ದೆಹಲಿ ಮಹಾನಗರ ಪಾಲಿಕೆಯಲ್ಲಿನ ಗದ್ದಲ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ಜನವರಿ 6ರಂದು ದೆಹಲಿಪಾಲಿಕೆಯಲ್ಲಿ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಮಹಿಳೆಯರು ಸೇರಿದಂತೆ ಬಿಜೆಪಿಯವರ ಮೇಲೆ ಎಎಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಮುಂದಿನ ದಿನಗಳಲ್ಲಿ ಇದಕ್ಕೆ ನಾವು ತಿರುಗೇಟು ನೀಡುತ್ತೇವೆ ಎಂದು ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್ ಹೇಳಿದ್ದಾರೆ.
ಇನ್ನು ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಎಎಪಿ ನಾಯಕರು ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು ದೆಹಲಿ ಪಾಲಿಕೆಗೆ ಲೆಫ್ಟಿನೆಂಟ್ ಗವರ್ನರ್ ನಾಮ ನಿರ್ದೇಶನ ಮಾಡಿರುವ 10 ಮಂದಿ ಸದಸ್ಯರಿಗೆ ಮೊದಲು ಪ್ರಮಾನ ವಚನ ಸ್ವೀಕರಿಸಲು ಅವಕಾಶ ನೀಡುವ ಮೂಲಕ ಬಿಜೆಪಿ ನಿಯಮಗಳನ್ನ ಗಾಳಿಗೆ ತೂರಿದೆ ಎಂದು ಆರೋಪಿಸಿ ಎಎಪಿ ಸಚಿವರು, ಶಾಸಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.







