• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೋದಿ ಅಮಿತ್‌ ಶಾ ದೇಶಕ್ಕಾಗಿ ಕೆಲಸ ಮಾಡೋದು ಬಿಟ್ಟು ಚುನಾವಣಾ ಏಜೆಂಟರಾಗಿದ್ದಾರೆ ಸಿದ್ದು ಆರೋಪ ..!

Any Mind by Any Mind
February 27, 2023
in ರಾಜಕೀಯ
0
ಮೋದಿ ಅಮಿತ್‌ ಶಾ ದೇಶಕ್ಕಾಗಿ ಕೆಲಸ ಮಾಡೋದು ಬಿಟ್ಟು ಚುನಾವಣಾ ಏಜೆಂಟರಾಗಿದ್ದಾರೆ ಸಿದ್ದು ಆರೋಪ ..!
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚಿಗೆ ನರೇಂದ್ರ ಮೋದಿ (Narendra Modi) ಮತ್ತು ಅಮಿತ್‌ ಶಾ (Amit Shah) ನಮ್ಮ ರಾಜ್ಯಕ್ಕೆ ಅದೆ ಚುನಾವಣಿ ಹತ್ತಿರ ಬರುತ್ತಿದೆ ಈ ಕಾರಣಕ್ಕೆ ಇಷ್ಟು ದಿನ ಎಲ್ಲಿ ಹೋಗಿದ್ರು ಇವರು ದೇಶದ ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಏಜೆಂಟ್​ ಕೆಲಸ ಮಾಡುತ್ತಾ (Agent working) ಇದ್ದಾರೆ ಜನರಿಗಾಗಿ ಅಭಿವೃದ್ದಿ ಕೆಲಸ ಮಾಡೋದು ಬಿಟ್ಟು ಇವರು ಚುನಾವನಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Leader of Opposition Siddaramaiah) ಆರೋಪ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಪ್ರವಾಹ , ಬರ, ಕೋವಿಡ್‌ ನಿಂದ ನಮ್ಮ ಹಳ್ಳಿ ಜನರು ಎಷ್ಟು ನರಕ ಯಾತನೆ ಅನುಭವಿಸಿದ್ರು ಆ ಸಮಯದಲ್ಲಿ ನಮ್ಮ ರಾಜ್ಯಕ್ಕೆ ಏನು ಆದ್ರು ಕೆಲಸ ಮಾಡಿದ್ದಾರೆ ರಾಜ್ಯದ ಮುಖ್ಯಮಂತ್ರಿಗಳು ಸಚಿವರು ಕೆಲಸ ಮಾಡಿಲ್ಲ, ಮೋದಿ ಆಗಲಿ ಅಮಿತ್ ಶಾ ಕೋವಿಡ್ ನಂತಹ ಮಾರಕ ಕಾಯಿಲೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ, ಜನರ ಕಲ್ಯಾಣಕ್ಕೆ ಖರ್ಚು ಮಾಡುವ ಬದಲು ಚುನಾವಣಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ ನೋಡಿ ನಮ್ಮ ದೇಶ ಯಾವ ಕಡೆ ಸಾಗುತ್ತಿದೆ ಎಂದು ಆರೋಪಸಿದ್ದಾರೆ.

ADVERTISEMENT

ಬಜೆಟ್ ಭಾಷಣದಲ್ಲಿ ಮೋದಿ ಸರ್ಕಾರವು ನಮ್ಮ ರಾಜ್ಯದಿಂದ 4.75 ಲಕ್ಷ ಕೋಟಿಗಳಷ್ಟು ಸಂಪತ್ತನ್ನು ದೋಚಿಕೊಂಡು ಕೇವಲ 37ಸಾವಿರ ಕೋಟಿ ತೆರಿಗೆ ಪಾಲು ಕೊಡುತ್ತಿದೆ, ಇದು ಅನ್ಯಾಯವೆಂದು ಪ್ರತಿಭಟಿಸಿದ್ದೆ ಹಾಗೂ ಈ ಕುರಿತು ದಾಖಲೆಗಳನ್ನು ಒದಗಿಸಿದ್ದೆ.

ಎಂದೂ ಉಸಿರೆ ಬಿಡದಿದ್ದ ಮೋದಿಯವರು ಇತ್ತೀಚೆಗೆ ನವದೆಹಲಿಯ ಕರ್ನಾಟಕ ಭವನದ ಅಮೃತ ಮಹೋತ್ಸಹ ಹಾಗೂ ಬಾರಿಸು ಕನ್ನಡ ಡಿಂಡಿಮವ ಎಂಬ ಕಾರ್ಯಕ್ರಮದಲ್ಲಿ ತಾವು ಕರ್ನಾಟಕದ ರೈಲ್ವೆಗೆ, ಹೆದ್ದಾರಿ ಯೋಜನೆಗಳಿಗೆ ಬಹಳ ಅನುದಾನಗಳನ್ನು ಕೊಟ್ಟಿದ್ದೇವೆ ಹಾಗೂ ಅನುದಾನಗಳನ್ನು ಹೆಚ್ಚಿಸಿದ್ದೇವೆ. ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರಕ್ಕಿಂತ ಎಷ್ಟೋ ಪಾಲು ಹೆಚ್ಚು ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿ ನಮ್ಮ ಕಿವಿಯ ಮೇಲೆ ಹೂ ಇಟ್ಟಿದ್ದಾರೆ ಇನ್ನೂ ರಾಜ್ಯದ ಬಜೆಟ್‌ ನಲ್ಲಿ ಸಿಎಂ ಬೊಮ್ಮಾಯಿ ಸಹ ೨ ಬಾರಿ ಕಿವಿಗೆ ಹೂ ಇಟ್ಟಿದ್ದಾರೆ ಎಂದು ವಂಗ್ಯ ಮಾಡಿದ್ದಾರೆ.

ಕೇಂದ್ರ ಸರ್ಕಾರವೆ ಅಧಿಕೃತವಾಗಿ ಪ್ರಕಟಿಸಿರುವ ದಾಖಲೆಗಳಂತೆ, 2005 ರಿಂದ 2014ರ ಮಾರ್ಚ್‍ವರೆಗೆ 9 ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕರ್ನಾಟಕದಲ್ಲಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ ಉದ್ದ 2334 ಕಿಮೀಗಳು. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ 2014 ರಿಂದ 2022 ರವರೆಗೆ ನಿರ್ಮಿಸಿದ ಒಟ್ಟು ರಾಷ್ಟ್ರೀಯ ಹೆದ್ದಾರಿ ಉದ್ದ ಕೇವಲ 1479 ಕಿ.ಮೀ ಮಾತ್ರ. ರೈಲ್ವೆ ವಿಚಾರಕ್ಕೆ ಬಂದರೆ ಮನಮೋಹನ್‍ ಸಿಂಗ್ ಸರ್ಕಾರವು ತನ್ನ 9 ವರ್ಷಗಳಲ್ಲಿ 301 ಕಿ.ಮೀ ರೈಲ್ವೆಯನ್ನು ನಿರ್ಮಿಸಿತ್ತು.

ಮೋದಿ ಸರ್ಕಾರ 291 ಕಿ.ಮೀ ಗಳಷ್ಟು ಮಾತ್ರ ನಿರ್ಮಿಸಿದೆ. ನಮ್ಮ ರಾಜ್ಯದಲ್ಲಿ ಸುಮಾರು 18 ರೈಲ್ವೆ ಯೋಜನೆಗಳು ಚಾಲ್ತಿಯಲ್ಲಿವೆ. ಇವುಗಳಿಗೆ 14-15 ಸಾವಿರ ಕೋಟಿ ಹಣ ಬೇಕು. ಈ ಯೋಜನೆಗಳಲ್ಲಿ ತುಮಕೂರು ರಾಯದುರ್ಗ, ತುಮಕೂರು- ದಾವಣಗೆರೆ ಮಾರ್ಗಗಳೂ ಸೇರಿವೆ. ಈ ಯೋಜನೆಗಳನ್ನು ಮನಮೋಹನಸಿಂಗರು ಪ್ರಧಾನಿಯಾಗಿದ್ದಾಗ ಕೊಟ್ಟ ಕೊಡುಗೆಗಳಾಗಿವೆ. ಈ ವರ್ಷ ಚುನಾವಣೆ ಬರುತ್ತಿರುವುದರಿಂದ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಹಣ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ನಮ್ಮಿಂದ ದೋಚುವ ತೆರಿಗೆ, ಮೇಲ್ತೆರಿಗೆಗಳಿಗೂ ಮತ್ತು ನಮಗೆ ಹಂಚಿಕೆ ಮಾಡುತ್ತಿರುವ ಅನುದಾನಗಳಿಗೂ ಸಂಬಂಧವೆ ಇಲ್ಲ. 2013-14ರಲ್ಲಿ ಕೇಂದ್ರದ ಬಜೆಟ್ ಗಾತ್ರ 16.65 ಲಕ್ಷ ಕೋಟಿ ರೂ ಇತ್ತು. ಆಗ ತೆರಿಗೆ ಪಾಲು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳು ಸೇರಿ ಒಟ್ಟು 30,310 ಕೋಟಿಗಳಷ್ಟು ಅನುದಾನಗಳು ಬಂದಿದ್ದವು.

2023-24ರಲ್ಲಿ ಕೇಂದ್ರದ ಬಜೆಟ್ ಗಾತ್ರ 45.01 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಆದರೆ ರಾಜ್ಯಕ್ಕೆ ಬರಬಹುದೆಂದು ಅಂದಾಜು ಮಾಡಿರುವುದು 49 ಸಾವಿರ ಕೋಟಿ ಮಾತ್ರ. ಬಜೆಟ್ ಗಾತ್ರ ಸುಮಾರು 3 ಪಟ್ಟು ಹೆಚ್ಚಾಗಿದೆ. ಅದರ ಲೆಕ್ಕದಲ್ಲಿ ನೋಡಿದರೂ ನಮ್ಮ ರಾಜ್ಯದ 85-90 ಸಾವಿರ ಕೋಟಿ ಇರಬೇಕಿತ್ತಲ್ಲವೆ ಮೋದೀಜಿಯವರೆ? ಸತ್ಯ ಇಷ್ಟು ಸ್ಪಷ್ಟವಾಗಿರುವಾಗ ಯಾಕೆ ಸುಳ್ಳು ಹೇಳಿ ಕರ್ನಾಟಕದ ಮರ್ಯಾದಸ್ಥ ಜನರ ಕಿವಿಯ ಮೇಲೆ ಹೂಗಳನ್ನಿಡಲು ಪ್ರಯತ್ನಿಸುತ್ತೀರಿ ನಾವು ನಿಮ್ಮ ಸುಳ್ಳುಗಳನ್ನು ಕೇಳಿ ಕೇಳಿ ಬೇಸರಗೊಂಡಿದ್ದಾರೆ ನಮ್ಮ ದೇಶದ ಜನ ರಾಜ್ಯದ ಜನ ನಮ್ಮ ಕಾಂಗ್ರೆಸ್‌ ನಾಯಕರು ರಸ್ತೆಯಲ್ಲಿ ನಿಂತು ಕಿವಿಯ ಮೇಲೆ ಹೂ ಇಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ ಬಿಡು ಸಾಕು ಹೂ ಇಡುವ ಕೆಲಸ ಎಂದು ಮೋದಿ ಅಮಿತ್‌ ಶಾ ವಿರುದ್ದ ಕಿಡಿಕಾರಿದ್ದಾರೆ .

Tags: ಅಮಿತ್‌ ಶಾಏಜೆಂಟರಾಗಿದ್ದಾರೆ ಸಿದ್ದು ಆರೋಪಕನ್ನಡ ನ್ಯೂಸ್‌ಕಾಂಗ್ರೆಸ್‌ಡಿಕೆಶಿ ಶಿವಕುಮಾರುನರೇಂದ್ರ ಮೋದಿಬಿಜೆಪಿಬಿಜೆಪಿ ಹೈಕಮಾಂಡ್ಯುಪಿಎ ಸರ್ಕಾರ ಕರ್ನಾಟಕದಲ್ಲಿರಾಜ್ಯ ಸರ್ಕಾರರಾಹುಲ್‌ ಗಾಂಧಿಸಿದ್ದರಾಮಯ್ಯಸೋನಿಯಾ ಗಾಂಧಿ
Previous Post

ಮಾರ್ಚ್ 24 ರಿಂದ 26ರ ವರೆಗೆ ನಮ್ಮ ಬೆಂಗಳೂರು ಹಬ್ಬ

Next Post

ಬೆಂಗಳೂರು–ಮೈಸೂರು ಎಕ್ಸ್‌’ಪ್ರೆಸ್‌’ವೇನಲ್ಲಿ ಟೋಲ್ ಸಂಗ್ರಹ ಮುಂದೂಡಿಕೆ: ಪ್ರತಾಪ್ ಸಿಂಹ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಕೆಎಎಸ್ ಅಧಿಕಾರಿ ಅಡ್ವೊಕೇಟ್ ಜನರಲ್ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ: ಕುಲಸಚಿವೆ ವಿ.ಆರ್.ಶೈಲಜಾ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಬೆಂಗಳೂರು–ಮೈಸೂರು ಎಕ್ಸ್‌’ಪ್ರೆಸ್‌’ವೇನಲ್ಲಿ ಟೋಲ್ ಸಂಗ್ರಹ ಮುಂದೂಡಿಕೆ: ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada