• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ರಾಜಕೀಯ
0
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಕೇವಲ ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಗ್ರಹಿಸಿದರು.

ADVERTISEMENT

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್‌ ಅವರು ತಪ್ಪು ಮಾಡದಿದ್ದರೂ ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಸಿಬಿಐ ಗೆ ವಹಿಸಿದ್ದೆ, ಪರೇಶ್‌ ಮೇಸ್ತಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ. ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಎಂದು ಪ್ರಶ್ನಿಸಿದರು.

ಪ್ರತಿ ಕ್ಷೇತ್ರ ಗೆಲ್ಲಲು 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯವಿಲ್ಲ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ  ಎಂದು ಹರಿಹಾಯ್ದರು.

ಗಡಿಪಾರಾಗಿದ್ದ ಶಾ ಅವರಿಂದ ಪಾಠ ಕಲಿಯಬೇಕಾ

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್‌ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕಾ ನಾವು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಂಪತಿ ಗಳಿಸಲು ಮೋದಿ ನಾಟಕ

ಮರ್‌ ಜಾ ಮೋದಿ ಎಂದು ಕಾಂಗ್ರೆಸ್‌ ನವರು ಹೇಳುತ್ತಾರೆ ಎಂದು ಪ್ರಧಾನಿ ಮೋದಿ ಅವರು ಜನರ ಸಿಂಪತಿ ಗಳಿಸಲು ನಾಟಕ ಮಾಡುತ್ತಿದ್ದಾರೆ. ನಿಮ್ಮ ಬಳಿ ಇಂಟಲಿಜೆನ್ಸ್‌ ಇದೆ, ರಾ ಇದೆ, ಹೀಗೆ ಕೂಗಿದವರನ್ನು ಜೈಲಿಗೆ ಹಾಕೋದಲ್ವಾ ಮೋದಿಜಿ? ಇನ್ನು ಯಾಕೆ ಸುಮ್ಮನಿದ್ದೀರಿ? ಎಂದರು.

ನಾವು ಅಧಿಕಾರಕ್ಕೆ ಬಂದ ಮೇಲೆ ಎಲ್ಲಾಕಾಮಗಾರಿಗಳ  ರದ್ದು

ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್‌ ನೀಡಿರುವ ಕಾಮಗಾರಿಗಳನ್ನು ಪುನರ್‌ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ ಎಂದರು.

Tags: Amit ShahBasavaraj BommaiCongress Partyಬಿಜೆಪಿಸಿದ್ದರಾಮಯ್ಯ
Previous Post

BHAVYA NARASIMHAMURTHY | ಗಾಂಧಿ ಕನಸು ಏನಾಯ್ತು , ಹೆಣ್ಣುಮಕ್ಕಳ ರಕ್ಷಣೆ ನೀಡುವಲ್ಲಿ ಬಿಜೆಪಿ ವಿಫಲ..! #PRATIDHVANI

Next Post

ಬಿಜೆಪಿ ಶಾಸಕನ ಪುತ್ರನ ಮೇಲಿನ ಲೋಕಾಯುಕ್ತ ದಾಳಿಗೆ ಬಿಎಸ್​ವೈ ಮೊದಲ ಪ್ರತಿಕ್ರಿಯೆ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಬಿಜೆಪಿ ಶಾಸಕನ ಪುತ್ರನ ಮೇಲಿನ ಲೋಕಾಯುಕ್ತ ದಾಳಿಗೆ ಬಿಎಸ್​ವೈ ಮೊದಲ ಪ್ರತಿಕ್ರಿಯೆ

ಬಿಜೆಪಿ ಶಾಸಕನ ಪುತ್ರನ ಮೇಲಿನ ಲೋಕಾಯುಕ್ತ ದಾಳಿಗೆ ಬಿಎಸ್​ವೈ ಮೊದಲ ಪ್ರತಿಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada