• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಿಢೀರ್​ ಸುದ್ದಿಗೋಷ್ಠಿ ಕರೆದ ಸಿದ್ದರಾಮಯ್ಯ : ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಕರ್ನಾಟಕ, ರಾಜಕೀಯ
0
ದಿಢೀರ್​ ಸುದ್ದಿಗೋಷ್ಠಿ ಕರೆದ ಸಿದ್ದರಾಮಯ್ಯ : ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ
Share on WhatsAppShare on FacebookShare on Telegram

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿರತರಾಗಿದ್ದಾರೆ. ಪ್ರಜಾಧ್ವನಿ ಯಾತ್ರೆಯ ಮೂಲಕ ರಾಜ್ಯದ ಜನರಿಗೆ ಹತ್ತಿರವಾಗಲು ಕಾಂಗ್ರೆಸ್​ ನಾಯಕರು ಪ್ಲಾನ್​ ಮಾಡ್ತಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ಅಂದಾಜಿಸಿರುವ ಹಿನ್ನೆಲೆಯಲ್ಲಿ ‘ಕೈ ’ ನಾಯಕರ ಹುಮ್ಮಸ್ಸು ಹೆಚ್ಚಾಗಿದೆ. ಈ ಎಲ್ಲದರ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ 11 ಗಂಟೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಳಗಾವಿಯಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ., ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಕೂಡ ಈ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ.

ADVERTISEMENT

ವಿಪಕ್ಷ ನಾಯಕ ಸಿದ್ದರಾಮಯ್ಯ ಈ ರೀತಿ ದಿಢೀರ್​ ಸುದ್ದಿಗೋಷ್ಠಿ ಕರೆದಿರೋದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಲಂಚಾವತಾರ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಮಾತನಾಡುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ 40 ಪರ್ಸೆಂಟ್​ ಕಮಿಷನ್​ ಆರೋಪ ಮಾಡುತ್ತಲೇ ಬಂದಿತ್ತು. ಇದೀಗ ಬಿಜೆಪಿ ಶಾಸಕನ ಪುತ್ರ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರೋದು ವಿಪಕ್ಷಗಳಿಗೆ ಕೇಸರಿ ಪಾಳಯದ ವಿರುದ್ಧ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.

ಇಂದು 11 ಗಂಟೆಗೆ ಸುದ್ದಿಗೋಷ್ಠಿ ಕರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹೊಸ ಬಾಂಬ್​ ಸಿಡಿಸಬಹುದೇ ಎಂಬ ಗುಮಾನಿ ಕೂಡ ಮೂಡಿದೆ. ಹೀಗಾಗಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ನಿನ್ನೆ ಮಾಡಾಳ್​ ವಿರೂಪಾಕ್ಷಪ್ಪ ಪುತ್ರನ ಬಂಧನವಾಗುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ಸಿಎಂ ಬೊಮ್ಮಾಯಿ ಎಲ್ಲದ್ದಕ್ಕೂ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತ ಪೊಲೀಸರೇ ಬಿಜೆಪಿ ಶಾಸಕರ ಲಂಚಾವತಾರವನ್ನು ಸಾಕ್ಷಿ ಸಮೇತ ಬಿಚ್ಚಿದ್ದಾರೆ. ಈಗ ಯಾರು ರಾಜೀನಾಮೆ ಕೊಡ್ತೀರಿ..? ಅಂತಾ ಪ್ರಶ್ನೆ ಮಾಡಿದ್ದರು .

Tags: BelgaumBJPCongress PartyDK ShivakumarLakshmi hebbalkarMadal VirupakshappaSatish Jarakiholisiddaramaiahನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸರ್ಕಾರಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್​, ವಿಪಕ್ಷಗಳು ನಿರಾಳ..

Next Post

ಭ್ರಷ್ಟಾಚಾರದ ವಿರುದ್ಧ ಅಖಾಡಕ್ಕೆ ಇಳಿದ ಲೋಕಾಯುಕ್ತ..! BJP ಶಾಸಕರ ಪುತ್ರನೇ ಅರೆಸ್ಟ್..!.

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
Next Post
ಭ್ರಷ್ಟಾಚಾರದ ವಿರುದ್ಧ ಅಖಾಡಕ್ಕೆ ಇಳಿದ ಲೋಕಾಯುಕ್ತ..! BJP ಶಾಸಕರ ಪುತ್ರನೇ ಅರೆಸ್ಟ್..!.

ಭ್ರಷ್ಟಾಚಾರದ ವಿರುದ್ಧ ಅಖಾಡಕ್ಕೆ ಇಳಿದ ಲೋಕಾಯುಕ್ತ..! BJP ಶಾಸಕರ ಪುತ್ರನೇ ಅರೆಸ್ಟ್..!.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!