• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶಾಸಕ ಮಾಡಾಳ್​ ಪುತ್ರ ಪ್ರಶಾಂತ್​​ ಮಾಡಾಳ್​ಗೆ 14 ದಿನ ನ್ಯಾಯಾಂಗ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಇದೀಗ, ಕರ್ನಾಟಕ
0
ಶಾಸಕ ಮಾಡಾಳ್​ ಪುತ್ರ ಪ್ರಶಾಂತ್​​ ಮಾಡಾಳ್​ಗೆ 14 ದಿನ ನ್ಯಾಯಾಂಗ ಬಂಧನ
Share on WhatsAppShare on FacebookShare on Telegram

ಬೆಂಗಳೂರು : 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಪೊಲೀಸ್​ ಬಲೆಗೆ ಬಿದ್ದು ಬಂಧನಕ್ಕೊಳಗಾಗಿದ್ದ ದಾವಣಗೆರೆ ಜಿಲ್ಲೆ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಪ್ರಶಾಂತ್​ ಸೇರಿದಂತೆ ಐವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿನ್ನೆ ಮಾಡಾಳ್​ ಪ್ರಶಾಂತ್​ರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ಎದುರು ಹಾಜರು ಪಡಿಸಿದ್ದರು.

ADVERTISEMENT

ಬೆಂಗಳೂರು ಜಲಮಂಡಳಿಯಲ್ಲಿ ಚೀಫ್​ ಅಕೌಂಟೆಂಟ್​ ಆಗಿರುವ ಮಾಡಾಳು ಪ್ರಶಾಂತ್​​ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ (ಕೆಎಸ್ ಡಿಎಲ್) (KSDL) ಕೆಮಿಕಲ್ ಪೂರೈಸುವ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗುತ್ತಿಗೆಗದಾರರಿಗೆ ಕಾರ್ಯಾದೇಶ ನೀಡಲು ಲಂಚದ ರೂಪದಲ್ಲಿ ರೂ. 40 ಲಕ್ಷ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.ಕ್ರೆಸೆಂಟ್​ ರಸ್ತೆಯಲ್ಲಿರುವ ಖಾಸಗಿ ಕಚೇರಿಯಲ್ಲಿ ತಂದೆ ಮಾಡಾಳು ವಿರೂಪಾಕ್ಷಪ್ಪ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಪ್ರಶಾಂತ್​ನನ್ನು ಬಂಧಿಸಿದ್ದರು.


ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ಮಾಡಾಳ್​ ಪ್ರಶಾಂತ್​​ರನ್ನು ಜಲಮಂಡಳಿ ಚೀಫ್​ ಅಕೌಂಟೆಂಟ್​ ಆಗಿ ನಿಯೋಜನೆಗೊಳಿಸಲಾಗಿತ್ತು . ಟೆಂಡರ್​ ಕೊಡಿಸಲು 80 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೂಪಾಕ್ಷಪ್ಪ ಪರವಾಗಿ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸಲು ಪ್ರಶಾಂತ್​ ತೆರಳಿದ್ದ ಸಂದರ್ಭದಲ್ಲಿ ಈ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ.


ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್​ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದು ಇದುವರೆಗೂ 7.62 ಕೋಟಿ ರೂಪಾಯಿ ಮೊತ್ತದ ನಗದನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Tags: CorruptionLokayukta PoliceMLA Virupakshappa MadalPrashant Madalಪ್ರಶಾಂತ್​ ಮಾಡಾಳ್​ಭ್ರಷ್ಟಾಚಾರಲೋಕಾಯುಕ್ತ ಪೊಲೀಸ್​ಶಾಸಕ ವಿರೂಪಾಕ್ಷಪ್ಪ ಮಾಡಾಳ್​
Previous Post

ಭಾರತ ಹಿಂದೂ ದೇಶವಲ್ಲ, ನಾವೆಲ್ಲಾ ಭಾರತೀಯರೇ ಹೊರತು ಹಿಂದೂಗಳಲ್ಲ: ಕಮಲಾ ಹಂಪನಾ

Next Post

ಲೋಕಾಯುಕ್ತರ ಇಲಿ ಬೇಟೆ ವೇಳೆ ಸಿಕ್ಕಿದ್ದು ಹುಲಿ ಬೇಟೆ..! ಒಂದೇ ಕಲ್ಲು ಎರಡು ಹಕ್ಕಿ..

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ರಾಜ್ಯದ 9 ಆರ್‌ ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತರ ಇಲಿ ಬೇಟೆ ವೇಳೆ ಸಿಕ್ಕಿದ್ದು ಹುಲಿ ಬೇಟೆ..! ಒಂದೇ ಕಲ್ಲು ಎರಡು ಹಕ್ಕಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada