ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಕ್ಷೇತ್ರಗಳತ್ತ ಸ್ಥಳೀಯ ಶಾಸಕರು ಮುಖ ಮಾಡಿದ್ದು ಸರ್ಕಾರದಿಂದ ಅನುದಾನ ತಂದು ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ.
ಇನ್ನು ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಉಪ್ಪನಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿನ ಸಮಸ್ಯೆ ಬಗೆಹರಿಯದ ಕಾರಣ ಚುನಾವಣೆ ಬಹಿಷ್ಕರಿಸಲು ಮುಂದಾಗಿದ್ದಾರೆ.
ಗ್ರಾಮದಲ್ಲಿನ ಚರಂಡಿ ವ್ಯವಸ್ಥೆ ಹದಗೆಟ್ಟಿದ್ದು ಈ ಬಗ್ಗೆ ಜನಪ್ರತಿನಿಧೀಗಳು ಗಮನ ಹರಿಸದಿದ್ದಲ್ಲಿ ಮುಂಬರುವ ಚುನಾವಣೆಗಳನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ ಮತ್ತು 15 ದಿನಗಳ ಗಡುವನ್ನು ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಗಬ್ಬು ನಾರುತ್ತಿದ್ದು ಇಲ್ಲಿ ನಿವಾಸಿಗಳು ಮೂಗು ಮುಚ್ಚಿಕೊಂಡು ಒಡಾಡುವಂತಾಗಿದೆ ಸಂಜೆಯಾದೆರೆ ಸೊಳ್ಳೆಗಳ ಕಾಟ ಹಾಗೂ ತಿನ್ನುವ ಆಹಾರ ಪದಾರ್ಥಗಳಲ್ಲಿ ಹುಳಗಳು ಕಾಣಿಸಿಕೊಳ್ಳುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಿಂದ ಗ್ರಾಮಸ್ಥರು ಕಂಗೆಟ್ಟಿದ್ದು ಗ್ರಾಮಕ್ಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ನೋ ಎಂಟ್ರಿ ಎಂದು ಹೇಳಿದ್ದಾರೆ ಮತ್ತು ಪ್ರತಿನಿತ್ಯಕೈಯಿಂದ ಕೊಳಚೆ ನೀರನ್ನು ಬಕೆಟ್ ನಲ್ಲಿ ಹೊರ ಚೆಲ್ಲುವ ಮೂಲಕ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.






