• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in Top Story, ಕರ್ನಾಟಕ
0
ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು
Share on WhatsAppShare on FacebookShare on Telegram

ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಜರುಗಿದೆ‌.

ADVERTISEMENT

ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿತ್ರಮ್ಮ (35) ಬುಧವಾರ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಗ್ರಾಮಕ್ಕೆ ನೀರು ಪೂರೈಸುವ ಪೈಪ್’ನಲ್ಲಿ ಚರಂಡಿ ನೀರು ಸೇರ್ಪಡೆಯಾದ ಪರಿಣಾಮ ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಬೇಧಿ ಉಲ್ಬಣವಾಗಿದೆ.

30 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಫೆ. 14 ರಂದು 24 ಜನ, ಫೆ.15 ರಂದು 6 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 15 ಜನ ದಾಖಲಾಗಿದ್ದು, ತೆಲಂಗಾಣದ ನಾರಾಯಣಪೇಟೆಯಲ್ಲಿ 3, ಉಳಿದವರಿಗೆ ಅನಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಸ್ಪತ್ರೆಗೆ ಡಿಎಚ್ಒ ಭೇಟಿ

ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ಹಲವರು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಡಿಎಚ್’ಒ ಡಾ.ಗುರುರಾಜ ಹಿರೇಗೌಡರ್, ಜಿಲ್ಲಾ ಸರ್ಜನ್ ಡಾ.ರಿಜ್ವಾನಾ ಭೇಟಿ ನೀಡಿ ಪರಿಶೀಲನೆ ನಡೆಸಿ, ರೋಗಿಗಳನ್ನು ಗುಣಪಡಿಸಲು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು‌.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಗುರುರಾಜ ಹಿರೇಗೌಡರ್ ಸುದ್ದಿಗಾರರೊಂದಿಗೆ ಮಾತನಾಡಿ, 30 ಜನ ಅಸ್ವಸ್ಥಗೊಂಡಿದ್ದು, 15 ಜನ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಮಗೆ ಮಾಹಿತಿ ಬಂದ ತಕ್ಷಣ ಅನಪುರ, ಪಿಎಚ್‌’ಸಿ ಕೊಂಕಲ್ ನಲ್ಲಿ ಸರ್ವೇಕ್ಷಣಾಧಿಕಾರಿಯನ್ನು ನೇಮಿಸಲಾಗಿದೆ. ಅನಪುರ ಗ್ರಾಮದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದರು.

ಒಂದೊಂದು ತಂಡದಲ್ಲಿ ಒಬ್ಬ ಮೆಡಿಕಲ್ ಆಫೀಸರ್, ಪಿಎಚ್ ಸಿಒ, ಮೂರು ಸಿಎಎಚ್’ಸಿ ಗಳು, ಎಚ್’ಐಒಯು ಹಾಗೂ ನಾಲ್ಕು ಆಶಾ ಕಾರ್ಯಕರ್ತರನ್ನು ನೇಮಿಸಲಾಗಿದೆ. ಅಧಿಕಾರಿಗಳ ತಂಡ ಅನಪುರ ಗ್ರಾಮದಲ್ಲಿ ಬೀಡು ಬಿಟ್ಟಿದೆ ಎಂದು ವಿವರಿಸಿದರು‌.

ಕಲುಷಿತ ನೀರು ಸೇವನೆಯಿಂದ ಈ ಘಟನೆಯಾಗಿದೆ ಎಂಬ ಶಂಕೆಯಿದೆ. ಕರೆಮ್ಮ ದೇವಸ್ಥಾನ, ಚೌಡ ಕಟ್ಟಿ ಓಣಿಯಲ್ಲಿ ಪೈಪ್ ಲೈನ್ ಸೋರಿಕೆಯಿಂದ ಆಗಿದೆ ಎಂಬ ಶಂಕೆಯಿದೆ. ಗ್ರಾಮದ ನೀರಿನ ಟ್ಯಾಂಕ್, ಕೊಳವೆ ಬಾವಿಯಿಂದ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.

ಕುಡಿಯಲು ಯೋಗ್ಯವಲ್ಲದ ನೀರಿನ ಮೂಲ ಕೂಡಲೇ ನಿಲ್ಲಿಸಲು ಪಂಚಾಯಿತಿ ಪಿಡಿಒ ಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು‌‌.

Tags: ಯಾದಗಿರಿ ಜಿಲ್ಲೆ
Previous Post

ಮಾಧ್ಯಮ ಸ್ವಾತಂತ್ರ್ಯವೇ ಪ್ರಜಾಪ್ರಭುತ್ವದ ಶ್ರೀರಕ್ಷೆ

Next Post

ಗೋಡ್ಸೆ ಸಂತತಿ ಸೋಲಿಸುವುದೇ ಕಾಂಗ್ರೆಸ್ ಗುರಿ: ಬಿ.ಕೆ.ಹರಿಪ್ರಸಾದ್

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಗೋಡ್ಸೆ ಸಂತತಿ ಸೋಲಿಸುವುದೇ ಕಾಂಗ್ರೆಸ್ ಗುರಿ: ಬಿ.ಕೆ.ಹರಿಪ್ರಸಾದ್

ಗೋಡ್ಸೆ ಸಂತತಿ ಸೋಲಿಸುವುದೇ ಕಾಂಗ್ರೆಸ್ ಗುರಿ: ಬಿ.ಕೆ.ಹರಿಪ್ರಸಾದ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada