• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ

Any Mind by Any Mind
January 30, 2023
in Top Story, ವಿದೇಶ
0
ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ
Share on WhatsAppShare on FacebookShare on Telegram

 ವಾಯವ್ಯ ಪಾಕಿಸ್ತಾನದ ಪೇಷಾವರದ ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಟ 46 ಮಂದಿ ಸಾವನ್ನಪ್ಪಿದ್ದು 147 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಖೈಬರ್ ಪಖ್ತೂಂಕ್ವ ಪ್ರಾಂತದ ರಾಜಧಾನಿ ಪೇಷಾವರದಲ್ಲಿರುವ ಮಸೀದಿಯಲ್ಲಿ ಸೋಮವಾರ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಪ್ರಾಂತ್ಯದ ಪೊಲೀಸ್ ಪ್ರಧಾನ ಕಚೇರಿ, ಉಗ್ರ ನಿಗ್ರಹ ಇಲಾಖೆ ಸಹಿತ ಹಲವು ಸರಕಾರಿ ಕಚೇರಿಗಳಿರುವ ಅತ್ಯಂತ ಬಿಗಿಭದ್ರತೆಯ ಕಟ್ಟಡದಲ್ಲಿಯೇ ಇರುವ ಮಸೀದಿಯಲ್ಲಿ ದಾಳಿ ನಡೆದಿದ್ದು ಮೃತರು, ಗಾಯಾಳುಗಳಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿಗಳು ಎಂದು ಪೇಷಾವರದ ಹಿರಿಯ ಪೊಲೀಸ್ ಅಧಿಕಾರಿ ಸಾದಿಖ್ ಖಾನ್ ತಿಳಿಸಿದ್ದಾರೆ. ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೇಷಾವರ ಪೊಲೀಸ್ ಮುಖ್ಯಸ್ಥ ಇಜಾಝ್ ಖಾನ್ ಹೇಳಿದ್ದಾರೆ.

ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಮಧ್ಯಾಹ್ನ 1:40ರ ಸುಮಾರಿಗೆ  ಮಸೀದಿಯನ್ನು ಪ್ರವೇಶಿಸಿದ ಆತ್ಮಾಹುತಿ ದಾಳಿಕೋರ  ತನ್ನ ಸೊಂಟಕ್ಕೆ ಕಟ್ಟಿದ್ದ ಬಾಂಬ್‌ ಅನ್ನು ಸ್ಫೋಟಿಸಿಕೊಂಡಿದ್ದಾನೆ. ಆಗ ಮಸೀದಿಯಲ್ಲಿ ಸುಮಾರು 200 ಕ್ಕೂ ಜನರು ಪ್ರಾರ್ಥನೆಗಾಗಿ ಸೇರಿದ್ದರು. ಸ್ಫೋಟದ ತೀವ್ರತೆಗೆ ಮಸೀದಿಯ ಛಾವಣಿ ಛಿದ್ರಗೊಂಡು ಒಂದು ಭಾಗ ನೆಲಕ್ಕೆ ಉರುಳಿದೆ. ಮಸೀದಿಯ ಕಟ್ಟಡಕ್ಕೂ ಹಾನಿಯಾಗಿದ್ದು ಕುಸಿದು ಬಿದ್ದ ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಂಬ್ ದಾಳಿಯನ್ನು ಖಂಡಿಸಿರುವ ಪಾಕ್ ಪ್ರಧಾನಿ ಶಹಬಾಝ್ ಶರೀಫ್, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ನೆರವು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾಳಿಯ ಹಿಂದಿರುವವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಶರೀಫ್ ಹೇಳಿದ್ದಾರೆ.

ಅಫ್ಘಾನಿಸ್ತಾನದ ಗಡಿಯ ಬಳಿಇರುವ ಖೈಬರ್ ಪಖ್ತೂಂಕ್ವಾ ಪ್ರಾಂತದ ರಾಜಧಾನಿಯಾಗಿರುವ ಪೇಷಾವರದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಭಯೋತ್ಪಾದಕ ದಾಳಿ ನಡೆದಿದೆ. ಪಾಕಿಸ್ತಾನಿ ತಾಲಿಬಾನ್ ಎಂದು ಗುರುತಿಸಿಕೊಂಡಿರುವ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಪ್ರತ್ಯೇಕ ಸಂಘಟನೆಯಾಗಿದ್ದರೂ ಅಫ್ಘಾನ್ನಲ್ಲಿ ಆಡಳಿತದಲ್ಲಿರುವ ತಾಲಿಬಾನ್ಗೆ ನಿಕಟವಾಗಿದೆ. ಪಾಕಿಸ್ತಾನ ಸರಕಾರದ ಜತೆ ಮಾಡಿಕೊಂಡಿದ್ದ ಕದನ ವಿರಾಮ ಒಪ್ಪಂದವನ್ನು ಕಳೆದ ನವೆಂಬರ್ನಲ್ಲಿ  ರದ್ದುಗೊಳಿಸಿದ್ದ ಟಿಟಿಪಿ, ದೇಶದಲ್ಲಿ ಮತ್ತೆ ದಾಳಿ ಮುಂದುವರಿಸುವ ಎಚ್ಚರಿಕೆ ನೀಡಿತ್ತು.

Security officials and rescue workers gather at the site of suicide bombing inside a mosque, in Peshawar, Pakistan, Monday, Jan. 30, 2023. A suicide bomber struck Monday inside a mosque in the northwestern Pakistani city of Peshawar, killing multiple people and wounding scores of worshippers, officials said. (AP Photo/Zubair Khan)

ಹೊಣೆ ಹೊತ್ತ ಪಾಕ್ ತಾಲಿಬಾನ್

ಸುಮಾರು 50 ಮಂದಿಯ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕ್ ತಾಲಿಬಾನ್ ಅಥವಾ ಟಿಟಿಪಿ ವಹಿಸಿಕೊಂಡಿದೆ ಎಂದು ವರದಿಯಾಗಿದೆ.

ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯನ್ನು ತಮ್ಮ ಸಂಘಟನೆ ನಡೆಸಿದೆ ಎಂದು ಟಿಟಿಪಿಯ ಕಮಾಂಡರ್ ಸರ್ಬಕಾಫ್ ಮುಹಮ್ಮದ್ ಹೇಳಿರುವುದಾಗಿ ವರದಿಯಾಗಿದೆ.

 ಇದು ಕಳೆದ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಕೊಲ್ಲಲ್ಪಟ್ಟ ತನ್ನ ಸಹೋದರನ ಸಾವಿಗೆ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಕೊಲ್ಲಲ್ಪಟ್ಟ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿಯ ಸಹೋದರ ಹೇಳಿದ್ದಾನೆ.

Previous Post

ರಾಹುಲ್ ಗಾಂಧಿ ಜಮ್ಮು ಕಾಶ್ಮೀರಕ್ಕೆ ಹೋಗುವ ಮುನ್ನ ತಾಯಿ ಮತ್ತು ತಂಗಿಗೆ ಏನ್ ಹೇಳಿದರು..ಕೇಳಿ : Priyank Gandhi

Next Post

ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada