• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಾಯುಕ್ತ ದಾಳಿ ಪ್ರಕರಣ: ಕರ್ನಾಟಕ ಯಾರ ಎಟಿಎಂ ಆಗಿದೆ? ಎಂದು ಅಮಿತ್ ಶಾರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಕರ್ನಾಟಕ, ರಾಜಕೀಯ
0
ಲೋಕಾಯುಕ್ತ ದಾಳಿ ಪ್ರಕರಣ: ಕರ್ನಾಟಕ ಯಾರ ಎಟಿಎಂ ಆಗಿದೆ? ಎಂದು ಅಮಿತ್ ಶಾರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಮರಾಜ್ಯವಾಗಿದ್ದ ಕರ್ನಾಟಕವನ್ನು ಬಿಜೆಪಿ ಪಕ್ಷವು ಕಮೀಷನ್ ರಾಜ್ಯ ಮಾಡಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಅವರು ಕೇಂದ್ರ ಸಚಿವರಿಗೆ ಟಾಂಗ್ ನೀಡಿದ್ದಾರೆ.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್‌ ಶಾ ಅವರೇ!! ಎಂದು ಕೇಂದ್ರ ಸಚಿವರ ಕಾಲೆಳೆದಿದ್ದಾರೆ ಮಾಜಿ ಮುಖ್ಯಮಂತ್ರಿಗಳು.

ಅಮಿತ್ ಶಾ ಅವರೇ ಈಗ ಹೇಳಿ.. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ  ಸಾಬೂನು ಕಾರ್ಖಾನೆಯನ್ನು 40% ಕಮೀಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ? ಎಂದು ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಕೇಳಿದ್ದಾರೆ.

ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮೀಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದ್ದಾರೆ.

ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ; ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮೀಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮೀಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮೀಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮೀಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು ಎಂದು ತಿಳಿಸಿದ್ದಾರೆ.

Tags: Amit ShahJDS Karnatakaಎಚ್ ಡಿ ಕುಮಾರಸ್ವಾಮಿ
Previous Post

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Next Post

ರಾಜ್ಯದಲ್ಲಿ ತಕ್ಷಣ ವಿಧಾನಸಭಾ ಚುನಾವಣೆಯನ್ನು ಘೋಷಣೆ ಮಾಡಬೇಕು: ಸಿದ್ದರಾಮಯ್ಯ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
Next Post
ಸಿದ್ದರಾಮಯ್ಯ ಅವರನ್ನು ಮುಗಿಸಿ ಎನ್ನುವುದು ಸಿದ್ಧಾಂತವಾ? : ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ತಕ್ಷಣ ವಿಧಾನಸಭಾ ಚುನಾವಣೆಯನ್ನು ಘೋಷಣೆ ಮಾಡಬೇಕು: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada