ಮುಲ್ಕಿ (ದಕ್ಷಿಣ ಕನ್ನಡ): ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮುಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ದಂಪತಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕೋಳಿ ಕಾಲುಗುಡ್ಡೆ ನಿವಾಸಿಗಳಾದ ಅಕ್ಬರ್ ಬಾಷಾ (60), ಅವರ ಪತ್ನಿ ಖತೀಜಾಬಿ (46) ಎಂದು ಗುರುತಿಸಲಾಗಿದೆ.
ಇವರು ಪಾಸ್ ಪೋರ್ಟ್ ಮಾಡಿಸಲು ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಇವರು ಪ್ರಯಾಣಿಸುತ್ತಿದ್ದ ಸ್ಕೂಟರ್ ಆಯತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದಿದ್ದೆ. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೈಕಂಪಾಡಿಯ ಉತ್ತರ ವಲಯದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.