• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇಲಾಧಿಕಾರಿಗಳ ಕಿರುಕುಳ:  ತಾಲ್ಲೂಕು ಆಡಳಿತ ಸೌಧದ ಬಳಿ ಶಿಕ್ಷಕ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ಇದೀಗ
0
ಮೇಲಾಧಿಕಾರಿಗಳ ಕಿರುಕುಳ:  ತಾಲ್ಲೂಕು ಆಡಳಿತ ಸೌಧದ ಬಳಿ ಶಿಕ್ಷಕ ಆತ್ಮಹತ್ಯೆ
Share on WhatsAppShare on FacebookShare on Telegram

ವಿಜಯಪುರ: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಬಳಿ ಮರಕ್ಕೆ ನೇಣು ಹಾಕಿಕೊಂಡು ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ.

ADVERTISEMENT

ತಾಲ್ಲೂಕಿನ ಸಾಸಾಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ಮಲ್ಲಪ್ಪ ನಾಯಕಲ್(54) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲಿಸ್ ತನಿಖೆಯ ವೇಳೆ ಮರಣ ಪೂರ್ವ ಶಿಕ್ಷಕ ಬರೆದ ಪತ್ರ ಪತ್ತೆಯಾಗಿದೆ. ತನ್ನ ಆತ್ಮಹತ್ಯೆಗೆ ಸಾಸಬಾಳ ಶಾಲೆಯ ಹಿಂದಿನ ಮುಖ್ಯೋಪಾಧ್ಯಾಯ ಎಸ್.ಎಲ್. ಭಜಂತ್ರಿ, ಸಿಂದಗಿ ಬಿಇಓ ಎಂ.ಎಚ್.ಹರನಾಳ, ಗೋಲಗೇರಿ ಸಿಆರ್‌ಪಿ ಜಿ.ಎನ್.ಪಾಟೀಲ ಹಾಗೂ ಸದರಿ ಶಾಲೆಯ ಶಿಕ್ಷಕ ಬಿ.ಎನ್‌.ತಳವಾರ ಇವರು ನೀಡುತ್ತಿರುವ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

ಡೆತ್’ನೋಟ್’ನಲ್ಲಿ ಏನಿದೆ ?

ಸದರಿ ಶಾಲೆಯ ಹಿಂದಿನ ಮುಖ್ಯೋಪಾಧ್ಯಾಯ ಎಸ್. ಎಲ್. ಭಜಂತ್ರಿ, ಮುಖ್ಯೋಪಾಧ್ಯಾಯ ಹುದ್ದೆಗೆ ಸಂಬಂಧಿಸಿದಂತೆ ನನಗೆ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಹಸ್ತಾಂತರ ಮಾಡದೇ, ಬಸವರಾಜ ಎಂಬವರಿಗೆ ಬಿಟ್ಟು ಕೊಟ್ಟಿದ್ದರು. ಅಧಿಕಾರ ಬಿಟ್ಟುಕೊಟ್ಟ ಬಳಿಕ ಭಜಂತ್ರಿ ಸತಾಯಿಸಿದ್ದಾರೆ. ಈ ಬಗ್ಗೆ ಸಿಂದಗಿ ಬಿಇಒ ಅವರ ಗಮನಕ್ಕೆ ತಂದಿದ್ದರೂ ಕ್ರಮಕೈಗೊಂಡಿಲ್ಲ. ಬದಲಾಗಿ ಸಿಂದಗಿ ಬಿಇಓ ಎಚ್.ಎಂ. ಹರಿನಾಳ ತನಗೇ ನೋಟಿಸ್ ಕೊಡುವ ಮೂಲಕ ಕಿರುಕುಳ ನೀಡುತ್ತಿದ್ದರು. ಗ್ರಾಮದ ಸಂಗಮೇಶ ಚಿಂಚೋಳಿ ಎಂಬವರಿಂದ ನನ್ನ ವಿರುದ್ಧ ಆರೋಪ ಮಾಡಿಸಿ ಸಿಆರ್ ಪಿ ಹಾಗೂ ಸಂಗಮೇಶ ಇವರು ನನ್ನಿಂದ ಹಣ ಪಡೆದಿದ್ದರು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

ಬಿಸಿಯೂಟ ಯೋಜನೆ ಅಡಿಯಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದ ಎಂದು ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದರು. ನನಗಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಆಗಿದೆ ಎಂದು ಪತ್ರದಲ್ಲಿ ತಮ್ಮ ಸಾವಿಗೆ ಕಾರಣವಾದ ಮೇಲಾಧಿಕಾರಿಗಳು, ಅವರು ನೀಡುತ್ತಿದ್ದ ಕಿರುಕುಳದ ಕುರಿತು ವಿವರಿಸಿದ್ದಾರೆ.

ನನ್ನ ಸಾವಿನ ಬಳಿಕ ನನ್ನ ಹೆಂಡತಿ, ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಸಸ್ಪೆಂಡ್

ಗೋಲಗೇರಿ ವಲಯ ಶಿಕ್ಷಣ ಇಲಾಖೆ ಸಿಆರ್‌ಪಿ ಜಿ.ಎನ್.ಪಾಟೀಲ, ಸಾಸಾಬಾಳ ಜಿಪಿಟಿ ಸಹಶಿಕ್ಷಕ ಬಿ.ಎಂ.ತಳವಾರ, ಮಾಡಬಾಳ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಎಸ್.ಎಲ್.ಭಜಂತ್ರಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಶಿರಹಟ್ಟಿಮಠ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕ್ಷೇತ್ರಶಿಕ್ಷಣಾಧಿಕಾರಿ ಹರನಾಳ ಅವರನ್ನು ಅಮಾನತುಗೊಳಿಸುವ ಕುರಿತಾಗಿ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ.

Tags: Suicide CaseVijayapura
Previous Post

ಮೈಸೂರು-ಕುಶಾಲನಗರ ಹೆದ್ದಾರಿ: ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚನೆ

Next Post

Kumaraswamy :ಡಬಲ್ ಇಂಜಿನ್ ಸರ್ಕಾರ ಅಲ್ಲ ತ್ರಿಬಲ್ ಇಂಜಿನ್ ಸರ್ಕಾರ ಇದು ಹೆಚ್ಡಿಕೆ ಕಿಡಿ ..! | #pratidhvaninews

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
Kumaraswamy :ಡಬಲ್ ಇಂಜಿನ್ ಸರ್ಕಾರ ಅಲ್ಲ ತ್ರಿಬಲ್ ಇಂಜಿನ್ ಸರ್ಕಾರ ಇದು ಹೆಚ್ಡಿಕೆ ಕಿಡಿ ..! | #pratidhvaninews

Kumaraswamy :ಡಬಲ್ ಇಂಜಿನ್ ಸರ್ಕಾರ ಅಲ್ಲ ತ್ರಿಬಲ್ ಇಂಜಿನ್ ಸರ್ಕಾರ ಇದು ಹೆಚ್ಡಿಕೆ ಕಿಡಿ ..! | #pratidhvaninews

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada