ಕಲಬುರಗಿ: ಪತ್ನಿಯ ಶೀಲ ಶಂಕಿಸಿ ಪತಿ ಆಕೆ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ನಡೆದಿದೆ.
ಮೃತ ಗೃಹಿಣಿಯನ್ನು ಫರೀದಾ ಬೇಗಂ(39) ಎಂದು ಗುರುತಿಸಲಾಗಿದೆ.
ಇನ್ನು ಆರೋಪಿ ಪತಿ ಏಜಾಜ್ ಅಹ್ಮದ್ ಕೊಲೆಗೈದ ಆರೋಪಿ.
ಏಜಾಜ್ ಹಾಗೂ ಫರೀದಾ ಬೇಗಂ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. 13 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಪತ್ನಿಯ ನಡತೆ ಶಂಕಿಸುತ್ತಿದ್ದ ಪತಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಇದೇ ಅಲ್ಲದೆ ಶಾಲೆಗೆ ಹೋಗದಂತೆ ಪ್ರತಿದಿನ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಸ್ಪೇಷನ್ ಬಜಾರ್ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.