ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಸಿರುವ ಪಿಂಪ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೂ ನ್ಯಾಯಾಲಯದ ಮೊರೆ ಹೋಗಿದ್ದಾನೆ.
ಬಂಧನದ ಭೀತಿ ಹಿನ್ನಲೆಯಲ್ಲಿ ತಮ್ಮ ವಕೀಲರ ಮೂಲಕ ನಾಲ್ಕನೇ ಅಡಿಷನಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಸ್ಯಾಂಟ್ರೋ ರವಿ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆಕ್ಷೇಪಣೆ ಸಲ್ಲಿಸಲು ಪಿಪಿಗೆ ಸೂಚಿಸಿ ವಿಚಾರಣೆಯನ್ನು 10/01/2023ನೇ ಮಂಗಳವಾರಕ್ಕೆ ಮುಂದೂಡಿದೆ.







