• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದಲ್ಲಿ ತಕ್ಷಣ ವಿಧಾನಸಭಾ ಚುನಾವಣೆಯನ್ನು ಘೋಷಣೆ ಮಾಡಬೇಕು: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ರಾಜಕೀಯ
0
ಸಿದ್ದರಾಮಯ್ಯ ಅವರನ್ನು ಮುಗಿಸಿ ಎನ್ನುವುದು ಸಿದ್ಧಾಂತವಾ? : ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ಬೆಳಗಾವಿ: ಸಾಂವಿಧಾನಿಕ ಕರ್ತವ್ಯ ಮತ್ತು ಕಾನೂನು-ಕಟ್ಟಳೆಗಳನ್ನು ಮೀರಿ ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಯಂತ್ರದ ದುರುಪಯೋಗ ಮತ್ತು ಗುತ್ತಿಗೆದಾರರಿಂದ ನಡೆಯುತ್ತಿರುವ ಹಣದ ಸುಲಿಗೆಯನ್ನು ತಡೆಯಲು  ತಕ್ಷಣ ವಿಧಾನಸಭೆಯ ಚುನಾವಣಾ ದಿನಾಂಕವನ್ನು ಘೋಷಿಸಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶೀಘ್ರದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆಯಲ್ಲಿ ಚರ್ಚಿಸಿ ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ  ಮನವಿಪತ್ರ ಸಲ್ಲಿಸುತ್ತೇವೆ ಎಂದು ಹೇಳಿದರು.

ಒಂದೆಡೆ ಚುನಾವಣಾ ಪ್ರಚಾರಕ್ಕಾಗಿ  ಜನರ ತೆರಿಗೆ ಹಣ ಮತ್ತು ಸರ್ಕಾರಿ ಯಂತ್ರದ  ದುರುಪಯೋಗ ನಡೆಯುತ್ತಿದೆ.ಕೋಟ್ಯಂತರ ರೂಪಾಯಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸಾಧನೆ ಮತ್ತು ಪೊಳ್ಳು ಭರವಸೆಗಳ ಪುಟಗಟ್ಟಳೆ ಜಾಹೀರಾತು ನೀಡಲಾಗುತ್ತಿದೆ ಇನ್ನೊಂದೆಡೆ ಗುತ್ತಿಗೆದಾರರಿಂದ ಭಾರೀ ಪ್ರಮಾಣದಲ್ಲಿ ಕಮಿಷನ್ ಲೂಟಿ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಮನಿಸಿ ಮಧ್ಯೆ ಪ್ರವೇಶಿಸುವುದು ಅದರ ಸಾಂವಿಧಾನಿಕ ಕರ್ತವ್ಯವಾಗಿದೆ. ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ ಇನ್ನೊಂದು ಆಪರೇಷನ್ ಕಮಲಕ್ಕೆ ರೆಡಿಯಾಗುತ್ತಿದೆ. ಇದಕ್ಕಾಗಿ ಬಿಜೆಪಿಯ ಪ್ರತಿಯೊಬ್ಬ ನಾಯಕರು ಸುಲಿಗೆಗೆ ಇಳಿದಿದ್ದಾರೆ. ಪ್ರತಿಯೊಬ್ಬ ಸಚಿವರಿಗೂ ಟಾರ್ಗೆಟ್ ಕೊಡಲಾಗಿದೆಯಂತೆ. ಲಂಚದ ಪರ್ಸೆಟೇಜ್ 40 ದಾಟಿ 50-60ಕ್ಕೆ ಹೋಗಿದೆ. ಪ್ರತಿಯೊಬ್ಬ ಸಚಿವರ ಕಚೇರಿಯೂ ಸುಲಿಗೆಯ ಕೇಂದ್ರಗಳಾಗುತ್ತಿದೆ. ಇದಕ್ಕಾಗಿ ಅಧಿಕಾರಿಗಳನ್ನು ಕೂಡಾ ದುರ್ಬಳಕೆ ಮಾಡಲಾಗುತ್ತಿದೆ ಎಂದರು.

ಇದಕ್ಕೆ ದಾವಣಗೆರೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮಗ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಹಾಕಿಕೊಂಡಿರುವುದೇ ಸಾಕ್ಷಿ. ಗುತ್ತಿಗೆದಾರರ ಸುಲಿಗೆ ಇದೇ ರೀತಿ ಮುಂದುವರಿದರೆ ಇನ್ನೂ ಕೆಲವು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರೆ ಆಶ್ಚರ್ಯ ಇಲ್ಲ ಎಂದು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಧೂಳೀಪಟವಾಗುವುದು ಖಂಡಿತ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಕಳೆದ ಆರು ತಿಂಗಳಿನಲ್ಲಿ ಯಾವೆಲ್ಲ ಟೆಂಡರ್ ನೀಡಿದ್ದಾರೆ ಅವುಗಳನ್ನು ಪುನರ್ ಪರಿಶೀಲನೆಗೊಳಪಡಿಸಲಾಗುವುದು. ಲಂಚೆ ನೀಡಿ ಟೆಂಡರ್ ಪಡೆದಿದ್ದರೆ ಅವುಗಳನ್ನು ರದ್ದು ಪಡಿಸಲಾಗುವುದು ಆದ್ದರಿಂದ ಕಮಿಷನ್ ಆಧಾರದಲ್ಲಿ ಗುತ್ತಿಗೆ ಪಡೆಯುತ್ತಿರುವ ಗುತ್ತಿಗೆದಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದರು.

ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು ಶಾಸಕರು ಸೇರಿದಂತೆ ಬಿಜೆಪಿಯ ಯಾವ ನಾಯಕನಿಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಉಳಿದಿಲ್ಲ. ಧರ್ಮದ ಹೆಸರಲ್ಲಿ ಹಿಂದು-ಮುಸ್ಲಿಮರನ್ನು ಪರಸ್ಪರ ಕಾದಾಟಕ್ಕೆ ಇಳಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ ಕೂಡಾ ಜನರಿಗೆ ಅರ್ಥವಾಗಿದೆ. ಈಗ ಉಳಿದಿರುವ ಏಕೈಕ ದಾರಿ ದುಡ್ಡಿನ ರಾಜಕಾರಣ ಎಂದು ಆರೋಪಿಸಿದರು.

ದೇಶದ ಪ್ರಧಾನಿ ಹುದ್ದೆ ಪಕ್ಷ ರಾಜಕಾರಣವನ್ನು ಮೀರಿದ್ದಾಗಿದೆ. ನರೇಂದ್ರ ಮೋದಿಯವರು ಎಲ್ಲ ಕಾನೂನು-ಕಟ್ಟಳೆ, ನೀತಿ-ನಿಯಮಾವಳಿಗಳನ್ನು ಮಾತ್ರವಲ್ಲ ಆ ಹುದ್ದೆಯ ಘನತೆ,ಗಾಂಭೀರ್ಯವನ್ನೂ ಹಾಳುಗೆಡವುತ್ತಿದ್ದಾರೆ. ಇತ್ತೀಚಿನ ರಾಜ್ಯ ಪ್ರವಾಸದಲ್ಲಿ ಅವರ ನಡೆ-ನುಡಿ ಒಬ್ಬ ಬೀದಿಬದಿಯ ಚುನಾವಣಾ ಪ್ರಚಾರಕರಂತೆ ಇದೆಯೇ ಹೊರತು ಪ್ರಧಾನಿ ಹುದ್ದೆಯ ಘನತೆಗೆ ತಕ್ಕದ್ದಾಗಿರಲಿಲ್ಲ. ಪ್ರಧಾನಿ ಮತ್ತು ಗೃಹಸಚಿವರ ಪ್ರವಾಸ ಕಾರ್ಯಕ್ರಮಕ್ಕಾಗಿ ಸರ್ಕಾರಿ ಖಜಾನೆಯಲ್ಲಿನ ಜನರ ತೆರಿಗೆ ಹಣ ಖರ್ಚಾಗುತ್ತಿದೆ. ಜನರ ತೆರಿಗೆ ಹಣದಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿರುವುದು ಕಾನೂನು ಉಲ್ಲಂಘನೆ ಮಾತ್ರವಲ್ಲ ಲಜ್ಜೆಗೇಡಿ ನಡವಳಿಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Tags: Congress Partyಸಿದ್ದರಾಮಯ್ಯ
Previous Post

ಲೋಕಾಯುಕ್ತ ದಾಳಿ ಪ್ರಕರಣ: ಕರ್ನಾಟಕ ಯಾರ ಎಟಿಎಂ ಆಗಿದೆ? ಎಂದು ಅಮಿತ್ ಶಾರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

Next Post

ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ: ಎಸ್.ಎ.ರಾಮದಾಸ್

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ: ಎಸ್.ಎ.ರಾಮದಾಸ್

ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ: ಎಸ್.ಎ.ರಾಮದಾಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada