• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

“ಶಿಕ್ಷಣದ ಬಗ್ಗೆ ಚರ್ಚೆಗೆ” ಯಾವಾಗ ಬರ್ತೀರಾ?: ಪ್ರಧಾನಿಗೆ 6 ಪ್ರಶ್ನೆ ಕೇಳಿದ ರಣದೀಪ್ ಸುರ್ಜೆವಾಲಾ

ಪ್ರತಿಧ್ವನಿ by ಪ್ರತಿಧ್ವನಿ
February 27, 2023
in ರಾಜಕೀಯ
0
“ಶಿಕ್ಷಣದ ಬಗ್ಗೆ ಚರ್ಚೆಗೆ” ಯಾವಾಗ ಬರ್ತೀರಾ?: ಪ್ರಧಾನಿಗೆ 6 ಪ್ರಶ್ನೆ ಕೇಳಿದ ರಣದೀಪ್ ಸುರ್ಜೆವಾಲಾ
Share on WhatsAppShare on FacebookShare on Telegram

ಬೆಂಗಳೂರು: ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಆರು ಪ್ರಮುಖ ಬಹಿರಂಗ ಪ್ರಶ್ನೆಗಳನ್ನು ಕೇಳಿದ್ದಾರೆ.

ADVERTISEMENT

ಭಾರತೀಯ ಜನತಾ ಪಕ್ಷ ಕರ್ನಾಟಕದ ಉದ್ದಗಲಕ್ಕೂ “ಬಿಜೆಪಿಯೇ ಭರವಸೆ” ಅನ್ನೋ ಅಭಿಯಾನ ನಡೆಸುತ್ತಿದ್ದು 40% ಸರ್ಕಾರ ತನ್ನ ಅಕ್ರಮ ಗಳಿಕೆಯ ಹಣದಲ್ಲಿ ಎಲ್ಲಾ ರಸ್ತೆಗಳ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವ ಮೂಲಕ ಚುನಾವಣೆಗೆ ಮುಂದಾಗಿದೆ ಎಂದು ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

ಕಳೆದ ಬಾರಿ ನಿಮ್ಮ ನೇತೃತ್ವದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟ 600 ಭರವಸೆಗಳ ಪೈಕಿ ಶೇ 10% ಭರವಸೆಗಳನ್ನೂ ನಿಮ್ಮ ಪಕ್ಷದ ಸರಕಾರದಿಂದ ಪೂರೈಸಲಾಗಿಲ್ಲ. ಈ ಬಗ್ಗೆ ಸರ್ಕಾರದ ಹಣದಲ್ಲಿ ನೀವು ನಡೆಸುತ್ತಿರುವ ಪ್ರಚಾರ ಸಭೆಯಲ್ಲಿಯಾದರೂ ಜನರಿಗೆ ಉತ್ತರದಾಯಿ ಆಗಬಲ್ಲಿರಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ “ರೋಡ್ ಷೋ(ಕಿ)” ಗಾಗಿ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಬೆಳಗಾವಿಯಲ್ಲಿ ರದ್ದು ಮಾಡಲಾಗಿದೆ. ಈ ಬಗ್ಗೆ ನೀವು ಉತ್ತರಿಸುವಿರಾ? ಅಲ್ಲದೇ ಕರ್ನಾಟಕದ 13,000 ಅನುದಾನ ರಹಿತ ಶಾಲೆಗಳ ಒಕ್ಕೂಟವಾದ ‘RUPSA’, ರಾಜ್ಯದ ಬಿಜೆಪಿ ಸರ್ಕಾರದಲ್ಲಿ 40% ಲಂಚ ನೀಡದೆ ಯಾವುದೇ ಸೇವೆ ಪಡೆಯಲು ಸಾಧ್ಯವಿಲ್ಲ ಎಂದು ತಮಗೆ ಪತ್ರ ಬರೆದು ಆರೋಪ ಮಾಡಿದ್ದರು. ಇದಕ್ಕೆ ತಾವು ಉತ್ತರವೇ ಕೊಟ್ಟಿಲ್ಲ ಯಾಕೆ? “ಪರೀಕ್ಷೆ ಪೇ ಚರ್ಚೆ” ನಡೆಸುವ ತಾವು “ಶಿಕ್ಷಣದ ಬಗ್ಗೆ ಚರ್ಚೆಗೆ” ಯಾವಾಗ ಬರ್ತೀರಾ? ಎಂದು ಕೇಳಿದ್ದಾರೆ.

ಇಡೀ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಯುವಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುತ್ತದೆ. ನೇಮಕಾತಿ ನಡೆಸುತ್ತಿರುವ ಹುದ್ದೆಗಳ ಹಂಚಿಕೆಯಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ನಿಮ್ಮ ಬಿಜೆಪಿ ಶಾಸಕರು & ಮಂತ್ರಿಗಳು ಸರ್ಕಾರದ ಹುದ್ದೆಗಳನ್ನು ಲಕ್ಷ-ಕೋಟಿಗಟ್ಟಲೆ ಹಣಕ್ಕೆ ಮಾರಾಟಕ್ಕೆ ಇಟ್ಟುಬಿಟ್ಟಿದ್ದಾರೆ! ನಿಮ್ಮದೇ ಪಕ್ಷದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಶಾಸಕರೊಬ್ಬರು ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳ ಪುತ್ರ ಪಿಎಸ್’ಐ ನೇಮಕಾತಿ ಹಗರಣದ ನೇರ ರೂವಾರಿ ಎಂದು ಆರೋಪಿಸಿದ್ದರು. ಅದರ ಬಗ್ಗೆನೂ ನಿಮ್ಮ ಭಾಷಣಕಾರರಿಗೆ ಹೇಳಿ ಒಂದು ಉತ್ತರ ಬರೆಸಿ, ಅದನ್ನು ಓದಿ ಹೇಳಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಲಕ್ಷಾಂತರ ಜನರ ಪಾಲಿಗೆ ಉದ್ಯೋಗ ಒದಗಿಸಿದ್ದ ದೇಶದ ಮಹತ್ತರ ಕಾರ್ಖಾನೆಯಾಗಿತ್ತು. ಈ ಕಾರ್ಖಾನೆಗೆ ಯುಪಿಎ ಸರಕಾರ 2013ರಲ್ಲಿಯೇ ಬಳ್ಳಾರಿಯಲ್ಲಿ 380 ಎಕರೆ ಗಣಿ ಪ್ರದೇಶವನ್ನು ಒದಗಿಸಿತ್ತು. ಆದರೆ ನಿಮ್ಮ ಸರ್ಕಾರ ಆ ಗಣಿ ಪ್ರದೇಶದ ಉಪಯೋಗವನ್ನೇ ಮಾಡದೇ, ಈಗ ಈ ಕಾರ್ಖಾನೆಗೆ ಶಾಶ್ವತವಾಗಿ ಬೀಗ ಹಾಕಿದ್ದು ಯಾಕೆ  ಎಂದು ಉತ್ತರಿಸುವಂತೆ ಒತ್ತಾಯಿಸಿದ್ದಾರೆ.

ಕಳೆದ ಚುನಾವಣೆಯ ವೇಳೆ ದೇಶದ ಗೃಹ ಮಂತ್ರಿ “ಅಮಿತ್ ಶಾ” ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶಿವಮೊಗ್ಗ ಜಿಲ್ಲೆಯಲ್ಲಿ 500 ಕೋಟಿ ವೆಚ್ಚದ ಅಡಿಕೆ ಸಂಶೋಧನಾ ಕೇಂದ್ರ ರಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೂ ಅದಕ್ಕೆ ೫ ಪೈಸೆ ಸಹ ನೀಡಿಲ್ಲ. ಆತ್ಮನಿರ್ಭರ್ ಭಾರತದ ಹೆಸರಲ್ಲಿ ಪ್ರಚಾರ ಪಡೆಯುವ ತಾವು ನಮ್ಮ ದೇಶದಲ್ಲಿ ಬೆಳೆಸುವ ಉತ್ಕೃಷ್ಟ ದರ್ಜೆಯ ಅಡಿಕೆಗೆ ಪ್ರೋತ್ಸಾಹ ನೀಡದೇ, ಹೊರ ದೇಶದಿಂದ ಅಮದಾಗುವ ಅಡಿಕೆ ಮೇಲಿದ್ದ ಆಮದು ಸುಂಕವನ್ನು 110% ನಿಂದ ಕೇವಲ 10% ಇಳಿಸಿ ದೇಶೀ ಅಡಿಕೆಯ ಮಾರುಕಟ್ಟೆಯನ್ನು ಭಸ್ಮ ಮಾಡಿದ್ದು ಏಕೆ? ಇಡೀ ಮಲೆನಾಡು ಪ್ರದೇಶದಲ್ಲಿ ಅಡಿಕೆ ಎಲೆ ಚುಕ್ಕೆ ರೋಗಕ್ಕೆ ತುತ್ತಾಗಿದ್ದು,  ನಿಮ್ಮ ಡಬಲ್ ಇಂಜಿನ್ ಸರ್ಕಾರ ಔಷದ ಕಂಡು ಹಿಡಿಯಲು ಕ್ರಮ ಕೈಗೊಳ್ಳಲು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ – ಇಲ್ಲಿ ಯಾರೂ ಅನಾವಶ್ಯಕವಾಗಿ ಹಾಗೂ ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ರಾಜಕೀಯ ಮಾಡಬಾರದು” ಎಂದು ನೀವು ಇಂದು ಘೋಷಿಸಿ, ಮಹಾರಾಷ್ಟ್ರದ ಬಿಜೆಪಿ ಶಾಸಕರಿಗೆ ಪಾಠ ಹೇಳಬಲ್ಲಿರಾ? ಎಂದು ಕೇಳಿದ್ದಾರೆ.

ಚುನಾವಣಾ ಸಮಯದಲ್ಲಿ ಕರ್ನಾಟಕದ ಸ್ಥಳೀಯ ನಾಯಕತ್ವದ ಕೊರತೆ ಮತ್ತು ವೈಫಲ್ಯವನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿರವರು, ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡಿ ಸುಳ್ಳು ಮಾಹಿತಿಗಳ ಮುಖಾಂತರ ಜನಸಾಮಾನ್ಯರ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಇಲ್ಲಿಯವರೆಗೆ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳಿಗೆ, ಭ್ರಷ್ಟಾಚಾರಗಳಿಗೆ, ಆಡಳಿತ ಯಂತ್ರದ ಕುಸಿತಕ್ಕೆ, ಉದ್ಯೋಗದ ಸಮಸ್ಯೆಗೆ, ಬೆಲೆ ಏರಿಕೆಗೆ ಮತ್ತು ಹಗರಣಗಳ ಕುರಿತ ಜನರ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲಾ ಪ್ರಶ್ನೆಗಳಿಗೆ ಪ್ರಧಾನ ಮಂತ್ರಿಯವರು ಉತ್ತರಿಸಲೇಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

Tags: Congress PartyRandeep Surjewalaನರೇಂದ್ರ ಮೋದಿಬಿಜೆಪಿ
Previous Post

HDKUMARASWAMI | ಸುಗ್ಗನಹಳ್ಳಿ ಸೇತುವೆಯ ಬಗ್ಗೆ ಮಾತಾಡಿದ HD ಕುಮಾರಸ್ವಾಮಿ #PRATIDHVANI

Next Post

ಮಾರ್ಚ್ 24 ರಿಂದ 26ರ ವರೆಗೆ ನಮ್ಮ ಬೆಂಗಳೂರು ಹಬ್ಬ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ಮಾರ್ಚ್ 24 ರಿಂದ 26ರ ವರೆಗೆ ನಮ್ಮ ಬೆಂಗಳೂರು ಹಬ್ಬ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada