಲಕ್ಷ್ಮಣ್ ಕಿಡಿಕಾರಿದರು.
ರಂಗಾಯಣದಲ್ಲಿ ಇತ್ತೀಚೆಗೆ ಪ್ರದರ್ಶನಗೊಂಡ ನಾಟಕವೊಂದರಲ್ಲಿ ಪ್ರತಿಭಟನೆ ಅವರ ವಿರುದ್ಧ ಅವಹೇಳನ ಮಾಡಲಾಗಿದೆ. ಮಾಸ್ಟರ್ ಮೈಂಡ್ ಪ್ರತಾಪ್ ಸಿಂಹ, ಎಸ್.ಎಲ್.ಭೈರಪ್ಪ, ಅಡ್ಡಂಡ ಕಾರ್ಯಪ್ಪ ಮೂಲಕ ಮೈಸೂರಿನಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. ಇತ್ತೀಚಿಗೆ ಟಿಪ್ಪು ನಿಜಕನಸುಗಳು ನಾಟಕದ ಮೂಲಕ ಟಿಪ್ಪುವಿಗೆ ಅವಹೇಳನ ಮಾಡಿದರು ಎಂದು ಟೀಕಿಸಿದರು.
ಹೀಗಾಗಿ ಅಡ್ಡಂಡ ಕಾರ್ಯಪ್ಪನಿಗೆ ಬುದ್ದಿ ಕಲಿಸುವ ಕೆಲಸವನ್ನ ಕಾಂಗ್ರೆಸ್ ಶೀಘ್ರದಲ್ಲೇ ಮಾಡುತ್ತದೆ. ಇದಕ್ಕಾಗಿ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಅಂದಾಜು 10 ಸಾವಿರ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲಕ್ಷ್ಮಣ್ ತಿಳಿಸಿದರು.
ಇದೇ ವೇಳೆ ಪಂಚಮಸಾಲಿ ಹಾಗು ಒಕ್ಕಲಿಗ ಸಮುದಾಯಗಳಿಗೆ ನೀಡಿದ ಮೀಸಲಾತಿ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಮೀಸಲಾತಿ ನಿರ್ಧಾರ ಚುನಾವಣೆ ಗಿಮಿಕ್ ಆಗಿದೆ. ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ನೀಡುವ ಸರ್ಕಾರದ ನಿಲುವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಮಾಡಲಾಗಿದೆ. ಆದರೆ ಮೀಸಲಾತಿ ನೀಡುವ ಸರ್ಕಾರದ ನಿಲುವು ನ್ಯಾಯಾಲಯದಲ್ಲಿ ಊರ್ಜಿತವಾಗುವುದಿಲ್ಲ. ಮೀಸಲಾತಿ ಪ್ರಮಾಣ 50% ಮೀರಲು ಸಾಧ್ಯವಿಲ್ಲ. ಏನೇ ಆದರೂ ಕಾಂಗ್ರೆಸ್ ವಿರುದ್ಧ ದೂರುತ್ತಾರೆ. ಮೀಸಲಾತಿ ಅನುಷ್ಠಾನ ವಿಚಾರದಲ್ಲಿ ಏನೇ ಆದರೂ ಅದನ್ನು ಕಾಂಗ್ರೆಸ್ ತಲೆಗೆ ಕಟ್ಟುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.
ಇನ್ನೂ ಅಮುಲ್ ಜೊತೆ ಕೆಎಂಎಫ್ ವಿಲೀನ ಸಂಬಂಧ ಮಾತನಾಡಿದ ಅವರು, ಈ ಸಂಬಂಧ ಅಮಿತ್ ಶಾ ನೇತೃತ್ವದಲ್ಲಿ ಅಸ್ಸಾಂನಲ್ಲಿ ನಡೆದ ಸಭೆಯಲ್ಲಿ ದೇಶದ ನಾಲ್ಕು ಪ್ರಮುಖ ಹಾಲು ಒಕ್ಕೂಟಗಳನ್ನು ವಿಲೀನ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಬಿಜೆಪಿ ನಾಯಕರು ವಿಲೀನ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ವಾಸ್ತವ ಪರಿಸ್ಥಿತಿಯೇ ಬೇರೆಯಿದ್ದು, ವಿಲೀನಕ್ಕೆ ಹುನ್ನಾರ ನಡೆದಿದೆ. ಕೆಎಂಎಫ್ ಅನ್ನು ಅದಾನಿ ಅಥವಾ ಅಂಬಾನಿ ಒಡೆತನಕ್ಕೆ ಕೊಡಲು