ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ನೂತನ ವಿಮಾನ ನಿಲ್ದಾಣದ ಉದ್ಘಾಟನೆಯೂ ಫೆಬ್ರವರಿ 12ರಂದು ನೆರವೇರಲಿದ್ದು ಪ್ರಧಾನಿ ನರೇಂದ್ರ ಭಾಗಿಯಾಗಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ರಾಘವೇಂದ್ರ ಕಾಮಗಾರಿ ಮುಗಿಯುವ ಹಂತದಲ್ಲಿದ್ದುವಿಮಾನ ಹಾರಾಟಕ್ಕೆ ಲ್ಲಾ ರೀತಿಯ ಯೋಜನಗೆಳನ್ನ ರೂಪಿಸಲಾಗಿದೆ ಈ ಭಾಗದ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಪಾಲಿಕೆ ಸದಸ್ಯ ಯೋಗೇಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.







