• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಿಮ್ಮ ಒತ್ತಾಯಕ್ಕೆ ಇಲ್ಲ ಎನ್ನಲು ಸಾಧ್ಯವಿಲ್ಲ : ಸಿದ್ದರಾಮಯ್ಯ

Any Mind by Any Mind
January 9, 2023
in ಕರ್ನಾಟಕ, ರಾಜಕೀಯ
0
ನಿಮ್ಮ ಒತ್ತಾಯಕ್ಕೆ ಇಲ್ಲ ಎನ್ನಲು ಸಾಧ್ಯವಿಲ್ಲ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೋಲಾರದಲ್ಲಿ ಸೋಮವಾರ ಆಯೋಜನೆಗೊಂಡಿದ್ದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕ್ಷೇತ್ರ ಹುಡುಕಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದು ಸಮಾವೇಶದಲ್ಲಿ ತಮ್ಮ ಸ್ಪರ್ದೆ ಹಾಗೂ ಕೋಲಾರದ ಅಭಿವೃದ್ದಿ ಸೇರಿದಂತೆ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ADVERTISEMENT

ಇಂದಿನ ಸಭೆಯಲ್ಲಿ ಕೆ.ಹೆಚ್‌ ಮುನಿಯಪ್ಪ ಅವರ ಆದಿಯಾಗಿ ಮಾತನಾಡಿದ ಎಲ್ಲಾ ಮುಖಂಡರು ನನಗೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಕ್ಷೇತ್ರದ ಜನ ಮತ್ತು ಸಭೆಯಲ್ಲಿ ಮಾತನಾಡದ ಕೆಲವರ ಒತ್ತಾಯವೂ ಇದೇ ಆಗಿದೆ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದು ದೇವಾಲಯಗಳಿಗೆ, ಮಸೀದಿಗಳಿಗೆ, ಚರ್ಚ್ ಗಳಿಗೆ ಭೇಟಿ ನೀಡಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದೇನೆ, ಅವರೆಲ್ಲರೂ ನೀವು ಕೋಲಾರ ಕ್ಷೇತ್ರದಿಂದಲೇ ನಿಲ್ಲಿ ಎಂದು ಹೇಳುತ್ತಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ನಾನು ಚಾಮುಂಡೇಶ್ವರಿ, ವರುಣಾ, ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕೆಲವರು ನನಗೆ ಕ್ಷೇತ್ರ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು ಎಂದು ಒತ್ತಾಯಿಸುತ್ತಿದ್ದಾರೆ. ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ. ಪಕ್ಷದ ಹಿರಿಯ ಮುಖಂಡರಾದ ಮುನಿಯಪ್ಪ, ರಮೇಶ್‌ ಕುಮಾರ್, ಕೃಷ್ಣ ಬೈರೇಗೌಡರು, ನಜೀರ್‌ ಅಹಮದ್‌ ಅವರು ಹೀಗೆ ಇಲ್ಲಿನ ಅನೇಕ ನಾಯಕರು ನನಗೆ ಇಲ್ಲಿಂದಲೇ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ. ಇಲ್ಲಿನ ಜನ ಕೂಡ ಅದನ್ನೇ ಹೇಳುತ್ತಿದ್ದಾರೆ.

ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲು ಸಾಧ್ಯವಿಲ್ಲ. ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್‌ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ. ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್‌ ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು.

ಮುಂದಿನ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧೆ ಮಾಡಿ ಜಯಗಳಿಸಿದರೆ ಪ್ರತೀ ವಾರ ಕೋಲಾರಕ್ಕೆಬರುತ್ತೇನೆ. ನಾನು ಬೆಳೆಸಿಕೊಂಡು ಬಂದಿರುವ ಸಂಪ್ರದಾಯದಂತೆ ಯಾವ ಮುಖಂಡನ ಜೊತೆ ಬಂದು ನನ್ನನ್ನು ಭೇಟಿ ಮಾಡಬೇಕಾದ ಅಗತ್ಯ ಇಲ್ಲ, ಯಾವುದೇ ಸಾಮಾನ್ಯ ವ್ಯಕ್ತಿ ಬಂದು ನನ್ನನ್ನು ನೇರವಾಗಿ ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ಇಡೀ ರಾಜ್ಯದ ಎಲ್ಲಾ ಜನರ ನೆರವಿಗೆ ಹೋಗುವಂತಾ ಕೆಲಸಗಳನ್ನು ಹಿಂದೆಯೂ ಮಾಡಿಕೊಂಡು ಬಂದಿದ್ದೇನೆ, ಮುಂದೆಯೂ ಮಾಡಲಿದ್ದೇನೆ.

ಕೋಲಾರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸುದರ್ಶನ್‌ ಅವರು ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ನಾನು ಈ ಹಿಂದೆ ಸ್ಪರ್ಧೆ ಮಾಡಿ ಗೆದ್ದುಬಂದ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುವ ವಿಚಾರದಲ್ಲಿ ಎಂದೂ ಹಿಂದೆ ಬಿದ್ದಿಲ್ಲ. ಇಲ್ಲಿಂದಲೇ ಚುನಾವಣೆಗೆ ನಿಂತು ನಾನು ಶಾಸಕನಾಗಿ ಆಯ್ಕೆಯಾದರೆ ಇಡೀ ಕೋಲಾರದ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಮಹತ್ವ ಕೊಡುತ್ತೇನೆ. ಇದರಲ್ಲಿ ಅನುಮಾನವೇ ಬೇಡ.

ನಾವು ಕೆ.ಸಿ ವ್ಯಾಲಿ ಯೋಜನೆಗೆ 1400 ಕೋಟಿ ಅನುದಾನ ನೀಡಿ ಯೋಜನೆ ಜಾರಿ ಮಾಡಿದ್ದೆವು, ಎನ್‌,ಸಿ ವ್ಯಾಲಿ ಯೋಜನೆ ಜಾರಿ ಮಾಡಿದ್ದೆವು. ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿ ಭೂಮಿ ಪೂಜೆ ಮಾಡಿದ್ದು ನಮ್ಮ ಕಾಲದಲ್ಲಿ. ಮತ್ತೆ ನಾವೇ ಅಧಿಕಾರಕ್ಕೆ ಬಂದಿದ್ದರೆ ಈ ಯೋಜನೆಯನ್ನು ಪೂರ್ಣಗೊಳಿಸುತ್ತಿದ್ದೆವು ಆದರೆ ಅಧಿಕಾರಕ್ಕೆ ಬರದಿದ್ದ ಕಾರಣಕ್ಕೆ ಯೋಜನೆ ಪೂರ್ಣಗೊಂಡಿಲ್ಲ. ಮುಂದೆ ನಾವು ಮತ್ತೆ ಅಧಿಕಾರಕ್ಕೆ ಬಂದರೆ 2 ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ಬದ್ಧರಿದ್ದೇವೆ. ಈಗ ಅದರ ಯೋಜನಾ ವೆಚ್ಚ 24,000 ಕೋಟಿ ಆಗಿದೆ, ಅದನ್ನು ಖರ್ಚು ಮಾಡುತ್ತೇವೆ. ಮೊನ್ನೆ ವಿಜಯಪುರದಲ್ಲಿ ನಡೆದ ಸಮಾವೇಶದಲ್ಲಿ ಪಕ್ಷ ಘೋಷಣೆ ಮಾಡಿದಂತೆ ಮುಂದಿನ 5 ವರ್ಷಗಳಲ್ಲಿ 2 ಲಕ್ಷ ಕೋಟಿ ಹಣವನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ರೈತರ ಜಮೀನಿಗೆ ನೀರು ಕೊಡುವ ಕೆಲಸ ಮಾಡುತ್ತೇವೆ.

ಕೋಲಾರದಲ್ಲಿ ಕೃಷಿ ಮೇಲೆ ಅವಲಂಬಿತರಾದ ಜನ ಹೆಚ್ಚು. ಅದೇ ಕಾರಣಕ್ಕೆ ಸಕಲೇಶಪುರದ ಬಳಿ ನೇತ್ರಾವತಿ ನದಿ ನೀರನ್ನು ಎತ್ತಿ ಈ ಭಾಗದ ಕೆರೆಗಳನ್ನು ತುಂಬಿಸಲು ಕೆ.ಸಿ ವ್ಯಾಲಿ ಯೋಜನೆ ಮಾಡಿದ್ದು. ಈಗಾಗಲೇ ಸಾಕಷ್ಟು ಕೆರೆಗಳು ತುಂಬಿವೆ. ಮೊನ್ನೆ ನರಸಾಪುರದ ಕೆರೆಗೆ ಬಾಗೀನ ಅರ್ಪಿಸಲು ಹೋಗಿದ್ದೆ.

ಕೋಲಾರದ ಜನ ಶ್ರಮ ಜೀವಿಗಳು. ಇಲ್ಲಿ ತರಕಾರಿ, ಹಾಲು ಉತ್ಪಾದನೆ, ರೇಷ್ಮೆ, ರಾಗಿ ಮುಂತಾದ ಕೃಷಿ ಚಟುವಟಿಕೆಗಳನ್ನು ನಂಬಿರುವ ಜನ ಬಹಳಷ್ಟು ಇದ್ದಾರೆ. ಈ ಎಲ್ಲಾ ರೈತರಿಗೆ ನೀರು ಕೊಡುವ ಕೆಲಸವನ್ನು ಮುಂದೆ ನಾವು ಮಾಡುತ್ತೇವೆ. ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ವರ್ಗದವರು, ಹಿಂದುಳಿದವರು ಹಾಗೂ ದಲಿತರಿಗಾಗಿ ನಮ್ಮ ಸರ್ಕಾರ ಇದ್ದಾಗ ಹಲವು ವಿಶೇಷ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆ, ನಾವು ಅಧಿಕಾರದಿಂದ ಇಳಿದ ಮೇಲೆ ಅವೆಲ್ಲವನ್ನೂ ನಿಲ್ಲಿಸಿದ್ದಾರೆ. ಕೋಲಾರಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಮನವಿ ಮಾಡಿದ್ದಾರೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಆಸ್ಪತ್ರೆಯನ್ನು ಮಂಜೂರು ಮಾಡಿ ಸ್ಥಾಪನೆ ಮಾಡುವ ಕೆಲಸ ಮಾಡುತ್ತೇವೆ. ನಮ್ಮದು ನುಡಿದಂತೆ ನಡೆಯುವ ಸಿದ್ಧಾಂತ.

2013ರ ಚುನಾವಣೆಯಲ್ಲಿ ನಾವು 165 ಭರವಸೆಗಳನ್ನು ನೀಡಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದರ ಜೊತೆಗೆ 30 ಹೆಚ್ಚುವರಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಈಗ ಕೃಷಿ ಭಾಗ್ಯ, ಇಂದಿರಾ ಕ್ಯಾಂಟೀನ್‌, ವಿದ್ಯಾಸಿರಿ, ಕೃಷಿ ಹೊಂಡ, ಶಾದಿ ಭಾಗ್ಯ ಇವು ಯಾವುವಾದರೂ ಈಗ ಇದೆಯಾ? ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ಅನುದಾನ ಖರ್ಚು ಮಾಡಬೇಕು ಎಂದು ಎಸ್‌,ಸಿ,ಪಿ/ಟಿ,ಎಸ್‌,ಪಿ ಯೋಜನೆ ಜಾರಿಗೆ ತಂದು, ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ 30,000 ಕೋಟಿ ರೂ. ಗೂ ಅಧಿಕ ಹಣ ನೀಡಿದ್ದೆ. ಅದಕ್ಕೂ ಮೊದಲು ಬಿಜೆಪಿ ಸರ್ಕಾರ ಇದ್ದಾಗ ಪೂರ್ತಿ 5 ವರ್ಷಗಳಲ್ಲಿ ಈ ವರ್ಗದ ಅಭಿವೃದ್ಧಿಗೆ ಖರ್ಚು ಮಾಡಿದ್ದ ಹಣ 22,000 ಕೋಟಿ. ನಾವು ಈ ಕಾನೂನು ಜಾರಿಗೆ ತಂದ ಮೇಲೆ ನಮ್ಮ ಸರ್ಕಾರದ 5 ವರ್ಷಗಳಲ್ಲಿ ಖರ್ಚು ಮಾಡಿದ ಹಣ 88,000 ಕೋಟಿ ರೂ.

ನಾವು ಅಧಿಕಾರಕ್ಕೆ ಬರುವ ಮೊದಲು ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಗಳಿಗೆ ನೀಡುತ್ತಿದ್ದ ಅನುದಾನ 400 ಕೋಟಿ ರೂ. ಇತ್ತು. ಅದನ್ನು ನಾನು 3,000 ಕೋಟಿ ಮಾಡಿದ್ದೆ. 800 ಕೋಟಿ ರೂ. ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ವಾಸಿಸುವ ಕೇರಿ/ಏರಿಯಾಗಳಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ನೀಡಿದ್ದೆ. ಬಡ ಜನರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದೆ. ಈಗ ಬಸವರಾಜ ಬೊಮ್ಮಾಯಿ ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ಎನ್ನುತ್ತಿದ್ದಾರೆ. ಬೊಮ್ಮಾಯಿ ಅವರೇ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದವರು ಯಾರು? ನಿಮ್ಮ ವಾಜಪೇಯಿ ಅವರ ಸರ್ಕಾರ ಅಲ್ಲ, ಮನಮೋಹನ್‌ ಸಿಂಗ್‌ ಅವರ ಸರ್ಕಾರ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದಾರೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ಮುಂತಾದ ರಾಜ್ಯದಲ್ಲಿ ಯಾಕಿಲ್ಲ?

ಬಿಜೆಪಿ ಒಂದು ಸುಳ್ಳಿನ ಫ್ಯಾಕ್ಟರಿ. ಅವರಿಗೆ ಜನ ಶಾಂತಿ, ನೆಮ್ಮದಿಯಿಂದ ಇರುವುದು ಬೇಡ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ. ಮನಮೋಹನ್‌ ಸಿಂಗ್‌ ಅವರ ಸರ್ಕಾರ 78,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿತ್ತು. ನಾನು ಮುಖ್ಯಮಂತ್ರಿಯಾಗಿರುವಾಗ 22,27,000 ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ನರೇಂದ್ರ ಮೋದಿ ಅಥವಾ ಬಸವರಾಜ ಬೊಮ್ಮಾಯಿ ಒಂದು ರೂಪಾಯಿ ಸಾಲ ಮನ್ನಾ ಮಾಡಿದ್ದಾರ?

ಮೋದಿ ಅವರು ಅಚ್ಚೇದಿನ್‌ ಆಯೇಗಾ ಎಂದರು, ಇಂದು ಗ್ಯಾಸ್‌ ಬೆಲೆ, ಅಡುಗೆ ಎಣ್ಣೆ ಬೆಲೆ, ಡೀಸೆಲ್‌ – ಪೆಟ್ರೋಲ್‌, ಕಬ್ಬಿಣ, ಸಿಮೆಂಟ್‌ ಬೆಲೆ ಎಷ್ಟಾಗಿದೆ? ಇದಾ ಅಚ್ಚೇದಿನ್? ನ ಖಾವೂಂಗಾ ನ ಖಾನೇದೂಂಗಾ ಎಂದರು ಇಲ್ಲಿನ ಬಿಜೆಪಿ ಸರ್ಕಾರವನ್ನು 40% ಕಮಿಷನ್‌ ಸರ್ಕಾರ ಎಂದು ದೂರಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪತ್ರ ಬರೆದಿದ್ದರು. ಆದರೆ ಮೋದಿ ಅವರು ಇವತ್ತಿನವರೆಗೆ ರಾಜ್ಯ ಸರ್ಕಾರಕ್ಕೆ ಒಂದು ನೋಟಿಸ್‌ ನೀಡಿಲ್ಲ.

ಇಂದು ರಾಜ್ಯದಲ್ಲಿ ವಾತಾವರಣ ಕಾಂಗ್ರೆಸ್‌ ಪರವಾಗಿ ಬದಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ. ಆದರೂ ಬಿಜೆಪಿ ಪಕ್ಷದ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು. ಯುವ ಜನರಿಗೆ ವಾರ್ಷಿಕ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು, ಕೊಟ್ಟಿದ್ದಾರ? ಕೆಲಸ ಕೇಳಿದವರಿಗೆ ಪಕೋಡ ಮಾರೋಕೆ ಹೋಗಿ ಎನ್ನುತ್ತಾರೆ. ಬಿಜೆಪಿಯವರಿಗೆ ಮಾನ ಮರ್ಯಾದಿ ಇದೆಯಾ? ಅದ್ಯಾವ ಮುಖ ಇಟ್ಟುಕೊಂಡು ಜನರ ಬಳಿ ಹೋಗುತ್ತಾರೋ ಗೊತ್ತಿಲ್ಲ.

ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದ್ದೆ. ಈಗಿನ ಬಿಜೆಪಿ ಸರ್ಕಾರ ಒಂದೇ ಒಂದು ಹೊಸ ಮನೆಯನ್ನು ಕಟ್ಟಿಕೊಟ್ಟಿಲ್ಲ, ಹಳೆಯ ಮನೆಗಳಿಗೆ ದುಡ್ಡನ್ನೂ ಬಿಡುಗಡೆ ಮಾಡಿ ಕೊಟ್ಟಿಲ್ಲ. ನಾಚಿಕೆಯಾಗಬೇಕು ಇವರಿಗೆ. ಜನರ ತೆರಿಗೆ ಹಣ ಯಾರಪ್ಪನ ಮನೆ ದುಡ್ಡಲ್ಲ. ನಾವು 7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿ ಮಾಡಿದ್ದಾರೆ. ಅಕ್ಕಿಕೊಟ್ಟರೆ ಇವರ ಅಪ್ಪನ ಮನೆ ದುಡ್ಡು ಖಾಲಿ ಆಗುತ್ತಿತ್ತಾ? ಜನರ ತೆರಿಗೆ ಹಣದಲ್ಲಿ ಜನರಿಗೆ ಅಕ್ಕಿ ಕೊಡಲು ಏನು ಧಾಡಿ? ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಬಡವರಿಗೆ ನೀಡುತ್ತೇವೆ.

ದಲಿತರಲ್ಲಿ ಕೈಗಾರಿಕೆ ಮಾಡುವವರಿಗೆ 4% ಬಡ್ಡಿದರದಲ್ಲಿ ಸಾಲ ಸೌಲಭ್ಯ, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು. ಬೇರೆ ರಾಜ್ಯಗಳಲ್ಲಿ ಈ ಸೌಲಭ್ಯ ಇದೆಯಾ? ಮಹಿಳೆಯರಿಗೆ 10ಲಕ್ಷದ ವರೆಗೆ ಬಡ್ಡಿರಹಿತವಾಗಿ ಸಾಲ ನೀಡಿದ್ದು ನಮ್ಮ ಸರ್ಕಾರ. ಇಂಥಾ ಅನೇಕ ವಿಚಾರಗಳು ಇನ್ನೂ ಇದ್ದಾವೆ.

ಇದು ಕೋಲಾರ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಆಗಿದ್ದು, 23ರಂದು ಇನ್ನೂ ದೊಡ್ಡ ಸಮಾವೇಶ ಮಾಡುತ್ತೇವೆ, ಅದಕ್ಕೆ ಇಡೀ ಜಿಲ್ಲೆಯ ಜನ ಬರಬೇಕು. ಆಗ ನಿಮ್ಮೊಂದಿಗೆ ಇನ್ನೂ ಒಂದಷ್ಟು ವಿಷಯಗಳನ್ನು ಹಂಚಿಕೊಳ್ಳುತ್ತೇನೆ. ಚುನಾವಣೆ ಘೋಷಣೆ ಆಗುವ ಮೊದಲು ಒಮ್ಮೆ ಬರುತ್ತೇನೆ, ಹೋಬಳಿಗಳಿಗೂ ಬರುತ್ತೇನೆ. ಚುನಾವಣೆ ಘೋಷಣೆ ಆದಮೇಲೆ ರಾಜ್ಯ ಪ್ರವಾಸ ಮಾಡಬೇಕು. ಈ ಬಾರಿ ನಾವು ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ. ಧನ್ಯವಾದ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುಮಾರಸ್ವಾಮಿ ನನ್ನ ತೇಜೋವಧೆ ಮಾಡ್ತಾ ಇದ್ದಾರೆ : ಆರಗ ಜ್ಞಾನೇಂದ್ರ

Next Post

Santro Ravi Kamadata Exclusive : ಬಗೆದಷ್ಟು ಆಳ ಪಿಂಪ್‌ ರವಿಯ ಕಾಮಕಾಂಡ | Pratidhvani

Related Posts

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
0

https://youtu.be/DaADq5Dowbg

Read moreDetails

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
Next Post
Santro Ravi Kamadata Exclusive : ಬಗೆದಷ್ಟು ಆಳ ಪಿಂಪ್‌ ರವಿಯ ಕಾಮಕಾಂಡ | Pratidhvani

Santro Ravi Kamadata Exclusive : ಬಗೆದಷ್ಟು ಆಳ ಪಿಂಪ್‌ ರವಿಯ ಕಾಮಕಾಂಡ | Pratidhvani

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada