• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇವಿಎಂ, ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ: ಡಾ. ಕೆ ವಿ ರಾಜೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in Top Story, ಇದೀಗ
0
ಇವಿಎಂ, ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ: ಡಾ. ಕೆ ವಿ ರಾಜೇಂದ್ರ
Share on WhatsAppShare on FacebookShare on Telegram

ಇವಿಎಂ, ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಅಧಿಕಾರಿಗಳಿಗೆ ತರಬೇತಿ

ADVERTISEMENT

ಮೈಸೂರು: ಅಧಿಕಾರಿಗಳು ಇವಿಎಂ ವಿವಿಪ್ಯಾಟ್’ಗಳ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ ಕೆ. ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ನೇಮಿತವಾದ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್ ಗಳಿಗೆ ಚುನಾವಣಾ ಕರ್ತವ್ಯ, ಇವಿಎಂ ಹಾಗೂ ವಿವಿಪ್ಯಾಟ್’ಗಳ ನಿರ್ವಹಣೆ ಕುರಿತು ಜಿಲ್ಲಾ ಪಂಚಾಯತ್ನ ದೇವರಾಜ್ ಅರಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಮತ ಚಲಾವಣೆಯ ಬಗ್ಗೆ ತರಬೇತಿ ನೀಡಿ, ಗೊಂದಲವಾಗದ ರೀತಿ ಅರಿವು ಮೂಡಿಸಬೇಕು ಎಂದರು.

ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ಹಾಗೂ ನಿರ್ದೇಶನಗಳ ಬಗ್ಗೆ ಅಧಿಕಾರಿಗಳು ಅರಿವು ಹೊಂದಿರಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ನಿರ್ದೇಶನಗಳನ್ನು ಸರಿಯಾಗಿ ಓದಿಕೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ಚುನಾವಣಾ ಕೆಲಸ ಮಾಡಬೇಕು. ಕರ್ತವ್ಯದಲ್ಲಿ ಯಾವುದೇ ಲೋಪವೆಸಗಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವವಾಗಿದ್ದು, ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಮತಗಟ್ಟೆಗಳ ಸ್ಥಿತಿಗತಿ, ಅಲ್ಲಿನ ಮೂಲಭೂತ ಸೌಕರ್ಯ ಮುಂತಾದ ಅಗತ್ಯ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ವಹಿಸಲು ಮುಂದಾಗಬೇಕು. ಕಾರ್ಯನಿರ್ವಹಣೆಯನ್ನು ಸಹ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಮತದಾನದ ಜಾಗೃತಿ ಕುರಿತಂತೆ ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿತೆ ಕಾರ್ಯಕ್ರಮ ಮೂಲಕ ಜನರಿಗೆ ಅರಿವು ಮೂಡಿಸಬೇಕು. ಈ ಎಲ್ಲಾ ಕಾರ್ಯಕ್ರಮದ ಬಗ್ಗೆ ಮಾಸ್ಟರ್ ಟ್ರೇನರ್ಗಳು ಸೆಕ್ಟರ್ ಅಧಿಕಾರಿಗಳಿಗೆ ಸೂಕ್ತ ಮತ್ತು ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದರು.

ಚುನಾವಣಾ ಸಂದರ್ಭದಲ್ಲಿ ಮತಪಟ್ಟಿಗಳನ್ನು ಪರಿಷ್ಕರಿಸಿ ಯಾವುದೇ ತೊಂದರೆಗಳು ಆಗದಂತೆ ನೋಡಿಕೊಳ್ಳಬೇಕು. ಚುನಾವಣಾ ಆಯೋಗದ ನಿಯಮನುಸಾರವಾಗಿ ಮತ ಚಲಾವಣೆಯ ತರಬೇತಿಯನ್ನು ನೀಡಬೇಕು. ಸಾರ್ವಜನಿಕರ ತರಬೇತಿ ಕಾರ್ಯಕ್ರಮ ಮುಗಿದಮೇಲೆ VVPAT ಗಳನ್ನು ಸಂಬಂಧಿತ ಅಧಿಕಾರಿಗಳು ಸುರಕ್ಷಿತವಾಗಿ ತಾಲ್ಲೂಕು ಮಟ್ಟದ ಸ್ಟ್ರಾಂಗ್ ರೂಮ್ ಗಳಲ್ಲಿರಿಸುವುದು ಸಂಪೂರ್ಣ ನಿಮ್ಮ ಜವಾಬ್ದಾರಿ ಆಗಿರುತ್ತದೆ. VVPAT ಗಳಿಗೆ ಸೂರ್ಯನ ಕಿರಣ ತಾಗದಂತೆ ಜಾಗ್ರತೆ ವಹಿಸಬೇಕು. ಯಾವುದೇ ರೀತಿ ಲೋಪ ದೋಷಗಳು ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಮಾರ್ಚ್ 20 ರೊಳಗೆ ಸಂಬಂಧಿತ ಅಧಿಕಾರಿಗಳು ಚುನಾವಣಾ ತರಬೇತಿ ಕಾರ್ಯವನ್ನು ಸಂಪೂರ್ಣ ಗೊಳಿಸಬೇಕು, ಚುನಾವಣಾ ತರಬೇತಿ ಮುಗಿದ ನಂತರ ಪ್ರತಿದಿನ ಸ್ಪ್ರೆಡ್ ಶೀಟ್’ನಲ್ಲಿ ಮಾಹಿತಿ ದಾಖಲಿಸಬೇಕು. ಮೈಸೂರು ವಿಭಾಗದಲ್ಲಿ ಪ್ರಚಾರವನ್ನು ನಡೆಸಿ ಸಾರ್ವಜಕರಿಗೆ ಮತ ಗಟ್ಟೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ರಾವಂದೂರು ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕರಾದ ರವಿ ಅವರು ಇವಿಎಂ ವಿವಿಪ್ಯಾಟ್ ನಿರ್ವಹಣೆ ಬಗ್ಗೆ ಅಧಿಕಾರಿಗಳಿಗೆ ವಿವರವಾಗಿ ತರಬೇತಿ ನೀಡಿದರು.

ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಮೈಸೂರು ಉಪ ವಿಭಾಗಾಧಿಕಾರಿ ಕಮಲಾಭಾಯಿ, ಹುಣಸೂರು ಉಪ ವಿಭಾಗ ಅಧಿಕಾರಿ ರುಚಿ ಬಿಂದಲ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್ ಸೇರಿದಂತೆ ವಿಧಾನಸಭೆ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್ಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

Tags: dr k v rajendraMysoreVVPAT
Previous Post

ಸಣ್ಣ ಪ್ರಾಯದಲ್ಲಿ ಹಾರ್ಟ್‌ ಅಟ್ಯಾಕ್: ತೆಲಂಗಾಣದಲ್ಲಿ 10 ದಿನಗಳಲ್ಲಿ 5 ಪ್ರಕರಣ ವರದಿ.!

Next Post

ಎಸ್.ಎಂ ಕೃಷ್ಣ ನಿವಾಸಕ್ಕೆ ಸಂಸದೆ ಸುಮಲತಾ ವಿಸಿಟ್​ : ಬಿಜೆಪಿ ಸೇರ್ಪಡೆ ಕುರಿತಂತೆ ಪ್ರತಿಕ್ರಿಯೆ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

October 28, 2025
Next Post
MP Sumalatha Visits SM Krishna's Residence: Reaction on BJP Joining

ಎಸ್.ಎಂ ಕೃಷ್ಣ ನಿವಾಸಕ್ಕೆ ಸಂಸದೆ ಸುಮಲತಾ ವಿಸಿಟ್​ : ಬಿಜೆಪಿ ಸೇರ್ಪಡೆ ಕುರಿತಂತೆ ಪ್ರತಿಕ್ರಿಯೆ

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!