• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು ಅರ್ಕಾವತಿ ಲೇಔಟ್‌ ನಲ್ಲಿ ಒಂದು ಗುಂಟೆ ಜಮೀನು ಕೂಡ ಡಿ ನೋಟಿಫೈ ಮಾಡಿಲ್ಲ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story
0
ನಾನು ಅರ್ಕಾವತಿ ಲೇಔಟ್‌ ನಲ್ಲಿ ಒಂದು ಗುಂಟೆ ಜಮೀನು ಕೂಡ ಡಿ ನೋಟಿಫೈ ಮಾಡಿಲ್ಲ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ನಾನು ಅರ್ಕಾವತಿ ಲೇಔಟ್‌ ನಲ್ಲಿ ಒಂದು ಗುಂಟೆ ಜಮೀನನ್ನು ಕೂಡ ಡಿ ನೋಟಿಫೈ ಮಾಡಿಲ್ಲ, ಇದನ್ನೇ ಕೆಂಪಣ್ಣನವರ ಸಮಿತಿ ಹೇಳಿದೆ. ಬೊಮ್ಮಾಯಿ ಹೇಳುತ್ತಿರುವುದು ಶುದ್ಧ ಸುಳ್ಳು ಎಂದು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಹರಿಹಾಯ್ದರು.

ADVERTISEMENT

ಅವರಿಂದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2003ರಲ್ಲಿ ಅರ್ಕಾವತಿ ಲೇಔಟ್‌ ಆದದ್ದು. ನಾವು ಅಧಿಕಾರಕ್ಕೆ ಬರುವ ಮೊದಲೇ ಇವೆಲ್ಲ ನಡೆದು ನೋಟಿಫಿಕೇಷನ್‌ ಆಗಿತ್ತು, 2750 ಎಕರೆಗೆ ನೋಟಿಫಿಕೇಷನ್‌ ಆಯ್ತು. ನಂತರ 1919 ಎಕರೆ 13 ಗುಂಟೆಗೆ ಅಂತಿಮವಾಗಿ ನೋಟಿಫಿಕೇಷನ್‌ ಆಯ್ತು. ಇದನ್ನು ಹೈಕೋರ್ಟ್‌ ನಲ್ಲಿ ಚಾಲೆಂಜ್‌ ಮಾಡಿದ್ರು. ಹೈಕೋರ್ಟ್‌ ನ ಏಕಸದಸ್ಯ ಪೀಠ ಈ ಮನವಿಯನ್ನು ತಿರಸ್ಕಾರ ಮಾಡಿತು. ನಂತರ ವಿಭಾಗೀಯ ಪೀಠಕ್ಕೆ ಹೋದರು, ಅಲ್ಲಿ ಬಿಡಿಎ ಮಾಡಿದ್ದ ನೋಟಿಫಿಕೇಷನ್‌ ಅನ್ನು ಎತ್ತಿಹಿಡಿಯಲಾಯಿತು. ಅದರ ವಿರುದ್ಧ ಸೊಂಡೂರು ರಾಮಸ್ವಾಮಿ ಮತ್ತು ಇನ್ನಿತರರು ಸುಪ್ರೀಂ ಕೋರ್ಟ್‌ ಗೆ ಹೋದರು, ಅಲ್ಲಿ ಕೂಡ ವಿಭಾಗೀಯ ಪೀಠ ಹೇಳಿದ್ದನ್ನು ಪುನರುಚ್ಚಾರ ಮಾಡಿ ಕೆಲವು ನಿರ್ದೇಶನಗಳನ್ನು ನೀಡಿದರು. ಇವುಗಳನ್ನು ಪರಿಶೀಲನೆ ಮಾಡಲು ಮಾನದಂಡಗಳನ್ನು ನಿಗದಿ ಮಾಡಿ 5 ಟೀಮ್‌ ಗಳನ್ನು ರಚಿಸಿ,  ಕೆಎಎಸ್‌ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ಮಾಡಿದ್ರು. ಇದು ಆದದ್ದು ಯಡಿಯೂರಪ್ಪ ಅವರ ಕಾಲದಲ್ಲಿ. ಇದಾದ ನಂತರ ಈ ಟೀಮ್‌ ಗಳು ಪರೀಕ್ಷೆ ಮಾಡಿ ಕೆಲವೆಲ್ಲ ಭೂಮಿಗಳನ್ನು ಡಿಲೀಟ್‌ ಮಾಡಿ ಬಿಡಿಎ ಗೆ ಒಂದು ವರದಿ ನೀಡಿದ್ರು. ಬಿಡಿಎ ನವ್ರು ಈ ವರದಿಯಲ್ಲಿ ಪರೀಕ್ಷಿಸಿ ಅನುಮೋದನೆ ನೀಡಿದ್ರು. ಈ ಫೈಲ್‌ ಜಗದೀಶ್‌ ಶೆಟ್ಟರ್‌ ಅವರು ಮುಖ್ಯಮಂತ್ರಿಯಾಗಿರುವಾಗ ಅವರ ಬಳಿ ಹೋಗಿತ್ತು, ಚುನಾವಣಾ ನೀತಿಸಂಹಿತೆ ಇದೆ ಎಂದು ಫೈಲ್‌ ಅನ್ನು ಅವರು ವಾಪಸು ಕಳುಹಿಸಲಾಯಿತು.

ನಮ್ಮ ಸರ್ಕಾರ ಬಂದ ಸುಪ್ರೀಂ ಕೋರ್ಟ್‌ ನ ಮಾನದಂಡಗಳ ಪ್ರಕಾರ ಮಾಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳಿದ ಮೇಲೆ ನಾನು ಅನುಮೋದನೆ ಕೊಟ್ಟಿದ್ದೆ.  ಜಗದೀಶ್‌ ಶೆಟ್ಟರ್‌ ಅವರು ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸದನದಲ್ಲಿ ಪ್ರಸ್ತಾಪ ಮಾಡಿದ್ರು, ನಾನು ಕೂಡಲೇ ಒಂದು ನ್ಯಾಯಾಂಗ ಸಮಿತಿ ರಚನೆ ಮಾಡಿ ತನಿಖೆ ಮಾಡಿಸೋಣ ಎಂದು ಹೈಕೋರ್ಟ್‌ ನ ನಿವೃತ್ತ ನ್ಯಾಯಮೂರ್ತಿಗಳಾದ ಕೆಂಪಣ್ಣನವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದ್ದೆ. ಅವರು 2 ವರ್ಷಗಳ ಕಾಲ ವಿಚಾರಣೆ ಮಾಡಿ ವರದಿ ನೀಡಿದ್ದಾರೆ. ಈ ವರದಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಿಲ್ಲ ಎಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇದು ಕುಮಾರಸ್ವಾಮಿ, ರಾಜ್ಯಪಾಲರು, ಯಡಿಯೂರಪ್ಪ, ಸದಾನಂದ ಗೌಡರು, ಜಗದೀಶ್‌ ಶೆಟ್ಟರ್‌ ಅವರ ಕಾಲದಿಂದಲೂ ನಡೆದುಕೊಂಡು ಬಂದಿದ್ದು, ಕೊನೆಗೆ ನಮ್ಮ ಬಳಿ ಬಂದಿತ್ತು. ಜಗದೀಶ್‌ ಶೆಟ್ಟರ್‌ ಕಾಲದಲ್ಲಿ ಡಿನೋಟಿಫೈ ಆಗಿಲ್ಲ, ಕುಮಾರಸ್ವಾಮಿ, ಯಡಿಯೂರಪ್ಪನವರ ಕಾಲದಲ್ಲಿ ಡಿನೋಟಿಫೈ ಆಗಿದೆ, ರಾಜ್ಯಪಾಲರ ಕಾಲದಲ್ಲೂ ಡಿನೋಟಿಫೈ ಆಗಿದೆ ಎಂದು ಹೇಳಿದ್ದಾರೆ. ಈ ವರದಿ ಬಂದ ಮೇಲೆ ವಿಜಯಾಭಾಸ್ಕರ್‌ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಮಾಡಿದ್ದೆ, ಮಹೇಂದ್ರ ಜೈನ್‌ ಎಂಬ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದವರು, ರಮಣ ರೆಡ್ಡಿ ಅವರು ಹೀಗೆ ಸದಸ್ಯರಿದ್ದರು. ಈ ಸಮಿತಿಗೆ ನ್ಯಾ. ಕೆಂಪಣ್ಣನವರ ಸಮಿತಿಯ ವರದಿ ಆಧರಿಸಿ ಯಾವ ಕ್ರಮ ತೆಗೆದುಕೊಳ್ಳಬಹುದು ಎಂದು ಸಲಹೆ ನೀಡಿ ಎಂದು ಕೊಟ್ಟಿದ್ದೆವು ಎಂದರು.

ಭೂಮಿ ಕಳೆದುಕೊಂಡವರು ಮತ್ತೆ ಹೈಕೋರ್ಟ್‌ ಗೆ ಹೋದರು. 27-9-2021ರಲ್ಲಿ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿದ್ದರು, ಹೈಕೋರ್ಟ್‌ ನವರು ಮತ್ತೆ ಒಂದು ಸಮಿತಿ ರಚನೆ ಮಾಡಿದರು. ಕೇಶವ ನಾರಾಯಣ ಎಂಬ ಹೈಕೋರ್ಟ್‌ ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ಮಾಡಿದರು. ಸಂದೀಪ್‌ ಧವೆ ನಿವೃತ್ತ ಐಎಎಸ್‌ ಅಧಿಕಾರಿ, ಮೇಘರಿಕ್‌ ಎಂಬ ನಿವೃತ್ತ ಐಪಿಎಸ್‌ ಅಧಿಕಾರಿಗಳು ಈ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ. ಇದು ಇನ್ನು ಪೂರ್ಣವಾಗಿಲ್ಲ.

ಕೇಶವ ನಾರಾಯಣ ಅಧ್ಯಕ್ಷತೆಯ ಸಮಿತಿಯು ಹಿಂದೆ ಕೆಂಪಣ್ಣನವರ ಸಮಿತಿ ನೀಡಿದ್ದ ವರದಿಯನ್ನು ಸೀಜ್‌ ಮಾಡಿದೆ. ಈಗ ಈ ಸಮಿತಿ ವರದಿ ನೀಡಬೇಕು. ಹೀಗಿರುವಾಗ ಮುಖ್ಯಮಂತ್ರಿ ಸ್ಥಾನದಲ್ಲಿರುವ ಬೊಮ್ಮಾಯಿ ಅವರು ಜವಾಬ್ದಾರಿಯಿಂದ ಉತ್ತರ ನೀಡುವುದು ಬಿಟ್ಟು ಸಿದ್ದರಾಮಯ್ಯ ನವರ ಕಾಲದಲ್ಲಿ 852 ಎಕರೆ ಡಿನೋಟಿಫೈ ಆಗಿದೆ ಎಂದು ಸದನಕ್ಕೆ ಸುಳ್ಳು ಹೇಳುವುದು ಸರಿಯಲ್ಲ ಎಂದು ಹರಿಹಾಯ್ದರು.

ಈ ಸರ್ಕಾರ ಬಂದು 4 ವರ್ಷ ಆಯಿತು, ಈ ವೇಳೆ ವರದಿಯನ್ನು ಸದನದ ಮುಂದಿಟ್ಟು ಕ್ರಮ ಕೈಗೊಳ್ಳಬೇಕಿತ್ತು. ನಾವು ಯಾವಾಗ ಈ ಸರ್ಕಾರದ ಮೇಲೆ 40% ಕಮಿಷನ್‌ ಆರೋಪವನ್ನು ಆಂದೋಲನದ ರೀತಿ ಮಾಡಿ, ಇವರ ಹಗರಣಗಳನ್ನು ಹೊರ ತರಲು ಶುರು ಮಾಡಿದೆವೋ ತಮ್ಮ ಮೇಲೆ ಇರುವ ಆರೋಪ ಮಾಡಿ ಮುಚ್ಚಿಕೊಳ್ಳಲು ನಮ್ಮನ್ನು ದೂರುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಟ್‌ ಕಾಯಿನ್‌ ಹಗರಣ ಮುಚ್ಚಿಹಾಕಿದ್ರು, ಪಿಎಸ್‌ಐ ನೇಮಕಾತಿ ಹಗರಣ ಮುಚ್ಚಿ ಹಾಕಿದ್ರು, 40% ಕಮಿಷನ್‌ ಹಗರಣ ಮುಚ್ಚಿಹಾಕಲು ಹೊರಟಿದ್ದಾರೆ, ಕೊರೊನಾ ಕಾಲದಲ್ಲಿ ವೈದ್ಯಕೀಯ ಉಪರಕಣಗಳ ಖರೀದಿಯಲ್ಲಿ ನಡೆದಿದ್ದ ಅವ್ಯವಹಾರವನ್ನು ಮುಚ್ಚಿ ಹಾಕಲಾಗಿದೆ. ಹೀಗೆ ಅನೇಕ ಹಗರಣಗಳನ್ನು ಮುಚ್ಚಿಹಾಕಲಾಗಿದೆ ಎಂದು ಆರೋಪಿಸಿದರು.

ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್‌ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

ಇಲ್ಲಿ ಹರಶ್ಚಂದ್ರನ ಮೊಮ್ಮಕ್ಕಳ ಹಾಗೆ ಮಾತನಾಡುತ್ತಾರೆ

ನಾವು ಲೋಕಾಯುಕ್ತ ಮುಚ್ಚಲೂ ಇಲ್ಲ, ಲೋಕಾಯುಕ್ತರನ್ನು ತೆಗೆದುಹಾಕುವುದಾಗಲೀ ಮಾಡಿಲ್ಲ.  ಗುಜರಾತ್‌, ಗೋವಾ, ಅಸ್ಸಾಂ, ಮಧ್ಯಪ್ರದೇಶಗಳಲ್ಲಿ ಯಾಕಿನ್ನು ಎಸಿಬಿ ಮುಚ್ಚಿಲ್ಲ? ದೇಶದ 16 ರಾಜ್ಯಗಳು ಲೋಕಾಯುಕ್ತದ ಜೊತೆಗೆ ಎಸಿಬಿಯನ್ನು ಹೊಂದಿದೆ. ತಮ್ಮನ್ನು ತಾವು ಚೌಕಿದಾರ್‌ ಎಂದು ಕರೆದುಕೊಳ್ಳುವವರು ಯಾಕೆ ಇನ್ನು ಲೋಕಪಾಲ್‌ ಅನ್ನು ಮಾಡಿಲ್ಲ? ಮೂರು ವರ್ಷಗಳ ಬಿಜೆಪಿ ಸರ್ಕಾರ ಎಸಿಬಿ ಮುಚ್ಚದೆ ಸುಮ್ಮನಿದ್ದದ್ದು ಯಾಕೆ? ಅಡ್ವೋಕೇಟ್‌ ಜನರಲ್‌ ಮೂಲಕ ಎಸಿಬಿ ರಚನೆಯನ್ನು ಸಮರ್ಥನೆ ಮಾಡಿಸಿರುವುದು ಯಾಕೆ? ಕೋರ್ಟಿನಲ್ಲಿ ಹಿಂದಿನ ಸರ್ಕಾರ ತಪ್ಪು ಮಾಡಿದೆ, ಎಸಿಬಿ ರದ್ದು ಮಾಡಿ ಎಂದು ಹೇಳಿಸಬೇಕಿತ್ತು. ಎಸಿಬಿ ಪರವಾಗಿರುವವರು ಬಿಜೆಪಿಯವರೇ. ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಎಸಿಬಿ ಇಟ್ಟುಕೊಂಡಿದ್ದಾರೆ, ಇಲ್ಲಿ ಮಾತ್ರ ಹರಿಶ್ಚಂದ್ರನ ಮೊಮ್ಮಕ್ಕಳ ಹಾಗೆ ಮಾತನಾಡುತ್ತಾರೆ ಎಂದು ಗುಡುಗಿದರು.

Tags: Basavaraja BommaiCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಛತ್ತೀಸ್ ಘಡದಲ್ಲಿ ಭೀಕರ ಅಪಘಾತ: ಟ್ರಕ್- ವ್ಯಾನ್ ನಡುವೆ ಡಿಕ್ಕಿ- 11 ಮಂದಿ ಸಾವು

Next Post

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಈಡೇರಿಕೆಗೆ ಸಿಎಂ ಅಸ್ತು..! 

Related Posts

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಗೌರವ ಸಿಗಲಿದೆ. ಮೇಲಧಿಕಾರಿಗಳೊಂದಿಗೆ ಮೃದುವಾಗಿ ಮಾತನಾಡಿ. ಇಂದು ಸಾಲದ ವಸೂಲಾತಿಗೆ ಉತ್ತಮ ದಿನ....

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
Next Post
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಈಡೇರಿಕೆಗೆ ಸಿಎಂ ಅಸ್ತು..! 

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಈಡೇರಿಕೆಗೆ ಸಿಎಂ ಅಸ್ತು..! 

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada