• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ..!?

Any Mind by Any Mind
January 6, 2023
in Top Story
0
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ..!?
Share on WhatsAppShare on FacebookShare on Telegram

ಮೈಸೂರು: ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ.

ADVERTISEMENT

ಮೈಸೂರಿನ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೈಸೂರು-ಬೆಂಗಳೂರು ದಶಪಥ ಕಾಮಗಾರಿಯನ್ನು ವೀಕ್ಷಿಸಿ ಉತ್ತಮವಾಗಿದೆ. ಇದೇ ಫೆಬ್ರವರಿ ಅಥವಾ ಮಾಚ್೯ ಗೆ ಈ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಉದ್ಘಾಟನೆಗೊಳಿಸಲಾಗುವುದು ಎಂದು ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ

ಬೈಕ್-ಆಟೋಗಿಲ್ಲ ಪ್ರವೇಶ

ಇನ್ನು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಳಿಗೆ ಪ್ರವೇಶ ಇಲ್ಲ ಎಂದು ಹೇಳಿರುವ ಪ್ರತಾಪ್ ಸಿಂಹ ಅವರು, ‘ಸರ್ವಿಸ್ ರಸ್ತೆ ನಿರ್ಮಾಣವಾದ ಬಳಿಕ ಈ ರಸ್ತೆಯಲ್ಲಿ ದ್ವಿಚಕ್ರ ಮತ್ತು ಮೂರು ಚಕ್ರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ. ಯಾಕೆಂದರೆ ಇದು ಎಕ್ಸ್ ಪ್ರೆಸ್ ಹೈವೇ ಆಗಿರುವುದರಿಂದ ಬಹಳಷ್ಟು ಮಂದಿ ಮೈಸೂರು-ಬೆಂಗಳೂರು ನಡುವೆ ವೇಗವಾಗಿ ಸಂಚರಿಸುತ್ತಿರುತ್ತಾರೆ. ಈ ಮಧ್ಯೆ ದ್ವಿಚಕ್ರವಾಹನಗಳಿಗೆ ಅವಕಾಶ ನೀಡಿದರೆ ಅವರ ವೇಗದ ಮಿತಿ ಕಡಿಮೆಯಾಗಬಹುದು. ಅಲ್ಲದೆ ದ್ವಿಚಕ್ರವಾಹನಗಳು ಲೇನ್ ನಿಯಮ ಪಾಲಿಸುವುದು ಕಡಿಮೆ.. ಇದು ಅಪಘಾತಗಳಿಗೆ ಕಾರಣವಾಗಬಹುದು. ದ್ವಿ ಚಕ್ರ ವಾಹನಗಳು ಮತ್ತು ಇತರೆ ವಾಹನಗಳು ಸಂಚರಿಸಲು ಸರ್ವೀಸ್ ರಸ್ತೆಗಳಿರುತ್ತದೆ. ಆ ಮೂಲಕ ಸಂಚರಿಸಬಹುದು ಎಂದು ತಿಳಿಸಿದರು.


ಎಕ್ಸ್ ಪ್ರೆಸ್ ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತದೆ. 1.30 ಗಂಟೆಯಲ್ಲಿ ಬೆಂಗಳೂರಿನಿಂದ ಮೈಸೂರು ತಲುಪಬಹುದು. ಹಾಗಂತ ಈ ರಸ್ತೆ ಬರಿ ಶ್ರೀಮಂತರಿಗಾಗಿ ಎಂದು ಭಾವಿಸಬಾರದು ಎಂದರು. 


ಎಕ್ಸ್ ಪ್ರೆಸ್ ಹೈವೆ ಹೆಸರಿಡುವ ಕುರಿತು ಹಲವಾರು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ನಾಲ್ವಡಿ ಕೃಷ್ಣರಾಜ ಒಡೆಯರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೆಸರಿಡುವಂತೆ ಪ್ರಸ್ತಾಪಿಸಿದ್ದಾರೆ. ಆದರೆ ಯಾವುದೇ ಎಕ್ಸ್ ಪ್ರೆಸ್ ಹೈವೆಗೆ ವ್ಯಕ್ತಿಗಳ ಹೆಸರಿಟ್ಟ ಉದಾಹರಣೆ ಇಲ್ಲ. ಉತ್ತರ ಪ್ರದೇಶದಲ್ಲಿ ಗಂಗಾ-ಯಮುನಾ ಎಕ್ಸ್ ಪ್ರೆಸ್ ವೇ ಅಂತಿದೆ.

ಹೀಗಾಗಿ ನದಿಗಳ ಪಾವಿತ್ರ್ಯತೆ ಕುರಿತು ನೀಡಲಾಗಿದ್ದು, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೂ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

Tags: ಪ್ರತಾಪ್ ಸಿಂಹಬೆಂಗಳೂರು-ಮೈಸೂರು
Previous Post

ಜಡ್ಜ್‌ಗಳ ನೇಮಕಾತಿ: ಒಮ್ಮತಕ್ಕೆ ಬಾರದ ಕೊಲಿಜಿಯಂ, ಕೇಂದ್ರ ಸರ್ಕಾರ: ಸಾಲು ಸಾಲು ಶಿಫಾರಸ್ಸುಗಳು ಬಾಕಿ

Next Post

ಕಡಬದಲ್ಲಿ ಗೂಂಡಾಗಿರಿ; ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post
ಕಡಬದಲ್ಲಿ ಗೂಂಡಾಗಿರಿ; ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ

ಕಡಬದಲ್ಲಿ ಗೂಂಡಾಗಿರಿ; ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada