• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಎಎಪಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಕರ್ನಾಟಕ, ರಾಜಕೀಯ
0
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಎಎಪಿ ಆಗ್ರಹ
Share on WhatsAppShare on FacebookShare on Telegram

ಬೆಂಗಳೂರು: ಶಾಸಕರೊಬ್ಬರ ಮನೆಯಲ್ಲಿ ಕಂತೆ- ಕಂತೆ ನೋಟುಗಳು ಸಿಕ್ಕ ನಂತರವೂ ಕಾನೂನು ಕ್ರಮ ಜರುಗಿಸಲು ಆಗದೆ, ನಿಸ್ಸಾಹಕರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವ ಮೂಲಕ ರಾಜಕೀಯ ನೈತಿಕತೆಯನ್ನು ಮೆರೆಯಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಚುನಾವಣೆಯ ಹೊಸ್ತಿಲಿನಲ್ಲಿರುವಾಗಲೇ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪರ ಮಗ ಗುತ್ತಿಗೆದಾರರೊಬ್ಬರಿಂದ ಕಂತೆ- ಕಂತೆ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ದಾಳಿಯ ಸಂದರ್ಭದಲ್ಲಿ ಸಿಕ್ಕ ನಗದು ಹಣದ ದೃಶ್ಯಕ್ಕೆ ಜನ ಸಾಮಾನ್ಯರು ಬೆಚ್ಚಿಬಿದ್ದಿದ್ದಾರೆ. ಗುತ್ತಿಗೆದಾರರ ಸಂಘ ಆರಂಭದಿಂದಲೂ ಮಾಡಿಕೊಂಡು ಬಂದ 40% ಆರೋಪಕ್ಕೆ ಪ್ರಬಲ ಸಾಕ್ಷಿಯೊಂದು ಸಿಕ್ಕಂತಾಗಿದೆ ಎಂದರು.

ಆರೋಪಿ ಸ್ಥಾನದಲ್ಲಿ ನಿಂತು, ಇಷ್ಟೊತ್ತಿಗೆ ಜೈಲು ಪಾಲಾಗಬೇಕಿದ್ದ ಮಾಡಾಳು ವಿರೂಪಾಕ್ಷಪ್ಪಗೆ ರಾಜಾಥ್ಯಿತ್ಯ ನೀಡಲಾಗುತ್ತಿದೆ. ಆತ ಸಾಕ್ಷಿಗಳನ್ನು ಸಂಬಾಳಿಸಿಕೊಂಡು, ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿಗೆ ಸಿಕ್ಕಿರುವ ಪವಿತ್ರ ಅಧಿಕಾರ ಬಳಕೆಯಾಗುತ್ತಿದೆ. ಇದು ನಾಚಿಕೆಗೇಡು ಮಾತ್ರವಲ್ಲ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿಸ್ಸಾಹಯಕತೆಯನ್ನು ತೋರಿಸುತ್ತಿದೆ ಎಂದು ಆರೋಪಿಸಿದರು. 

ಗುತ್ತಿಗೆದಾರರ ಸಂಘದ ಅಧ್ಯಕ್ಷ, ಹಿರಿಯ ಜೀವ ಕೆಂಪಣ್ಣ, ರಾಜ್ಯ ಸರಕಾರದ ಭ್ರಷ್ಟಾಚಾರವನ್ನು ಬಯಲಿಗೆ ಎಳೆದರು. 40% ಕಮಿಷನ್ ಕೊಡದೆ ಯಾವ ಕೆಲಸಗಳೂ ಆಗುತ್ತಿಲ್ಲ ಎಂದು ದೂರಿದರು. ಈ ಸಮಯದಲ್ಲಿ ಖುದ್ದು ಮುಖ್ಯಮಂತ್ರಿ, ಇವೆಲ್ಲಾ ಬರೀ ಆರೋಪಗಳು, ಸಾಕ್ಷಿ ಕೊಡಿ ಎಂದರು. ಸರಕಾರದ ಎದುರು ಜನರ ತೆರಿಗೆ ಕಳ್ಳತನವಾಗುತ್ತಿದೆ ಎಂದು ಆರೋಪ ಮುಂದಿಟ್ಟ ಕೆಂಪಣ್ಣ ಅವರನ್ನು ಸರಕಾರಿ ರಜಾ ದಿನ ನೋಡಿಕೊಂಡು ಬಂಧಿಸಿದರು. ಈ ಪ್ರಕರಣದಲ್ಲಿ ಅಗತ್ಯ ಮೀರಿ ಅಧಿಕಾರ ದುರ್ಬಳಕೆ ಮಾಡಿಕೊಂಡಿತು ಸರಕಾರ ಎಂದರು. 

ಆದರೆ ಇದೀಗ, “ತಮ್ಮ ಶಾಸಕನ ಲಂಚಾವತಾರ ಸಾಕ್ಷಿ ಸಮೇತ ಬಯಲಿಗೆ ಬಂದಾಗ ಮುಖ್ಯಮಂತ್ರಿಗಳು ತಮ್ಮ ಪದವಿಯನ್ನು ಮರೆತಂತೆ ವರ್ತಿಸುತ್ತಿದ್ದಾರೆ. ಆರೋಪಿಯ ರಕ್ಷಣೆಗೆ ನಿಂತಿದ್ದಾರೆ. ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ಕರ್ನಾಟಕ ಈ ಕೆಳಕಂಡ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದೆ. ಇವುಗಳು 24 ಗಂಟೆಯೊಳಗೆ ಈಡೇರದೆ ಹೋದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಬುಧವಾರ ಪಕ್ಷ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಹಕ್ಕೊತ್ತಾಯಗಳು

ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲು ನಿಸ್ಸಾಹಯಕರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಮಾಡಾಳ್ ವಿರೂಪಾಕ್ಷಪ್ಪನನ್ನು ಕೂಡಲೇ ಬಂಧಿಸಬೇಕು. ರಾಜ್ಯದ ಎಲ್ಲಾ ಶಾಸಕರು ಹಾಗೂ ಮಂತ್ರಿಗಳ ಗೃಹ ಹಾಗೂ ಕಚೇರಿಯನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags: AAPBasavaraj BommaiMadal Virupakshappaಬಿಜೆಪಿಮೋಹನ್ ದಾಸರಿ
Previous Post

ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ತಾತ್ಕಾಲಿಕ ರಿಲೀಫ್​: ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

Next Post

CIVIL WORKERS | ಪೌರ ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿಯೇ ಇರಬೇಕಾ.. ನಮ್ಮನ್ನು ಎಲ್ಲರಂತೆ ಬದುಕಲು ಬಿಡಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
CIVIL WORKERS | ಪೌರ ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿಯೇ ಇರಬೇಕಾ.. ನಮ್ಮನ್ನು ಎಲ್ಲರಂತೆ ಬದುಕಲು ಬಿಡಿ

CIVIL WORKERS | ಪೌರ ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರಾಗಿಯೇ ಇರಬೇಕಾ.. ನಮ್ಮನ್ನು ಎಲ್ಲರಂತೆ ಬದುಕಲು ಬಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada