• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಮಾನದ ಎಮೆರ್ಜೆನ್ಸಿ ಬಾಗಿಲನ್ನು ತೆರೆದು ಯಡವಟ್ಟು: ತೇಜಸ್ವಿ ಸೂರ್ಯ, ಅಣ್ಣಾಮಲೈ ವಿರುದ್ಧ ದೂರು

Any Mind by Any Mind
January 17, 2023
in Top Story, ದೇಶ
0
ವಿಮಾನದ ಎಮೆರ್ಜೆನ್ಸಿ ಬಾಗಿಲನ್ನು ತೆರೆದು ಯಡವಟ್ಟು: ತೇಜಸ್ವಿ ಸೂರ್ಯ, ಅಣ್ಣಾಮಲೈ ವಿರುದ್ಧ ದೂರು
Share on WhatsAppShare on FacebookShare on Telegram

  ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿಉ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಮಾಡಿದ ಯಡವಟ್ಟು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.  ಈ ಇಬ್ಬರು ಬಿಜೆಪಿ ಯುವ ನಾಯಕರು ಡಿಸೆಂಬರ್‌ 10, 2022 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಚೆನ್ನೈ-ತಿರುಚ್ಚಿ ಇಂಡಿಗೋ ವಿಮಾನವೊಂದರ ತುರ್ತು ನಿರ್ಗಮನ ದ್ವಾರವನ್ನು ತೆರೆದಿದ್ದರೆಂದು ಆರೋಪಿಸಲಾಗಿದೆ. ಅದಾಗ್ಯೂ ಈ ಕುರಿತು ಇಂಡಿಗೋ ಯಾವುದೇ ಹೇಳಿಕೆ ಬಿಡುಗಡೆಗೊಳಿಸಲು ನಿರಾಕರಿಸಿದೆ.

ADVERTISEMENT

ವಿಮಾನದ ಎಮೆರ್ಜೆನ್ಸಿ ಎಕ್ಸಿಟ್‌ ಬಾಗಿಲನ್ನು ತೆರೆದಿರುವ ಅಂಶವನ್ನು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಡಿಜಿಸಿಎ  ಅಧಿಕಾರಿಗಳು ದೃಢೀಕರಿಸಿದ್ದರೂ ಅದು ಅಣ್ಣಾಮಲೈಯೇ ಅಥವಾ ತೇಜಸ್ವಿ ಸೂರ್ಯ ಅವರೇ ಎನ್ನುವುದು ದೃಢೀಕರಿಸಲು ನಿರಾಕರಿಸಿದ್ದಾರೆ. ಆದರೆ ಘಟನೆಯ ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ ಆ ಪ್ರಯಾಣಿಕ ತೇಜಸ್ವಿ ಸೂರ್ಯ ಅವರೇ ಆಗಿದ್ದರು ಹಾಗೂ ಅವರ ಕೃತ್ಯಕ್ಕೆ ಕ್ಷಮೆಕೋರುವಂತೆ ಮಾಡಲಾಯಿತು ಎಂದು ಹೇಳಿರುವುದಾಗಿ ವರದಿಯಾಗಿದೆ.

“ವಿಮಾನದ ಸಿಬ್ಬಂದಿ ಪ್ರಯಾಣಿಕರಿಗೆ ಸುರಕ್ಷತೆಗೆ ಸಂಬಂಧಿಸಿದ ಶಿಷ್ಟಾಚಾರ ಕುರಿತು ಮಾಹಿತಿ ನೀಡುತ್ತಿರುವಾಗ ಈ ಘಟನೆ ಸಂಭವಿಸಿದೆ. ತುರ್ತು ನಿರ್ಗಮನ ದ್ವಾರವೊಂದರ ಸಮೀಪ ಕುಳಿತಿದ್ದ ತೇಜಸ್ವಿ ಸೂರ್ಯ ಸಿಬ್ಬಂದಿ ಹೇಳುವುದನ್ನು ಕೇಳಿದ ಬಳಿಕ ಎಮೆರ್ಜೆನ್ಸಿ ಎಕ್ಸಿಟ್ ಲಿವರ್‌ ಎಳೆದ ಕಾರಣ ತುರ್ತು ನಿರ್ಗಮನ ದ್ವಾರ ತೆರೆಯಿತು. ತಕ್ಷಣ ಪ್ರಯಾಣಿಕರನ್ನೆಲಾ ಕೆಳಗಿಳಿಸಿ ಬಸ್‌ ಒಂದರಲ್ಲಿ ಕೂರಿಸಲಾಯಿತು,” ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.

ಸಂಸದ @Tejasvi_Surya
ತುರ್ತು ನಿರ್ಗಮನದ ದ್ವಾರವನ್ನು ವಿಮಾನ ನಿಲ್ದಾಣದಲ್ಲಿ ಅಲ್ಲದೆ, ಟೇಕಾಫ್ ಆದ ನಂತರ ಈ "ಕಪಿಚೇಷ್ಟೆ" ನಡೆಸಿದ್ದಿದ್ದರೆ ಸಂಭವಿಸುವ ಅನಾಹುತಕ್ಕೆ ಯಾರು ಹೊಣೆಯಾಗುತ್ತಿದ್ದರು @narendramodi ಅವರೇ?
ಈ ಬಗ್ಗೆ ತನಿಖೆ ಮಾಡುತ್ತಿಲ್ಲವೇಕೆ?

ತೇಜಸ್ವಿ ಸೂರ್ಯ ಸಂಸದನಾಗಿದ್ದು ಮಕ್ಕಳ ಕೈಗೆ ಆಟಿಕೆ ಸಿಕ್ಕಂತಾಗಿದೆ!

— Karnataka Congress (@INCKarnataka) January 17, 2023

ನಂತರ ಅಧಿಕಾರಿಗಳು ಹಾಗೂ ಸಿಐಎಸ್‌ಎಫ್‌ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸುಮಾರು ಎರಡು ಗಂಟೆಗಳ ಕಾಲ ವಿಮಾನಯಾನ ವಿಳಂಬಗೊಂಡಿದೆ. ಇದು ಉಲ್ಲಂಘನೆಯಾಗಿದ್ದರಿಂದ ಸಂಸದರಿಗೆ ಕ್ಷಮೆಕೋರಲು ಹೇಳಲಾಯಿತು ಹಾಗೂ ಅವರು ಲಿಖಿತ  ಪತ್ರ ನೀಡಿದರು ಎಂದು ಇಂಡಿಗೋ ಮೂಲಗಳು ತಿಳಿಸಿವೆ.

“ನಂತರ ಅವರನ್ನು ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿಸಲಾಗಿದ್ದರೂ ಅವರ ಸೀಟ್‌ ಬದಲಾಯಿಸಲಾಯಿತು,” ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.

ಇದೇ ವಿಮಾನದಲ್ಲಿ ಇದ್ದ ಡಿಎಂಕೆ ವಕ್ತಾರ ಬಿ ಟಿ ಅರಸಕುಮಾರ್‌ ಘಟನೆಯನ್ನು ದೃಢೀಕರಿಸಿದ್ದಾರೆ.

  ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋಗೆ ದೂರು

 ಈ ನಡುವೆ, ವಿಮಾನದ ತುರ್ತು ನಿರ್ಗಮನ ದ್ವಾರವನ್ನು ತೆರೆದಿರುವ ಕುರಿತು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋಗೆ ಸಾಮಾಜಿಕ ಕಾರ್ಯಕರ್ತ ಪಿಯುಷ್‌ ಮಾನುಷ್‌ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಿರುವ ಮಾನುಷ್‌,” ರಫೇಲ್ ವಾಚ್‌ಗಳನ್ನು ಧರಿಸಿದ್ದ ಈ ಇಬ್ಬರು ಫೆಲೋಗಳು ಏರ್‌ಕ್ರಾಫ್ಟ್‌ನೊಂದಿಗೆ ಆಟವಾಡಿ ಭಯ ಹುಟ್ಟಿಸಿ ಎರಡು ಗಂಟೆಗಳ ಕಾಲ ಹಾರಾಟ ವಿಳಂಬಗೊಳಿಸಿದ್ದಾರೆ. ತುರ್ತು ಬಾಗಿಲನ್ನು ತೆರೆದ ಕಾರಣ ಅವರನ್ನು ಇಳಿಲಾಗಿದ್ದರೂ ತಮ್ಮ ಪ್ರಭಾವವನ್ನು ಬಳಸಿಕೊಂಡು ಅವರನ್ನು ಪ್ರಯಾಣವನ್ನು ಮುಂದುವರಿಸಲು ಅನುಮತಿಸಲಾಯಿತು. ಅವರಿಬ್ಬರೂ ವಿಕೃತ ಪಕ್ಷದಲ್ಲಿಲ್ಲದಿದ್ದರೆ ಇಬ್ಬರೂ ಕಂಬಿ ಹಿಂದೆ ಬೀಳುತ್ತಿದ್ದರು. ಜನವರಿ 5 ರಂದು RTI ಅರ್ಜಿಯೊಂದಿಗೆ ನಾನು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋಗೆ   ದೂರನ್ನು ದಾಖಲಿಸಿದೆ. ನೂರಾರು ಜೀವಗಳಿಗೆ ಅಪಾಯ ತಂದೊಡ್ಡಿರುವ ಈ ಘಟನೆಯ ಕುರಿತು ಡಿಜಿಸಿಎ ತನಿಖೆಗೆ ಆದೇಶಿಸಿದೆ.” ಎಂದು ತಿಳಿಸಿದ್ದಾರೆ.

Tags: ಕೆ ಅಣ್ಣಾಮಲೈತೇಜಸ್ವಿ ಸೂರ್ಯ
Previous Post

Siddaramaiah Troll | Lavanya Ballal : ನಾನು ಸಿದ್ದರಾಮಯ್ಯ ಸೋಶಿಯಲ್‌ ಮೀಡಿಯಾವನ್ನು ರೂಲ್‌ ಮಾಡ್ತಾ ಇದ್ದೇವೆ

Next Post

Santro Ravi : ಸ್ಯಾಂಟ್ರೊ ರವಿಯನ್ನು ವೈದ್ಯಕೀಯ ತಪಾಸಣೆಗೆ ಕರೆ ತಂದ ಸಿಐಡಿ ಟೀಮ್ | CID | Pratidhvani

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
Santro Ravi : ಸ್ಯಾಂಟ್ರೊ ರವಿಯನ್ನು ವೈದ್ಯಕೀಯ ತಪಾಸಣೆಗೆ ಕರೆ ತಂದ ಸಿಐಡಿ ಟೀಮ್ | CID | Pratidhvani

Santro Ravi : ಸ್ಯಾಂಟ್ರೊ ರವಿಯನ್ನು ವೈದ್ಯಕೀಯ ತಪಾಸಣೆಗೆ ಕರೆ ತಂದ ಸಿಐಡಿ ಟೀಮ್ | CID | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada