ಕಡಬ:ಯುವಕನಿಗೆ ದುಷ್ಕರ್ಮಿಗಳ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.
ಕಲ್ಲುಗುಂಡಿಯ ಅಫೀದ್ ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ.ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ಎಂದು ಆರೋಪಿಸಿ ಅಫೀದ್ ಗೆ ತಂಡವೊಂದು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ.
ಈ ಕುರಿತು ಅಫೀದ್ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ.






