ರಾಜ್ಯ ವಿಧಾನಸಭಾ ಚುನಾವಣೆಯ (Assembly elections) ತಯಾರಿಯಲ್ಲಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (BJP MLA Madal Virupakshappa) ಅವರಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ.ಪುತ್ರ ಮಾಡಾಳ್ ಪ್ರಶಾಂತ್ (Son Madal Prashant) ಮನೆಗೆ ಲೋಕಾಯುಕ್ತ ದಾಳಿಯಾಗಿ ಬಂಧಿಸಿರುವ ಹಿನ್ನೆಲೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (MLA Modal Virupakshappa) ಅವರು ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation from the post of KSDL President) ನೀಡಿದ್ದಾರೆ.
ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ (Channagiri BJP MLA from Davangere) ಮಾಡಾಳ್ ವಿರೂಪಾಕ್ಷಪ್ಪಗೆ ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಮಾಡಾಳ್ ವಿರುಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) (Karnataka Soap and Detergent Factory) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ (Resignation from the presidency) ನೀಡಿದ್ದಾರೆ. ಪುತ್ರ ಮಾಡಾಳ್ ಪ್ರಶಾಂತ್ ಬಂಧನ (Arrest of Madal Prashant) ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದರು. ಅದರಂತೆ ವಿರೂಪಾಕ್ಷಪ್ಪ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.(He sent his resignation letter to the CM’s office) ಈ ಬಗ್ಗೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಹಾಗೂ ಕುಟುಂಬದ ವಿರುದ್ಧ ಮಾಡಿದ ಷಡ್ಯಂತ್ರವಾಗಿದೆ. ಅದಾಗ್ಯೂ ನನ್ನ ಮೇಲೆ ಆಪಾದನೆ ಬಂದಿರುವ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.